ದುಬಾರಿ ಬೆಲೆಯ ರಾಯಲ್ ಎನ್‌ಫೀಲ್ಡ್ ಬೈಕ್ ಖರೀದಿಸಿದ ಉತ್ತರ ಕರ್ನಾಟಕದ ಖ್ಯಾತ ಯೂಟ್ಯೂಬರ್!

ಉತ್ತರ ಕರ್ನಾಟಕದಲ್ಲಿ ಪ್ರತಿಭೆಗಳಿಗೇನು ಕೊರತೆಯಿಲ್ಲ. ಅದಕ್ಕೆ ನಿಂಗರಾಜು ಸಿಂಗಾಡಿ (Ningaraj Singadi) ಹೊರತಾಗಿಲ್ಲ. ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಖಂಡಿಯವರಾದ ನಿಂಗರಾಜು, ಅನೇಕ ಕಿರುಚಿತ್ರಗಳಿಗೆ ನಿರ್ದೇಶಿಸುವುದರೊಂದಿಗೆ ಆಕ್ಟ್ ಕೂಡ ಮಾಡಿದ್ದಾರೆ. ಈ ಮೂಲಕ ತಮ್ಮದೇಯಾದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಇರುವ ನಿಂಗರಾಜು ಲಕ್ಷಾಂತರ ಸಂಖ್ಯೆಯಲ್ಲಿ ಫಾಲೋವರ್‌ಗಳನ್ನು ಹೊಂದಿದ್ದಾರೆ. ಅವರ ಯೂಟ್ಯೂಬ್ ಚಾನೆಲ್‌‌ನ್ನು ಬರೋಬ್ಬರಿ 7 ಲಕ್ಷಕ್ಕೂ ಅಧಿಕ ಮಂದಿ ಸಬ್‌ಸ್ಕ್ರೈಬ್‌ ಮಾಡಿದ್ದಾರೆ.

ಇತ್ತೀಚೆಗೆ ನಿಂಗರಾಜು ಸಿಂಗಾಡಿ ಹೊಚ್ಚ ಹೊಸ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ 650 (Royal Enfield Continental GT 650) ಮೋಟಾರ್‌ಸೈಕಲ್‌ನ್ನು ಖರೀದಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ಸಹ ನಿಂಗರಾಜು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Famous north karnataka Youtuber Ningaraj Singadi Buys new Royal Enfield Continental GT 650 Details

ನೂತನ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ ವಿಶೇಷತೆ ಬಗ್ಗೆ ಹೇಳುವುದಾದರೆ, ಇದು ರೂ.3.14 ಲಕ್ಷದಿಂದ ರೂ.3.39 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.. ರಾಕರ್ ರೆಡ್, ಡಕ್ಸ್ ಡಿಲಕ್ಸ್, ಮಿಸ್ಟರ್ ಕ್ಲೀನ್, ಸ್ಲಿಪ್‌ಸ್ಟ್ರೀಮ್ ಬ್ಲೂ ಮತ್ತು ಅಪೆಕ್ಸ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಮೋಟಾರ್‌ಸೈಕಲ್‌ 647.95 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 47.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 52.3 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 27 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Famous north karnataka Youtuber Ningaraj Singadi Buys new Royal Enfield Continental GT 650 Details

ಹೊಸ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಮೋಟಾರ್‌ಸೈಕಲ್‌, ಕೇವಲ 6.61 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಎಲ್ಇಡಿ ಹೆಡ್‌ಲೈಟ್‌, ಟೈಲ್ ಲೈಟ್, ಸ್ಲಿಪ್ಪರ್ ಕ್ಲಚ್, ಟ್ಯೂಬ್‌ಲೆಸ್ ಟೈರ್‌ಗಳು, ಸೆಮಿ-ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌‍ಬಿ ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನೂತನ ಬೈಕ್ 214 ಕೆಜಿ ತೂಕವಿದ್ದು, 12.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ. ಸೀಟ್ ಹೈಟ್ 805 ಎಂಎಂ ಇದೆ. ಸವಾರರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ಕಾಂಟಿನೆಂಟಲ್ ಜಿಟಿ 650 ಬೈಕ್‌ಗೆ ಯಾವುದೇ ನೇರವಾದ ಪ್ರತಿಸ್ಪರ್ಧಿಗಳಿಲ್ಲ. ಆದರೂ ಕೆಟಿಎಂ ಡ್ಯೂಕ್ 390 ಪ್ರಬಲವಾದ ಎದುರಾಳಿಯಾಗಿದೆ.

ಈ ಹಿಂದೆ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ 'ಕರಿಮಣಿ ಮಾಲೀಕ ನೀನಲ್ಲ' ಹಾಡಿನ ಖ್ಯಾತಿಯ ಉತ್ತರ ಕರ್ನಾಟಕದ ಪ್ರತಿಭೆ ಕನಕ ಕೂಡ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 (Royal Enfield Himalayan 450) ಬೈಕ್‌ನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದರು. ಇದು ರೂ.2.85 ರಿಂದ ರೂ.2.98 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ.

ನೂತನ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಮೋಟಾರ್‌ಸೈಕಲ್‌ 452 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 30 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಸ್ಕ್ರೀನ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, December 12, 2024, 17:38 [IST]
English summary
Famous north karnataka youtuber ningaraj singadi buys new royal enfield continental gt 650 details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+