ಡೈಲಿ ಯೂಸ್‌ಗೆ ಬೆಸ್ಟ್ ಸ್ಕೂಟರ್‌ಗಳಿವು: ಬಜೆಟ್ ಬೆಲೆಗೆ ಸಿಗುತ್ತವೆ.. ಆರಾಮದಾಯಕ ಪ್ರಯಾಣ!

ನೀವು ದಿನನಿತ್ಯದ ಬಳಕೆಗೆ ನೂತನ ದ್ವಿಚಕ್ರ ವಾಹನವನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದರೆ, ಸುಜುಕಿ (Suzuki) ಕಂಪನಿಯ ಸ್ಕೂಟರ್‌ಗಳು ಉತ್ತಮ ಆಯ್ಕೆಯಾಗಬಲ್ಲವು. ಇವು ಬಜೆಟ್ ಬೆಲೆಯಲ್ಲಿ ದೊರೆಯುವುದರೊಂದಿಗೆ ಗರಿಷ್ಠ ಮೈಲೇಜ್ ಕೂಡ ನೀಡುತ್ತವೆ. ಬನ್ನಿ.. ಈ ಸ್ಕೂಟರ್‌ಗಳ ವಿಶೇಷತೆ ಬಗ್ಗೆ ಸಂಪೂರ್ಣವಾದ ವಿವರವನ್ನು ತಿಳಿಯೋಣ.

ಮೊದಲಿಗೆ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.82,586 - 94,082 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124 ಸಿಸಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.7 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 10 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 45 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

Daily Use Scooters Suzuki Access Burgman Street Avenis Budget price Comfortable Journey

ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಸಾಕಷ್ಟು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬ್ಲೂಟೂತ್ ಮೂಲಕ ಸ್ಮಾರ್ಟ್‌ಫೋನ್ ಕನೆಕ್ಟ್ ಮಾಡಬಹುದಾದ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ ಮುಂಭಾಗ (ಫ್ರಂಟ್) ಡಿಸ್ಕ್ ಅಥವಾ ಡ್ರಮ್, ಹಿಂಭಾಗ (ರೇರ್) ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. ಇದು 103 ಕೆಜಿ ತೂಕವಿದ್ದು, 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125 (Suzuki Burgman Street 125), ರೂ.97,883 ದಿಂದ ರೂ.1.18 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಇದು 124 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.7 ಪಿಎಸ್ ಪವರ್ (ಶಕ್ತಿ) ಮತ್ತು 10 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದ್ದು, 48 ಕೆಎಂಪಿಎಲ್ ಕೊಡುತ್ತದೆ.

Daily Use Scooters Suzuki Access Burgman Street Avenis Budget price Comfortable Journey

ಈ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125 ಸ್ಕೂಟರ್, ಸೈಲೆಂಟ್ ಸ್ಟಾರ್ಟರ್, ಆಟೋಮೆಟಿಕ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಎಲ್ಇಡಿ ಹೆಡ್ ಲೈಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. 111 ಕೆಜಿ ತೂಕವಿರುವ ಈ ಸ್ಕೂಟರ್ 5.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಸುಜುಕಿ ಅವೆನಿಸ್ 125 (Suzuki Avenis 125) ಸ್ಕೂಟರ್ ರೂ.94,685 ದಿಂದ ರೂ.96,383 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇದು 124 ಸಿಸಿ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.7 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 10 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 55 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

Daily Use Scooters Suzuki Access Burgman Street Avenis Budget price Comfortable Journey

ನೂತನ ಸುಜುಕಿ ಅವೆನಿಸ್ 125 ಮಾದರಿಯು ಎಲ್ಇಡಿ ಹೆಡ್‌ಲೈಟ್, ಟೈಲ್‌ಲೈಟ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಫುಲ್ ಡಿಜಿಟಲ್ ಎಲ್‌ಸಿಡಿ ಕ್ಲಸ್ಟರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್ ಅನ್ನು ಒಳಗೊಂಡಿದೆ. 106 ಕೆಜಿ ತೂಕವಿರುವ ಈ ಸ್ಕೂಟರ್, 5.2 ಲೀಟರ್ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 10, 2024, 11:07 [IST]
English summary
Daily use scooters suzuki access burgman street avenis budget price comfortable journey
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+