Hero: ದಿನಬಳಕೆಗಾಗಿ ಹೀರೋದ ಅತ್ಯುತ್ತಮ ಸ್ಕೂಟರ್‌ಗಳಿವು.. ಒಳ್ಳೆ ಮೈಲೇಜ್, ಕೈಗೆಟುಕುವ ಬೆಲೆ

ದೇಶದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸುವ ಹೀರೋ ಮೋಟೋಕಾರ್ಪ್ (Hero MotoCorp) ನಂಬರ್ 1 ಕಂಪನಿಯಾಗಿ ಹೊರಹೊಮ್ಮಿದೆ. ಹಳ್ಳಿಯಿಂದ ದಿಲ್ಲಿವರೆಗೂ ಹೀರೋ ಕಂಪನಿ ಮಾರಾಟಗೊಳಿಸುವ ಬೈಕ್ ಮತ್ತು ಸ್ಕೂಟರ್‌ಗಳು ಮಧ್ಯಮ ವರ್ಗದ ಜನರನ್ನು ಮನಸ್ಸನ್ನು ಗೆದ್ದಿವೆ. ನೀವು ದಿನನಿತ್ಯದ ಬಳಕೆಗಾಗಿ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ತೆಗೆದುಕೊಳ್ಳಲು ಯೋಚಿಸಿದ್ದೀರಾ.. ಹಾಗಾದರೆ, ಡೆಸ್ಟಿನಿ 125, ಪ್ಲೆಷರ್ ಪ್ಲಸ್ ಹಾಗೂ ಜೂಮ್ ಮಾದರಿ (ಮಾಡೆಲ್)ಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ಈ ನೂತನ ಸ್ಕೂಟರ್‌ಗಳ ವಿಶೇಷತೆ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಹೀರೋ ಡೆಸ್ಟಿನಿ 125 (Hero Destini 125) ಸ್ಕೂಟರ್ ಕುರಿತಂತೆ ಮಾತನಾಡೋಣ. ಇದು ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ ರೂ.80,048 ದಿಂದ ರೂ.86,538 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.6 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 9.12 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 10.4 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

Good Fuel Efficiency Hero scooters Xoom Pleasure Plus Destini 125

ಈ ಡೆಸ್ಟಿನಿ 125 ಸ್ಕೂಟರ್ 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಬೂಟ್ ಲ್ಯಾಂಪ್, ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್‍ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ & ಡ್ರಮ್ ಬ್ರೇಕ್‌ನ್ನು ಹೊಂದಿದೆ. 5.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.

ಹೀರೋ ಪ್ಲೆಷರ್ ಪ್ಲಸ್ (Hero Pleasure Plus) ಕೂಡ ಜನಪ್ರಿಯ ಸ್ಕೂಟರ್ ಆಗಿದೆ. ರೂ.70,963 ದಿಂದ ರೂ.83,363 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 110 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಹೊಂದಿದ್ದು, 8.1 ಪಿಎಸ್ ಗರಿಷ್ಠ ಶಕ್ತಿ ಮತ್ತು 8.7 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Good Fuel Efficiency Hero scooters Xoom Pleasure Plus Destini 125

ನೂತನ ಪ್ಲೆಷರ್ ಪ್ಲಸ್ ಸ್ಕೂಟರ್, ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಹಾಗೂ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡ್ರಮ್ ಬ್ರೇಕ್‌ನ್ನು ಹೊಂದಿದೆ. 10-ಇಂಚಿನ ಸ್ಟೀಲ್ ವೀಲ್‌ಗಳು, 90/100-10 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ. 4.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಹೀರೋ ಜೂಮ್ (Hero Xoom) ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.71,484 ಲಕ್ಷದಿಂದ ರೂ.80,967 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 110.9 ಸಿಸಿ, ಏರ್ ಕೋಲ್ಡ್ ಫ್ಯುಯೆಲ್ ಇಂಜೆಕ್ಷನ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.15 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 8.70 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Good Fuel Efficiency Hero scooters Xoom Pleasure Plus Destini 125

ಹೊಚ್ಚ ಹೊಸ ಹೀರೋ ಜೂಮ್ ಸ್ಕೂಟರ್ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಪ್ರೊಜೆಕ್ಟರ್ ಎಲ್ಇಡಿ ಹೆಡ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ 5.2 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದ್ದು, ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಸಹ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, July 29, 2024, 18:03 [IST]
English summary
Good fuel efficiency hero scooters xoom pleasure plus destini 125
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+