53+ ಕಿ.ಮೀ ಮೈಲೇಜ್.. ರೂ.71,000 ಆರಂಭಿಕ ಬೆಲೆ.. ನಿಮ್ಮ ಹೆಂಡತಿಗೆ ಹೊಸ ಸ್ಕೂಟರ್ ಗಿಫ್ಟ್ ನೀಡಬೇಕೇ.. ಇವುಗಳು ಬೆಸ್ಟ್!

ದಿನಬಳಕೆಗೆ ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಬೈಕ್‌ಗಳಿಗೆ ಹೋಲಿಕೆ ಮಾಡಿದರೆ, ಸ್ಕೂಟರ್‌ಗಳನ್ನು ಮಹಿಳೆ ಹಾಗೂ ಪುರುಷರಿಬ್ಬರೂ ಸುಲಭವಾಗಿ ಬಳಕೆ ಮಾಡಬಹುದು. ನಿಮ್ಮ ಹೆಂಡತಿಗೆ ಹೊಸ ಸ್ಕೂಟರ್‌ವೊಂದನ್ನು ಉಡುಗೊರೆಯಾಗಿ ನೀಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೋಂಡಾ ಆಕ್ಟಿವಾ 6ಜಿ, ಟಿವಿಎಸ್ ಸ್ಕೂಟಿ ಜೆಸ್ಟ್ ಹಾಗೂ ಹೀರೋ ಝೂಮ್ ಮಾಡೆಲ್‌ಗಳು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮೊದಲಿಗೆ ಹೋಂಡಾ ಆಕ್ಟಿವಾ 6ಜಿ (Honda Activa 6G) ಬಗ್ಗೆ ಮಾತನಾಡೋಣ. ಈ ಸ್ಕೂಟರ್ ರೂ.76,684 ರಿಂದ 82,684 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 109.51 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7.84 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.90 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Good Mileage Best Scooters For Gift Your Wife Honda Activa 6G TVS Scooty Zest Hero Xoom

ಈ ಆಕ್ಟಿವಾ 6ಜಿ ಸ್ಕೂಟರ್ 59.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ, ಬ್ಲ್ಯಾಕ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಫುಲ್ ಅನಲಾಗ್ ಕನ್ಸೋಲ್, ಎಸಿಜಿ ಸ್ಟಾರ್ಟರ್, ಎಂಜಿನ್ ಕಿಲ್ ಸ್ವಿಚ್ ಮತ್ತು ಇಂಟಿಗ್ರೇಟೆಡ್ ಪಾಸ್ ಸ್ವಿಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಿವಿಎಸ್ ಸ್ಕೂಟಿ ಜೆಸ್ಟ್ (TVS Scooty Zest) ಸ್ಕೂಟರ್ ಕುರಿತಂತೆ ಹೇಳುವುದಾದರೆ, ಇದು ರೂ.74,676 ರಿಂದ ರೂ.76,439 ಎಕ್ಸ್ ಶೋರೂಂ ದರವನ್ನು ಪಡೆದಿದೆ. 109.7 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 7.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Good Mileage Best Scooters For Gift Your Wife Honda Activa 6G TVS Scooty Zest Hero Xoom

ನೂತನ ಸ್ಕೂಟಿ ಜೆಸ್ಟ್ ಸ್ಕೂಟರ್ 48 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲೂ ಮತ್ತು ಮ್ಯಾಟ್ ಪರ್ಪಲ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 103 ಕೆಜಿ ತೂಕವಿದ್ದು, 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಕಡೆಯದಾಗಿ ಹೀರೋ ಝೂಮ್ (Hero Xoom) ಬಗ್ಗೆ ಮಾತನಾಡುವುದಾದರೆ, ಈ ಸ್ಕೂಟರ್ ರೂ.71,484 ರಿಂದ ರೂ.80,967 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.15 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.70 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ.

Good Mileage Best Scooters For Gift Your Wife Honda Activa 6G TVS Scooty Zest Hero Xoom

ಈ ಹೀರೋ ಝೂಮ್ ಸ್ಕೂಟರ್ 53.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಪ್ರೊಜೆಕ್ಟರ್ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, December 21, 2024, 15:15 [IST]
English summary
Good mileage best scooters for gift your wife honda activa 6g tvs scooty zest hero xoom
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+