ಹಳ್ಳಿ ಇರಲಿ.. ನಗರವೇ ಇರಲಿ.. ಇವೇ ಬೈಕ್‌ಗಳು ಉತ್ತಮ, 80 Km ಮೈಲೇಜ್.. ಅತಿಕಡಿಮೆ ಬೆಲೆ!

ಭಾರತದಲ್ಲಿ ನಗರಗಳಂತೆ ಹಳ್ಳಿಗಳಲ್ಲಿ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಾಸಿಸುತ್ತಾರೆ. ದಿನನಿತ್ಯದ ಬಳಕೆಗಾಗಿ ಮೋಟಾರ್‌ಸೈಕಲ್‌ಗಳು ಬೇಕೇ ಬೇಕು. ಆದರೆ, ಬಹುತೇಕರಿಗೆ ಯಾವ ಬೈಕ್ ತೆಗೆದುಕೊಂಡರೆ ಉತ್ತಮ.. ಅದು ಕೈಗೆಟುಕುವ ಬೆಲೆಯಲ್ಲಿ ಬರುತ್ತದೆಯೇ.. ಮೈಲೇಜ್ ಎಷ್ಟು ಎಂಬ ಹಲವು ಗೊಂದಲವಿರುತ್ತದೆ. ನೀವು ಹೊಸ ಬೈಕ್‌ವೊಂದನ್ನು ತೆಗೆದುಕೊಳ್ಳಲು ಆಯೋಚಿಸಿದ್ದರೆ ಬಜಾಜ್ ಪಲ್ಸರ್ 125, ಹೋಂಡಾ ಶೈನ್ 125, ಟಿವಿಎಸ್ ರೈಡರ್ 125, ಹೀರೋ ಗ್ಲಾಮರ್ ಮತ್ತು ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್‌ಗಳು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ನೂತನ ಬೈಕ್‌ಗಳ ದರ ಹಾಗೂ ವಿಶೇಷತೆ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ಮೊದಲಿಗೆ ಬಜಾಜ್ ಪಲ್ಸರ್ 125 (Bajaj Pulsar 125) ಮೋಟಾರ್‌ಸೈಕಲ್‌ ಕುರಿತಂತೆ ಮಾತನಾಡೋಣ. ಇದು ರೂ.84,269 ರಿಂದ ರೂ.99,373 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.4 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 11.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಶಕ್ತಿ) ಮತ್ತು 10.8 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Good Bikes Under Rs 70 000 to 1 Lakh India Bajaj Pulsar 125 Honda Shine 125 to Hero Splendor Plus

ಈ ಬಜಾಜ್ ಪಲ್ಸರ್ 125 ಬೈಕ್, 57 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಬರೋಬ್ಬರಿ 140 ಕೆಜಿ ತೂಕವಿದ್ದು, 11.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ. ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.

ಹೋಂಡಾ ಶೈನ್ 125 (Honda Shine 125) ಬಗ್ಗೆ ಹೇಳುವುದಾದರೆ, ಈ ಬೈಕ್ ರೂ.81,549 ರಿಂದ ರೂ.85,550 (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 123.94 ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಗೆನ್ನಿ ಗ್ರೇ ಮೆಟಾಲಿಕ್ ಮತ್ತು ಡೀಸೆಂಟ್ ಬ್ಲೂ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Good Bikes Under Rs 70 000 to 1 Lakh India Bajaj Pulsar 125 Honda Shine 125 to Hero Splendor Plus

ಟಿವಿಎಸ್ ರೈಡರ್ 125 (TVS Raider 125) ಕೂಡ ಜನಪ್ರಿಯ ಮೋಟಾರ್‌ಸೈಕಲ್‌ ಆಗಿದ್ದು, ರೂ.93,859 ರಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.8 ಸಿಸಿ ಸಾಮರ್ಥ್ಯದ ಪೆಟ್ರೋಲ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 57 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಐಡಲ್ ಸ್ಟಾಪ್/ ಸ್ಟಾರ್ಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೀರೋ ಗ್ಲಾಮರ್ (Hero Glamour) ಕುರಿತಂತೆ ಮಾತನಾಡುವುದಾದರೆ, ಇದು ರೂ.84,548 ರಿಂದ ರೂ.88,548 ಎಕ್ಸ್ ಶೋರೂಂ ದರವನ್ನು ಪಡೆದಿದೆ. 125 ಸಿಸಿ ಎಂಜಿನ್ ಹೊಂದಿದ್ದು, 63 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಕ್ಯಾಂಡಿ ಬ್ಲೇಜಿಂಗ್ ರೆಡ್, ಬ್ಲ್ಯಾಕ್ ಸ್ಪೋರ್ಟ್ಸ್ ರೆಡ್, ಬ್ಲ್ಯಾಕ್ ಟೆಕ್ನೋ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

Good Bikes Under Rs 70 000 to 1 Lakh India Bajaj Pulsar 125 Honda Shine 125 to Hero Splendor Plus

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಬಗ್ಗೆ ಹೇಳುವುದಾದರೆ, ಈ ಬೈಕ್ ರೂ.76,356 ರಿಂದ ರೂ.77,496 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಎಂಜಿನ್ ಒಳಗೊಂಡಿದ್ದು, 80.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, October 13, 2024, 12:00 [IST]
English summary
Good bikes under rs 70000 to 1 lakh india bajaj pulsar 125 honda shine 125 to hero splendor plus
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+