ರಿವರ್ಸ್ ಗೇರ್ ಹೊಂದಿರುವ BMW ಸಿಇ 02 ಇ-ಸ್ಕೂಟರ್ ಬಿಡುಗಡೆ.. 108 Km ರೇಂಜ್, ಬೆಲೆ ಇಷ್ಟೇನಾ?

ಜರ್ಮನಿ ಮೂಲದ ಬಿಎಂಡಬ್ಲ್ಯೂ (BMW), ಪ್ರೀಮಿಯಂ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಅದರ ಅಂಗಸಂಸ್ಥೆಯಾಗಿರುವ ಬಿಎಂಡಬ್ಲ್ಯೂ ಮೊಟೊರಾಡ್ (BMW Motorrad), ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಐಷಾರಾಮಿ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಇಂದು (ಅಕ್ಟೋಬರ್ 1) ಹೊಚ್ಚ ಹೊಸ ಸಿಇ 02 (CE 02) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಬನ್ನಿ.. ಈ ನೂತನ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ಬೆಲೆ: ನೂತನ ಬಿಎಂಡಬ್ಲ್ಯೂ ಸಿಇ 02 (BMW CE 02) ಎಲೆಕ್ಟ್ರಿಕ್ ಸ್ಕೂಟರ್, ಸ್ವಲ್ಪ ದುಬಾರಿ ಬೆಲೆಯನ್ನು ಹೊಂದಿದೆ. ರೂ.4.5 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಮಾರಾಟಕ್ಕೆ ಬಂದಿದೆ. ಕಾಸ್ಮಿಕ್ ಬ್ಲ್ಯಾಕ್ ಮತ್ತು ಕಾಸ್ಮಿಕ್ ಬ್ಲ್ಯಾಕ್ 2 ಎಂಬ ಎರಡು ಆಕರ್ಷಕ ಬಣ್ಣಗಳ (ಕಲರ್) ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.

Bmw CE 02 Electric Scooter Launched In india Rs 4 5 Lakh Price 108 Km Range details

ವಿನ್ಯಾಸ: ಈ ಬಿಎಂಡಬ್ಲ್ಯೂ ಸಿಇ 02 ಎಲೆಕ್ಟ್ರಿಕ್ ಸ್ಕೂಟರ್ ಬಹಳಷ್ಟು ಅತ್ಯಾಧುನಿಕ ವಿನ್ಯಾಸವನ್ನು (ಡಿಸೈನ್) ಒಳಗೊಂಡಿದೆ. ರೆಕ್ಟ್ಯಾಂಗುಲರ್ (ಆಯತಾಕಾರದ) ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು, ವಿಂಡ್‌ಸ್ಕ್ರೀನ್, 14-ಇಂಚಿನ ವೀಲ್‌ಗಳು, 120/80-ಆರ್14 & 150/70-ಆರ್14 ಅಳತೆಯ ಟೈರ್‌ಗಳು, ಫ್ಲಾಟ್ ಸೀಟ್‌, ಎಲ್ಇಡಿ ಲೈಟಿಂಗ್ ಸೆಟಪ್‌ & 2-ಗ್ರಾಬ್ ಹ್ಯಾಂಡಲ್‌ಗಳನ್ನು ಪಡೆದಿದೆ.

ಕಾರ್ಯಕ್ಷಮತೆ: ನೂತನ ಎಲೆಕ್ಟ್ರಿಕ್ ಸ್ಕೂಟರ್, 3.92 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ ಬರೋಬ್ಬರಿ 108 ಕಿಲೋಮೀಟರ್ ಕ್ರಮಿಸುತ್ತದೆ. ಇದರ ಎಲೆಕ್ಟ್ರಿಕ್ ಮೋಟಾರ್ 14.7 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 55 ಎನ್ಎಂ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

Bmw CE 02 Electric Scooter Launched In india Rs 4 5 Lakh Price 108 Km Range details

ರೈಡಿಂಗ್ ಮೋಡ್ & ಟಾಪ್ ಸ್ಪೀಡ್: ಈ ಬಿಎಂಡಬ್ಲ್ಯೂ ಸಿಇ 02 ಎಲೆಕ್ಟ್ರಿಕ್ ಸ್ಕೂಟರ್ ಫ್ಲೋ, ಸರ್ಫ್ ಹಾಗೂ ಫ್ಲ್ಯಾಶ್ ಎಂಬ 3 ರೈಡಿಂಗ್ ಮೋಡ್‌ ಆಯ್ಕೆಯನ್ನು ಹೊಂದಿದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 3 ಸೆಕೆಂಡುಗಳಲ್ಲಿ 0 ರಿಂದ 50 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಜೊತೆಗೆ 1,350 ಎಂಎಂ ಉದ್ದದ ವೀಲ್‌ಬೇಸ್‌ನ್ನು ಪಡೆದಿದೆ.

ವೈಶಿಷ್ಟ್ಯಗಳು: ಹೊಸ ಬಿಎಂಡಬ್ಲ್ಯೂ ಸಿಇ 02 (BMW CE 02) ಎಲೆಕ್ಟ್ರಿಕ್ ಸ್ಕೂಟರ್ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 3.5-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌‍ಬಿ-ಸಿ ಚಾರ್ಜಿಂಗ್ ಸಾಕೆಟ್ ಹಾಗೂ ರಿವರ್ಸ್ ಗೇರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ.

Bmw CE 02 Electric Scooter Launched In india Rs 4 5 Lakh Price 108 Km Range details

ಸಸ್ಪೆಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್: ಈ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗ (ಫ್ರಂಟ್) ಗೋಲ್ಡ್ ಫಿನಿಷ್ಡ್ ಅಪ್‌ಸೈಡ್‌-ಡೌನ್ ಫೋರ್ಕ್‌ಗಳು, ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಜೊತೆಗೆ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಎಸ್‌ಸಿ (ಆಟೋಮೆಟಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಆರ್‌ಎಸ್‌ಸಿ (ರಿಕ್ಯುಪರೇಶನ್ ಸ್ಟೆಬಿಲಿಟಿ ಕಂಟ್ರೋಲ್) ಹೆಸರಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, October 1, 2024, 14:38 [IST]
English summary
Bmw ce 02 electric scooter launched in india rs 4 5 lakh price 108 km range details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+