ನಿಮ್ಮ ಹೆಂಡತಿಗೆ ಗಿಫ್ಟ್ ನೀಡಲು ಈ ಟಿವಿಎಸ್ ಸ್ಕೂಟರ್‌ಗಳು ಉತ್ತಮ.. ನಿಮ್ಮ ಆಯ್ಕೆ ಯಾವುದು?

ಭಾರತದ ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಟಿವಿಎಸ್ ಮೋಟಾರ್ (TVS Motor) ಗುರುತಿಸಿಕೊಂಡಿದೆ. ದೇಶೀಯ
ಮಾರುಕಟ್ಟೆಯಲ್ಲಿ ಕಂಪನಿಯು ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಇವು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ನಿಮ್ಮ ಹೆಂಡತಿಗೆ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಉಡುಗೊರೆಯಾಗಿ ನೀಡಬೇಕು ಅಂದುಕೊಂಡರೆ.. ಟಿವಿಎಸ್ ಕಂಪನಿ ಸ್ಕೂಟರ್‌ಗಳು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಮೊದಲಿಗೆ ಟಿವಿಎಸ್ ಜೂಪಿಟರ್ 125 (TVS Jupiter 125) ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ ರೂ.89,155 ದಿಂದ ರೂ.99,805 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

Best Tvs Scooters Gift For Your Wife Jupiter Scooty Pep Plus NTORQ Scooty Zest

ಈ ಟಿವಿಎಸ್ ಜೂಪಿಟರ್ ಸ್ಕೂಟರ್ 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 8.2 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10.5 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ಟಿವಿಎಸ್ ಸ್ಕೂಟಿ ಪೆಪ್ ಪ್ಲಸ್ (TVS Scooty Pep Plus) ಮಹಿಳೆಯರ ನೆಚ್ಚಿನ ಸ್ಕೂಟರ್ ಆಗಿದೆ. ಇದು ರೂ.63,060 ದಿಂದ ರೂ.66,160 (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. 87.8 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 5.43 ಪಿಎಸ್ ಶಕ್ತಿ ಹಾಗೂ 6.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Tvs Scooters Gift For Your Wife Jupiter Scooty Pep Plus NTORQ Scooty Zest

ನೂತನ ಸ್ಕೂಟಿ ಪೆಪ್ ಪ್ಲಸ್ ಸ್ಕೂಟರ್ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹ್ಯಾಲೊಜೆನ್ ಹೆಡ್‌ಲೈಟ್, ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳು (ಡಿಆರ್‌ಎಲ್‌), ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ ಸ್ಟ್ಯಾಂಡ್ ಅಲಾರಾಂನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದ್ದು, 10-ಇಂಚಿನ ಅಲಾಯ್ ವೀಲ್‌ಗಳು ಕೂಡ ಇದೆ.

ಟಿವಿಎಸ್ ಎನ್‌‌ಟಾರ್ಕ್ 125 (TVS NTORQ 125) ಕುರಿತಂತೆ ಹೇಳುವುದಾದರೆ, ಇದು ರೂ.87,271 ದಿಂದ ರೂ.1.08 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 9.38 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Tvs Scooters Gift For Your Wife Jupiter Scooty Pep Plus NTORQ Scooty Zest

ಟಿವಿಎಸ್ ಸ್ಕೂಟಿ ಜೆಸ್ಟ್ (TVS Scooty Zest) ಅತ್ಯಂತ ಕೈಗೆಟುಕುವ ದರದಲ್ಲಿ ಲಭ್ಯವಿದೆ. ರೂ.72,594 ದಿಂದ ರೂ.72,996 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಇದು 109.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.8 ಪಿಎಸ್ ಶಕ್ತಿ ಹಾಗೂ 8.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, July 20, 2024, 17:00 [IST]
English summary
Best tvs scooters for gift for your wife jupiter scooty pep plus ntorq scooty zest
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+