Hero: ನಾಳೆಯಿಂದ.. ಹೀರೋ ಗ್ರಾಹಕರೇ ಗಮನಿಸಿ
ದೇಶದ ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಹೀರೋ ಮೋಟೊಕಾರ್ಪ್ (Hero MotoCorp) ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ನೀವು ಹೊಚ್ಚ ಹೊಸ ಹೀರೋ ಬೈಕ್ ಅಥವಾ ಸ್ಕೂಟರ್ ಖರೀದಿಸಲು ಯೋಚಿಸಿದ್ದರೆ, ಇಂದೇ ತಂದು ಬಿಡಿ.. ನಾಳೆ ತೆಗೆದುಕೊಳ್ಳೋಣ ಎಂದು ಸುಮ್ಮನಿದ್ದರೆ ಕೊಂಚ ಹೆಚ್ಚಿನ ಹಣವನ್ನು ನೀಡಬೇಕಾಗುತ್ತದೆ. ಹೀರೋ ಕಂಪನಿಯು ಆಯ್ದ ದ್ವಿಚಕ್ರ ವಾಹನಗಳ ಎಕ್ಸ್ ಶೋರೂಂ ಬೆಲೆಯನ್ನು ಏರಿಕೆ ಮಾಡಲಿದೆ. ನೂತನ ದರಗಳು ನಾಳೆಯಿಂದ (ಜುಲೈ 1) ಜಾರಿಗೆ ಬರಲಿದ್ದು, ಸುಮಾರು ರೂ.1500ವರೆಗೆ ಬೆಲೆ ಹೆಚ್ಚಿಸಬಹುದು ಎನ್ನಲಾಗಿದೆ.
ಹೀರೋ ಮೋಟೊಕಾರ್ಪ್, ಇನ್‌ಪುಟ್ (ಉತ್ಪಾದನೆ) ವೆಚ್ಚವನ್ನು ಸರಿದೂಗಿಸಲು ದ್ವಿಚಕ್ರ ವಾಹನಗಳ ದರವನ್ನು ಹೆಚ್ಚಳ ಮಾಡುತ್ತಿದೆ ಎಂದು ವರದಿಯಾಗಿದೆ. ಕಡೆಯದಾಗಿ 2023ರ ಅಕ್ಟೋಬರ್‌ನಲ್ಲಿ ವಿವಿಧ ಮೋಟಾರ್‌ಸೈಕಲ್ ಹಾಗೂ ಸ್ಕೂಟರ್‌ಗಳ ಬೆಲೆಯನ್ನು ಕಂಪನಿಯು ಏರಿಕೆ ಮಾಡಿತ್ತು. ದೇಶೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಶೇಕಡ 29.05% ಪಾಲನ್ನು ಹೊಂದುವ ಮೂಲಕ ಹೀರೋ ಮೊದಲ ಸ್ಥಾನದಲ್ಲೂ ಮುಂದುವರಿದಿದೆ.

ಸದ್ಯ ಹೀರೋ ಮೋಟೊಕಾರ್ಪ್ ದೇಶೀಯವಾಗಿ ಮಾರಾಟಗೊಳಿಸುವ ಪ್ರಮುಖ ಬೈಕ್ ಹಾಗೂ ಸ್ಕೂಟರ್‌ಗಳ ಸಂಕ್ಷಿಪ್ತ ವಿವರವನ್ನು ತಿಳಿಯೋಣ. ಮೊದಲಿಗೆ ಹೀರೋ ಈಚೆಗೆ ಬಿಡುಗಡೆಗೊಳಿಸಿದ್ದ 'ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ 2.0' ಮೋಟಾರ್‌ಸೈಕಲ್ ಬಗ್ಗೆ ಹೇಳುವುದಾದರೆ ಇದು ರೂ.2,911 ಎಕ್ಸ್ ಶೋರೂಂ ದರವನ್ನು ಹೊಂದಿದೆ. 100 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಹೀರೋ ಗ್ಲಾಮರ್ (Hero Glamour) ಕೂಡ ಅಗ್ಗದ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂ.83,798 ದಿಂದ ರೂ.87,798 (ಎಕ್ಸ್ ಶೋರೂಂ) ಬೆಲೆಯನ್ನು ಪಡೆದಿದೆ. 125 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೀರೋ ಪ್ಯಾಶನ್ ಪ್ಲಸ್ (Hero Passion Plus) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.77,361 ಎಕ್ಸ್ ಶೋರೂಂ ದರವನ್ನು ಹೊಂದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೂ ದೊರೆಯುತ್ತದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೀರೋ ಪ್ಲೆಷರ್ ಪ್ಲಸ್ (Hero Pleasure Plus) ಸ್ಕೂಟರ್ ರೂ.71,788 ದಿಂದ ರೂ.83,918 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 110.9 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲೆಕ್ಟ್ರಿಕ್ ಸ್ಟಾರ್ಟರ್, ಎಲ್‌ಸಿಡಿ ಸ್ಕ್ರೀನ್, ಬ್ಲೂಟೂಟ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ನ್ನು ಪಡೆದಿದೆ.

ಹೀರೋ ಜೂಮ್ (Hero Xoom) ಬಗ್ಗೆ ಮಾತನಾಡುವುದಾದರೆ, ಈ ಸ್ಕೂಟರ್ ರೂ.75,761 ದಿಂದ ರೂ.84,400 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 110.9 ಸಿಸಿ, ಏರ್ ಕೋಲ್ಡ್ ಫ್ಯುಯೆಲ್ ಇಂಜೆಕ್ಷನ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 45 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








