BSA: ನಾಡಿದ್ದು ಬಹುನಿರೀಕ್ಷಿತ ಬಿಎಸ್ಎ ಗೋಲ್ಡ್ ಸ್ಟಾರ್ 650 ಬೈಕ್ ಬಿಡುಗಡೆ.. ವಿಶೇಷತೆ ಏನು, ಬೆಲೆ ಎಷ್ಟಿರಲಿದೆ?
ಜನಪ್ರಿಯ ಬ್ರಿಟಿಷ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಬಿಎಸ್ಎ (BSA) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಗಸ್ಟ್ 15 (ಗುರುವಾರ) ಹೊಚ್ಚ ಹೊಸ ಗೋಲ್ಡ್ ಸ್ಟಾರ್ 650 (Gold Star 650) ಮೋಟಾರ್‌ಸೈಕಲ್‌ನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಿದೆ. ಅದಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದೆ. ನೂತನ ಬೈಕ್, ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 (Royal Enfield Interceptor 650) ಮೋಟಾರ್‌ಸೈಕಲ್‌ಗೆ ಪ್ರಬಲವಾದ ಸ್ಪರ್ಧೆಯೊಡ್ಡಲಿದೆ ಎಂದು ಅಂದಾಜಿಸಲಾಗಿದೆ. ಬನ್ನಿ.. ಬಹುನಿರೀಕ್ಷಿತ 'ಗೋಲ್ಡ್ ಸ್ಟಾರ್ 650' ವಿಶೇಷತೆ ಏನು.. ಬೆಲೆ ಎಷ್ಟು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರ ತಿಳಿಯೋಣ.
ವಿನ್ಯಾಸ (Design): ಹೊಸ ಬಿಎಸ್ಎ ಗೋಲ್ಡ್ ಸ್ಟಾರ್ 650 (BSA Gold Star 650) ಬೈಕ್ ಯುವ ಗ್ರಾಹಕರನ್ನು ಸೆಳೆಯುವ ವಿನ್ಯಾಸವನ್ನು ಹೊಂದಿದೆ. ಮೆಟಲ್ ಟ್ಯಾಂಕ್, ರೌಂಡ್ ಹ್ಯಾಲೊಜೆನ್ ಹೆಡ್‌ಲ್ಯಾಂಪ್, ವೈಡ್ ಹ್ಯಾಂಡಲ್‌ಬಾರ್, ಸಿಂಗಲ್ ಪೀಸ್ ಸೀಟ್ ಮತ್ತು ಕರ್ವ್ಡ್ ಫೆಂಡರ್‌ಗಳನ್ನು ಒಳಗೊಂಡಿದೆ.

ವೈಶಿಷ್ಟ್ಯಗಳು (Features): ನೂತನ ಗೋಲ್ಡ್ ಸ್ಟಾರ್ 650 ಮೋಟಾರ್‌ಸೈಕಲ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಟ್ವಿನ್ ಪಾಡ್ ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಸ್ಲಿಪ್ಪರ್ ಕ್ಲಚ್ ಹಾಗೂ ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.
ಕಾರ್ಯಕ್ಷಮತೆ (Performance): ಈ ಬೈಕ್ ಶಕ್ತಿಯುತ ಪವರ್‌ಟ್ರೇನ್ ಒಳಗೊಂಡಿದೆ. 652 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 45 ಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 55 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಡುಯಲ್ ಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಹ್ಯಾಂಡಲ್‌ಬಾರ್‌ನ ಎರಡು ತುದಿಯಲ್ಲಿ ಡಿಸ್ಕ್ ಬ್ರೇಕ್‌ನ್ನು ಹೊಂದಿದೆ. ಮುಂದೆ 18-ಇಂಚು ಮತ್ತು ಹಿಂದೆ 17-ಇಂಚಿನ ಟೈರ್‌ಗಳನ್ನು ಒಳಗೊಂಡಿದೆ.
ಬೆಲೆ & ಪ್ರತಿಸ್ಪರ್ಧಿ ಬೈಕ್ (Price & competitor bike): ಹೊಚ್ಚ ಹೊಸ ಬಿಎಸ್ಎ ಗೋಲ್ಡ್ ಸ್ಟಾರ್ 650 ಮೋಟಾರ್‌ಸೈಕಲ್ ರೂ.3.50 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯಬಹುದು ಎಂದು ವಿಶ್ಲೇಷಿಸಲಾಗಿದೆ. ಈ ಬೈಕ್‌ಗೆ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ದೊಡ್ಡ ಎದುರಾಳಿಯಾಗಲಿದೆ.
ನೂತನ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮೋಟಾರ್‌ಸೈಕಲ್ ರೂ.3.03 ಲಕ್ಷದಿಂದ ರೂ.3.31 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 648 ಸಿಸಿ ಎಂಜಿನ್ ಒಳಗೊಂಡಿದ್ದು, 47 ಪಿಎಸ್ ಗರಿಷ್ಠ ಶಕ್ತಿ ಮತ್ತು 52 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 25 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications