Cheapest Bikes In India: ಜನಪ್ರಿಯ ಬೈಕ್‌ಗಳಿವು.. 75000ಕ್ಕಿಂತ ಕಡಿಮೆ ಬೆಲೆ, 70 Km ಮೈಲೇಜ್!

ದೇಶೀಯ ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯಲ್ಲಿಯೇ ಉತ್ತಮ ಬೈಕ್‌ಗಳು ಖರೀದಿಗೆ ಲಭ್ಯವಿವೆ. ಇವುಗಳು ಆಕರ್ಷಕವಾಗಿದ್ದು, ಗರಿಷ್ಠ ಮೈಲೇಜ್ ಕೂಡ ನೀಡಬಲ್ಲವು. ಆದರೆ ಬಹುತೇಕರಿಗೆ ಯಾವ ಮೋಟಾರ್‌ಸೈಕಲ್‌ನ್ನು ತೆಗೆದುಕೊಂಡರೆ ಹೆಚ್ಚು ಅನುಕೂಲವಾಗುತ್ತದೆ ಎಂಬ ಗೊಂದಲವಿರುತ್ತದೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಹೋಂಡಾ ಸಿಡಿ 110 ಡ್ರೀಮ್ (Honda CD 110 Dream), ಬಜಾಜ್ ಸಿಟಿ 110ಎಕ್ಸ್ (Bajaj CT 110X), ಟಿವಿಎಸ್ ಸ್ಪೋರ್ಟ್ (TVS Sport) ಹಾಗೂ ಹೀರೋ ಹೆಚ್ಎಫ್ 100 (Hero HF 100) ಮಾದರಿಗಳು (ಮಾಡೆಲ್) ಉತ್ತಮ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಹೋಂಡಾ ಸಿಡಿ 110 ಡ್ರೀಮ್ ಬೈಕ್ ಬಗ್ಗೆ ಮಾತನಾಡೋಣ. ಇದು ರೂ.73,400 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 109.51 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8.79 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.30 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Cheapest Bikes In India Under Rs 75 000 Honda CD 110 Dream Bajaj CT 110X TVS Sport Hero HF 100

ಈ ಹೋಂಡಾ ಸಿಡಿ 110 ಡ್ರೀಮ್ ಮೋಟಾರ್‌ಸೈಕಲ್‌, 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಸಿಜಿ ಸ್ಟಾರ್ಟರ್ ಮೋಟಾರ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 112 ಕೆಜಿ ತೂಕವಿದ್ದು, 9.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಬಜಾಜ್ ಸಿಟಿ 110ಎಕ್ಸ್ ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.69,217 ಎಕ್ಸ್ ಶೋರೂಂ ದರವನ್ನು ಪಡೆದಿದೆ. 115.45 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.81 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Cheapest Bikes In India Under Rs 75 000 Honda CD 110 Dream Bajaj CT 110X TVS Sport Hero HF 100

ನೂತನ ಬಜಾಜ್ ಸಿಟಿ 110ಎಕ್ಸ್ ಮೋಟಾರ್‌ಸೈಕಲ್‌, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಮ್ಯಾಟ್ ವೈಲ್ಡ್ ಗ್ರೀನ್ ಮತ್ತು ಎಬೊನಿ ಬ್ಲ್ಯಾಕ್-ರೆಡ್ ಸೇರಿದಂತೆ ವಿವಿಧ ಬಣ್ಣಗಳನ್ನು ಹೊಂದಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಸ್ಪೋರ್ಟ್ ಕೂಡ ಜನಪ್ರಿಯ ಬೈಕ್ ಆಗಿದ್ದು, ರೂ.67,320 ರಿಂದ ರೂ.72,033 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 8.19 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Cheapest Bikes In India Under Rs 75 000 Honda CD 110 Dream Bajaj CT 110X TVS Sport Hero HF 100

ಈ ಟಿವಿಎಸ್ ಸ್ಪೋರ್ಟ್ 4-ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್‌ಸ್ಟ್ರುಮೆಂಟ್ ಪ್ಯಾನೆಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 10 ಲೀಟರ್‌ನ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಹೆಚ್ಎಫ್ 100 ಮೋಟಾರ್‌ಸೈಕಲ್‌ ಬಗ್ಗೆ ಹೇಳುವುದಾದರೆ, ಇದು ರೂ.49,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಗೇರ್‌ಬಾಕ್ಸ್‌ನ್ನು ಹೊಂದಿದೆ.

Cheapest Bikes In India Under Rs 75 000 Honda CD 110 Dream Bajaj CT 110X TVS Sport Hero HF 100

ಹೊಸ ಹೀರೋ ಹೆಚ್ಎಫ್ 100 ಬೈಕ್ ಕೂಡ 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಾಲಾಗ್ ಇನ್‌ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 109 ಕೆಜಿ ತೂಕವಿದ್ದು, ರೆಡ್-ಬ್ಲ್ಯಾಕ್ ಮತ್ತು ಬ್ಲೂ- ಬ್ಲ್ಯಾಕ್ ಎಂಬ ಎರಡು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, October 23, 2024, 17:55 [IST]
English summary
Cheapest bikes in india under rs 75000 honda cd 110 dream bajaj ct 110x tvs sport hero hf 100
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+