Hero: ಹೀರೋ ಡೆಸ್ಟಿನಿ 125 ಸ್ಕೂಟರ್ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದ ನಂಬರ್ 1 ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಹೀರೋ ಮೋಟೋಕಾರ್ಪ್ (Hero MotoCorp) ಮನೆ ಮಾತಾಗಿದೆ. ಕಂಪನಿಯು ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳು ಮಧ್ಯಮ ವರ್ಗದ ಜನರನ್ನು ಮನಸ್ಸನ್ನು ಗೆದ್ದಿವೆ. ನೀವು ದಿನನಿತ್ಯದ ಬಳಕೆಗಾಗಿ ನೂತನ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಹೀರೋ ಡೆಸ್ಟಿನಿ 125' ಸೂಕ್ತ ಆಯ್ಕೆಯಾಗಲಿದೆ. ಇಲ್ಲಿ ಹೊಚ್ಚ ಹೊಸ ಸ್ಕೂಟರ್‌ನ ಆನ್-ರೋಡ್ ಬೆಲೆ ಎಷ್ಟು.. ಇಎಂಐ ಏನು.. ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ನೂತನ ಹೀರೋ ಡೆಸ್ಟಿನಿ 125 ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ದೊರೆಯುತ್ತದೆ. ಬೆಂಗಳೂರಿನಲ್ಲಿ ಇದರ ಎಲ್ಎಕ್ಸ್ (LX) ಮಾದರಿಯು ರೂ.98,886 ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ರೂ.10,000 ಡೌನ್ ಪೇಮೆಂಟ್ ಪಾವತಿಸಿ ಈ ಸ್ಕೂಟರ್‌ನ್ನು ಕೊಂಡುಕೊಂಡರೆ, ರೂ.88,886 ಸಾಲವಿರುತ್ತದೆ. ಶೇಕಡ 9.7% ಬಡ್ಡಿ ದರದಲ್ಲಿ ಮೂರು ವರ್ಷದ ಅವಧಿಗೆ (36 ತಿಂಗಳು) ಮಾಸಿಕ 2,856 ಇಎಂಐ ಕಟ್ಟಬೇಕು.

Hero Destini 125 Scooter On Road Price And Emi Details

ಡೆಸ್ಟಿನಿ ಎಕ್ಸ್‌ಟೆಕ್ (XTEC) ರೂಪಾಂತರವು ರೂ.1,10,243 ಆನ್-ರೋಡ್ (On-Road) ದರವನ್ನು ಪಡೆದಿದೆ. ರೂ.10,000 ಡೌನ್ ಪೇಮೆಂಟ್ (Down Payment) ಕಟ್ಟಿ ಈ ಸ್ಕೂಟರ್‌ನ್ನು ಮನೆಗೆ ತಂದರೆ, ಉಳಿದ ರೂ.1,00,243 ಸಾಲದ ಮೊತ್ತಕ್ಕೆ ಶೇಕಡ 9.7% ಬಡ್ಡಿ ಹಾಕಿ 3 ವರ್ಷಕ್ಕೆ ತಿಂಗಳಿಗೆ ರೂ.3,220 ಇಎಂಐ (EMI) ಪಾವತಿಸಬೇಕು.

ಹೊಚ್ಚ ಹೊಸ ಹೀರೋ ಡೆಸ್ಟಿನಿ 125 (Hero Destini 125) ಸ್ಕೂಟರ್ 124.6 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 9.12 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 10.4 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೀರೋ ಡೆಸ್ಟಿನಿ ಸ್ಕೂಟರ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್, ಬೂಟ್ ಲ್ಯಾಂಪ್, ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್‍ನ್ನು ಪಡೆದಿದೆ. ಈ ಸ್ಕೂಟರ್ 115 ಕೆಜಿ ತೂಕವಿದ್ದು, 5.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ನೂತನ ಹೀರೋ ಡೆಸ್ಟಿನಿ 125, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡಿಸ್ಕ್ & ಡ್ರಮ್ ಬ್ರೇಕ್‌ನ್ನು ಹೊಂದಿದೆ. 10-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

ಹೀರೋ ಡೆಸ್ಟಿನಿಗೆ ಸುಜುಕಿ ಆಕ್ಸೆಸ್ 125 (Suzuki Access 125), ಟಿವಿಎಸ್ ಜುಪಿಟರ್ 125 (TVS Jupiter 125) ಹಾಗೂ ಹೋಂಡಾ ಆಕ್ಟಿವಾ 125, (Honda Activa 125) ಸ್ಕೂಟರ್‌ಗಳು ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಈ ಸ್ಕೂಟರ್ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, July 20, 2024, 10:30 [IST]
English summary
Hero destini 125 scooter on road price and emi details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+