70 ಸಾವಿರದೊಳಗೆ ಸಿಗುವ ಪ್ರಖ್ಯಾತ ಬೈಕ್‌ಗಳಿವು.. 70 ಕಿ.ಮೀ ಮೈಲೇಜ್!
ದೇಶದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ದಿನನಿತ್ಯದ ಬಳಕೆಗಾಗಿ ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ಆದಾಗ್ಯೂ ಹಲವರಲ್ಲಿ ಯಾವ ಮೋಟಾರ್‌ಸೈಕಲ್ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ.. ಮೈಲೇಜ್ ಎಷ್ಟು ಎಂಬ ಗೊಂದಲವಿರುತ್ತದೆ. ನೀವು ರೂ.70 ಸಾವಿರ ಎಕ್ಸ್ ಶೋರೂಂ ಬೆಲೆಗೆ ಉತ್ತಮ ಮೈಲೇಜ್ ನೀಡುವ ಹೊಸ ಬೈಕ್ ಖರೀದಿಸಲು ಆಲೋಚಿಸಿದ್ದರೆ.. ಟಿವಿಎಸ್ ಸ್ಪೋರ್ಟ್, ಹೋಂಡಾ ಶೈನ್ 100 ಹಾಗೂ ಬಜಾಜ್ ಪ್ಲಾಟಿನಾ 100 ಮೋಟಾರ್‌ಸೈಕಲ್‌ಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ಈ ಬೈಕ್‌ಗಳ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಟಿವಿಎಸ್ ಸ್ಪೋರ್ಟ್ (TVS Sport) ಬೈಕ್ ಬಗ್ಗೆ ಮಾತನಾಡೋಣ. ಇದು ರೂ.67,320 ದಿಂದ ರೂ.72,033 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 109.7 ಸಿಸಿ, ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.19 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 8.7 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ನೂತನ ಟಿವಿಎಸ್ ಸ್ಪೋರ್ಟ್ ಮೋಟಾರ್‌ಸೈಕಲ್ 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್‌ಸ್ಟ್ರುಮೆಂಟ್ ಪ್ಯಾನೆಲ್, ಬಲ್ಬ್ ಸ್ಟೈಲ್ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್, ಸೆಲ್ಫ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಬೈಕ್ 112 ಕೆಜಿ ತೂಕವಿದ್ದು, 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ.
ಹೋಂಡಾ ಶೈನ್ 100 (Honda Shine 100) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.66,600 ಎಕ್ಸ್ ಶೋರೂಂ ದರವನ್ನು ಹೊಂದಿದೆ. 98.98 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7.38 ಪಿಎಸ್ ಗರಿಷ್ಠ ಶಕ್ತಿ ಮತ್ತು 8.05 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಈ ಹೋಂಡಾ ಶೈನ್ 100 68, ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸ್ಟಾರ್ಟರ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳಿವೆ. ಬ್ಲ್ಯಾಕ್ ವಿತ್ ರೆಡ್ ಹಾಗೂ ಬ್ಲ್ಯಾಕ್ ವಿತ್ ಗೋಲ್ಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ.
ಬಜಾಜ್ ಪ್ಲಾಟಿನಾ 100 (Bajaj Platina 100) ಬಗ್ಗೆ ಮಾತನಾಡುವುದಾದರೆ, ನೂತನ ಮೋಟಾರ್‌ಸೈಕಲ್ ರೂ.68,742 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 102 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.9 ಪಿಎಸ್ ಶಕ್ತಿ ಮತ್ತು 8.3 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಹೊಚ್ಚ ಹೊಸ ಬಜಾಜ್ ಪ್ಲಾಟಿನಾ 100 ಬೈಕ್ 70 ಕೆಎಂಪಿಎಲ್ ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಬ್ಲ್ಯಾಕ್ & ರೆಡ್, ಬ್ಲ್ಯಾಕ್ & ಸಿಲ್ವರ್, ಬ್ಲ್ಯಾಕ್ & ಗೋಲ್ಡ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಹ್ಯಾಲೊಜೆನ್ ಹೆಡ್‌ಲೈಟ್, ಸಿಂಗಲ್ ಪೀಸ್ ಸೀಟ್, ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ. ಸವಾರರಿಗೆ ರಕ್ಷಣೆ ಒದಗಿಸಲು ಡ್ರಮ್ ಬ್ರೇಕ್‌ನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications