ಆಫೀಸ್‌ಗೆ ಹೋಗುವ ಮಹಿಳೆಯರಿಗೆ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಸ್ಟ್.. ಕೈಗೆಟುಕುವ ಬೆಲೆ!

ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಮಹಾನಗರದ ವಿವಿಧ ಐಟಿ ಕಚೇರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಉದ್ಯೋಗಿಗಳಿದ್ದಾರೆ. ದಿನನಿತ್ಯ ಕಚೇರಿಗೆ ಹೋಗಲು ದ್ವಿಚಕ್ರ ವಾಹನಗಳು ತುಂಬಾ ಅಗತ್ಯವಾಗಿವೆ. ನೀವು ಮಹಿಳಾ ಉದ್ಯೋಗಿ ಆಗಿದ್ದು, ಕೆಲಸಕ್ಕೆ ಹೋಗಲು ಪರಿಸರ ಸ್ನೇಹಿಯಾದ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿಸಲು ಆಲೊಚಿಸಿದ್ದರೆ.. ಬಜಾಜ್ ಚೇತಕ್ 2901, ಓಲಾ ಎಸ್1ಎಕ್ಸ್ ಹಾಗೂ ಹೀರೋ ವಿಡಾ ಮಾದರಿಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟದ್ದೇವೆ.

ಮೊದಲಿಗೆ ಬಜಾಜ್ ಚೇತಕ್ 2901 (Bajaj Chetak 2901) ಎಲೆಕ್ಟ್ರಿಕ್ ಸ್ಕೂಟರ್ ಕುರಿತಂತೆ ಮಾತನಾಡೋಣ. ಇದು ರೂ.95,998 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.88 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 123 ಕಿಲೋಮಿಟರ್ ಕ್ರಮಿಸುತ್ತದೆ. 63 ಕೆಎಂಪಿಹೆಚ್ ಟಾಪ್ ಸ್ಪೀಡ್ ಕೂಡ ಹೊಂದಿದೆ.

Good Electric Scooters For Office Going Female Employees Bajaj Chetak 2901 Ola s1x Hero Vida

ಈ ಚೇತಕ್ ಸ್ಕೂಟರ್ ಕಲರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ವಿಶೇಷವಾಗಿ ಟೆಕ್‌ಪ್ಯಾಕ್‌ನೊಂದಿಗೆ ಲಭ್ಯವಿದ್ದು, ಇದು ಹಿಲ್ ಹೋಲ್ಡ್, ಕಾಲ್, ಮ್ಯೂಸಿಕ್ ಕಂಟ್ರೋಲ್, ಫಾಲೋ ಮಿ ಹೋಮ್ ಲೈಟ್‌ಗಳನ್ನು ಸಕ್ರಿಯಗೊಳಿಸಲು ನೆರವಾಗುತ್ತದೆ. ಜೊತೆಗೆ ರೆಡ್, ಸೈಬರ್ ವೈಟ್, ಲೈಮ್ ಯೆಲ್ಲೋ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಓಲಾ ಎಸ್1 ಎಕ್ಸ್ ಪ್ಲಸ್ (Ola S1 X+) ಎಲೆಕ್ಟ್ರಿಕ್ ಸ್ಕೂಟರ್‌ ಕೂಡ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯನ್ನು ಪಡೆದಿದೆ. ಇದರ 2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯು ರೂ.74,999 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 91 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

Good Electric Scooters For Office Going Female Employees Bajaj Chetak 2901 Ola s1x Hero Vida

ನೂತನ ಓಲಾ ಎಸ್1 ಎಕ್ಸ್‌ನ 3 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿರುವ ರೂಪಾಂತರವು ರೂ.84,999 (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ಸಿಗುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 151 ಕಿಲೋಮೀಟರ್ ಓಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್ ಪಡೆದಿದೆ. ಓಲಾ ಎಸ್1 ಎಕ್ಸ್‌ನ 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಒಳಗೊಂಡಿರುವ ಮಾದರಿಯು ರೂ.97,499 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯಲಿದ್ದು, ಪೂರ್ತಿ ಚಾರ್ಜ್‌ನಲ್ಲಿ 190 ಕಿಲೋಮೀಟರ್ ಕ್ರಮಿಸುತ್ತದೆ.

Good Electric Scooters For Office Going Female Employees Bajaj Chetak 2901 Ola s1x Hero Vida

ಹೀರೋ ವಿಡಾ (Hero Vida) ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ರೂ.1.20 ಲಕ್ಷದಿಂದ ರೂ.1.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿ1 ಪ್ಲಸ್ ಹಾಗೂ ವಿ1 ಪ್ರೊ ಎಂಬ 2 ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಲಭ್ಯವಿದೆ. ವಿ1 ಪ್ಲಸ್ ಮಾದರಿಯು 3.44 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 100 ಕಿಲೋಮೀಟರ್ ಓಡುತ್ತದೆ.

ವಿಡಾ ವಿ1 ಪ್ರೊ ರೂಪಾಂತರವು 3.94 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 110 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಇವೆರೆಡು ಮಾದರಿಗಳು ಗಂಟೆ 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿವೆ. ಕೇವಲ 3.4 ಸೆಕೆಂಡುಗಳಲ್ಲಿ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿವೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 16, 2024, 19:52 [IST]
English summary
Good electric scooters for office going female employees bajaj chetak 2901 ola s1x hero vida
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+