ಬಜೆಟ್ ಬೆಲೆಯ ಬೈಕ್‌ಗಳಿವು.. 70+ Km ಮೈಲೇಜ್, ಹೀರೋ ಸ್ಪ್ಲೆಂಡರ್ To ಟಿವಿಎಸ್ ರೇಡಿಯನ್!

ಪ್ರತಿನಿತ್ಯ ಕಚೇರಿ ಕೆಲಸಕ್ಕೆ ಹೋಗಲು ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ಆದರೆ, ಬಹುತೇಕರಿಗೆ ದಿನನಿತ್ಯದ ಬಳಕೆಗೆ ಯಾವ ಮೋಟಾರ್‌ಸೈಕಲ್‌ ಖರೀದಿ ಮಾಡಿದರೆ ಉತ್ತಮ. ಅದು ದೀರ್ಘಕಾಲ ಬಾಳಿಕೆ ಬರುತ್ತದೆಯೇ.. ಮೈಲೇಜ್ ಏನು.. ಬೆಲೆ ಎಷ್ಟು ಎಂಬ ಹಲವು ಗೊಂದಲವಿರುತ್ತದೆ. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಪ್ಲಾನ್ ಮಾಡಿದ್ದೀರಾ.. ಹಾಗಾದರೆ, ಹೀರೋ ಸೂಪರ್ ಸ್ಪ್ಲೆಂಡರ್ (Hero Super Splendor), ಹೋಂಡಾ ಶೈನ್ 125 (honda shine 125) ಹಾಗೂ ಟಿವಿಎಸ್ ರೇಡಿಯನ್ (TVS Radeon) ಮೋಟಾರ್‌ಸೈಕಲ್‌ಗಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ ಈ ಬೈಕ್‌ಗಳ ವಿಶೇಷತೆ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಮೊದಲಿಗೆ ಹೀರೋ ಸೂಪರ್ ಸ್ಪ್ಲೆಂಡರ್ ಬೈಕ್ ಬಗ್ಗೆ ಮಾತನಾಡೋಣ. ಇದು ರೂ.82,298 ರಿಂದ ರೂ.86,298 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 124.7 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 7500 ಆರ್‌ಪಿಎಂನಲ್ಲಿ 10.7 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6000 ಆರ್‌ಪಿಎಂನಲ್ಲಿ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Budget Bikes 2024 Hero Super Splendor Honda Shine 125 TVS Radeon

ನೂತನ ಸೂಪರ್ ಸ್ಪ್ಲೆಂಡರ್ ಬೈಕ್ 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಕ್ಯಾಂಡಿ ಬ್ಲೇಜಿಂಗ್ ರೆಡ್ & ಮೆಟಾಲಿಕ್ ನೆಕ್ಸಸ್ ಬ್ಲೂ ಸೇರಿದಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ & ಸೈಡ್-ಸ್ಟ್ಯಾಂಡ್ ಕಟ್-ಆಫ್ ಫಂಕ್ಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಶೈನ್ 125 ಕೂಡ ಜನಪ್ರಿಯ ಮೋಟಾರ್‌ಸೈಕಲ್‌ ಆಗಿದ್ದು, ರೂ.81,549 ರಿಂದ ರೂ.85,550 ಎಕ್ಸ್ ಶೋರೂಂ ದರವನ್ನು ಹೊಂದಿದೆ. 123.94 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7500 ಆರ್‌ಪಿಎಂನಲ್ಲಿ 10.74 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6000 ಆರ್‌ಪಿಎಂನಲ್ಲಿ 11 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ.

Budget Bikes 2024 Hero Super Splendor Honda Shine 125 TVS Radeon

ಈ ಹೋಂಡಾ ಶೈನ್ 125 ಬೈಕ್ 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಲೆಂಟ್ ಸ್ಟಾರ್ಟ್ ಸಿಸ್ಟಮ್ ಮತ್ತು ಎಂಜಿನ್ ಕಿಲ್ ಸ್ವಿಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಬ್ಲ್ಯಾಕ್, ಗೆನ್ನಿ ಗ್ರೇ ಮೆಟಾಲಿಕ್ ಮತ್ತು ಡಿಸೆಂಟ್ ಬ್ಲೂ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ.

ಕಡೆಯದಾಗಿ ಟಿವಿಎಸ್ ರೇಡಿಯನ್ ಬೈಕ್ ಬಗ್ಗೆ ಹೇಳುವುದಾದರೆ, ಇದು ರೂ.70,043 ರಿಂದ ರೂ.83,620 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 8.08 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

Budget Bikes 2024 Hero Super Splendor Honda Shine 125 TVS Radeon

ಹೊಸ ಟಿವಿಎಸ್ ರೇಡಿಯನ್ ಮೋಟಾರ್‌ಸೈಕಲ್‌ 73.68 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸ್ಟಾರ್‌ಲೈಟ್ ಬ್ಲೂ, ಮೆಟಲ್ ಬ್ಲ್ಯಾಕ್ & ಟೈಟಾನಿಯಂ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, November 24, 2024, 9:00 [IST]
English summary
Budget bikes 2024 hero super splendor honda shine 125 tvs radeon
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+