ಪೆಟ್ರೋಲ್ ಸ್ಕೂಟರ್‌ಗೆ ಹೇಳಿ ಗುಡ್‍ಬೈ: ಹೀರೋ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಕ್ಯೂ ನಿಂತ ಜನ!
ದೇಶದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ದಿನನಿತ್ಯದ ಬಳಕೆಗೆ ದ್ವಿಚಕ್ರ ವಾಹನಗಳು ತೀರಾ ಅಗತ್ಯವಾಗಿವೆ. ಹೆಚ್ಚಿನ ಜನರು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ. ಪೆಟ್ರೋಲ್ ಸ್ಕೂಟರ್‌ಗಳಿಗಿಂತ ಅಗ್ಗವಾಗಿರುವುದು ಜನಪ್ರಿಯವಾಗಲು ಮುಖ್ಯ ಕಾರಣ. ಇನ್ನೊಂದು ಆಕರ್ಷಣೆಯೆಂದರೆ ಮನೆಯಲ್ಲಿ ಸುಲಭವಾಗಿ ಚಾರ್ಜ್ ಮಾಡಿ ಬಳಸುವುದು. ದ್ವಿಚಕ್ರ ವಾಹನ ವಿಭಾಗದಲ್ಲಿ ಬೈಕ್‌ಗಳಿಗೆ ಹೋಲಿಸಿದರೆ ಸ್ಕೂಟರ್‌ಗಳು ಗೇರ್‌ಲೆಸ್ ಆಗಿರುವುದರಿಂದ ಪುರುಷರು, ಮಹಿಳೆಯರು ಸೇರಿದಂತೆ ಎಲ್ಲ ವಯೋಮಾನದವರಿಗೂ ಇಷ್ಟವಾಗುತ್ತವೆ. ಇದರಿಂದ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ.
ಭಾರತದ ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೀರೋ ಮೋಟೊಕಾರ್ಪ್ (Hero MotoCorp), ದಶಕಗಳಿಂದ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಜನಪ್ರಿಯ ವಿಡಾ (Vida) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇತ್ತೀಚೆಗೆ, ವಿವಿಧ ಕಂಪನಿಗಳು ಸೆಪ್ಟೆಂಬರ್ ತಿಂಗಳ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಬಹಿರಂಗಪಡಿಸಿದೆ.

ಹೀರೋ ವಿಡಾ ಇ-ಸ್ಕೂಟರ್‌ಗಳಿಗೆ ಖರೀದಿದಾರರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀರೋ ಮೋಟೊಕಾರ್ಪ್, ಕಳೆದ ತಿಂಗಳು (ನವೆಂಬರ್ 2024) ಬರೋಬ್ಬರಿ 7,309 ಯುನಿಟ್ ವಿಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 3,047 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಭರ್ಜರಿ ಬೆಳವಣಿಗೆಯನ್ನು ಸಾಧಿಸಿದೆ.
ಸದ್ಯಕ್ಕೆ ಭಾರತದಲ್ಲಿ 116 ನಗರಗಳ 180 ಡೀಲರ್‌ಶಿಪ್‌ಗಳಲ್ಲಿ ನೂತನ ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ಖರೀದಿಗೆ ಲಭ್ಯವಿವೆ. ಗ್ರಾಹಕರಿಗೆ ಮತ್ತಷ್ಟು ಅನುಕೂಲವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೀರೋ ಮೋಟೊಕಾರ್ಪ್, ಎಥರ್ ಎನರ್ಜಿಯೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಇವರೆಡು ಕಂಪನಿಗಳ ಪಾಲುದಾರಿಕೆಯಲ್ಲಿ ಪ್ರಮುಖ ನಗರ ಹಾಗೂ ಪಟ್ಟಣಗಳಲ್ಲಿ 2,500 ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗಿದೆ.

ಈ ಹೀರೋ ವಿಡಾ ಇ-ಸ್ಕೂಟರ್ ವಿ1 ಪ್ಲಸ್ ಹಾಗೂ ವಿ1 ಪ್ರೊ ಎಂಬ 2 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. 3.44 ಮತ್ತು 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 100 ರಿಂದ 110 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ.
ಈ ಹೀರೋ ವಿಡಾ ವಿ1 ಪ್ಲಸ್ ಮಾದರಿಯು 3.44 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 100 ಕಿ.ಮೀ ಕ್ರಮಿಸುತ್ತದೆ. ವಿಡಾ ವಿ1 ಪ್ರೊ ರೂಪಾಂತರವು 3.94 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 110 ಕಿ.ಮೀ ರೇಂಜ್ ಅನ್ನು ನೀಡುತ್ತದೆ.
ಇವೆರೆಡು ಮಾದರಿ (ಮಾಡೆಲ್)ಗಳು ಒಂದೇ ತರಹದ 6 ಕೆಡಬ್ಲ್ಯೂ (kW) ಸಾಮರ್ಥ್ಯದ ಎಲೆಕ್ಟ್ರಿಕ್ ಮೋಟರ್‌ನ್ನು ಒಳಗೊಂಡಿವೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿವೆ. ಕೇವಲ 3.4 ಸೆಕೆಂಡುಗಳಲ್ಲಿ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿವೆ. ಸರಿ ಸುಮಾರು 125 ಕೆಜಿ ತೂಕವಿವೆ. ಹೀರೋ ವಿಡಾ ಮಾದರಿಗಳು ಮ್ಯಾಟ್ ಅಬ್ರಾಕ್ಸ್ ಆರೆಂಜ್, ಮ್ಯಾಟ್ ಪರ್ಲ್ ವೈಟ್, ಮ್ಯಾಟ್ ಸ್ಪೋರ್ಟ್ಸ್ ರೆಡ್, ಮ್ಯಾಟ್ ಸಯಾನ್ ಸೇರಿದಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾ\ಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








