ಮಸ್ತ್ ಲುಕ್.. ಬಳಕೆಗೂ ಯೋಗ್ಯ ಈ ಬೈಕ್‌ಗಳು.. ರೂ.79,950 ಬೆಲೆ, ಸಖತ್ ಮೈಲೇಜ್!
ಪ್ರತಿಯೊಬ್ಬರಿಗೂ ದಿನಬಳಕೆಗಾಗಿ ಹೊಸ ಬೈಕ್ ಖರೀದಿಸಬೇಕೆಂಬ ಆಸೆಯಿರುತ್ತದೆ. ಆದಾಗ್ಯೂ ಪ್ರೀಮಿಯಂ ಮೋಟಾರ್‌ಸೈಕಲ್‌ನ್ನು ಕೊಳ್ಳುವಷ್ಟು ಹಣವಿರುವುದಿಲ್ಲ. ನೀವು ಬಜೆಟ್ ಬೆಲೆಯಲ್ಲಿ ನೋಡುವುದಕ್ಕೆ ಆಕರ್ಷಕ ಹಾಗೂ ಬಳಕೆಗೂ ಯೋಗ್ಯವಾಗಿರುವ ಬೈಕ್‌ನ್ನು ಹುಡುಕುತ್ತಿದ್ದಿರಾ.. ಹಾಗಾದರೆ ಹೋಂಡಾ ಲಿವೋ (Honda Livo), ಹೀರೋ ಗ್ಲಾಮರ್ (Hero Glamour) ಮತ್ತು ಟಿವಿಎಸ್ ರೈಡರ್ 125 (TVS Raider 125) ಮೋಟಾರ್‌ಸೈಕಲ್‌ಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ಈ ಬೈಕ್‌ಗಳ ಬೆಲೆ (Price) ಮೈಲೇಜ್ (Mileage) ಹಾಗೂ ವಿಶೇಷತೆ (Specification) ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಹೋಂಡಾ ಲಿವೋ (Honda Livo) ಮೋಟಾರ್‌ಸೈಕಲ್ ಬಗ್ಗೆ ಮಾತನಾಡೋಣ. ಇದು ರೂ.79,950 ದಿಂದ ರೂ.83,950 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 109.51 ಸಿಸಿ ಏರ್-ಕೋಲ್ಡ್ ಫ್ಯುಯೆಲ್-ಇಂಜೆಕ್ಟ್ದ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.79 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 9.30 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಬೈಕ್ 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸ್ವಿಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆ ಸಲುವಾಗಿ ಡಿಸ್ಕ್/ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. ಬ್ಲ್ಯಾಕ್, ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಹಾಗೂ ಮ್ಯಾಟ್ ಕ್ರಸ್ಟ್ ಮೆಟಾಲಿಕ್ ಬಣ್ಣಗಳೊಂದಿಗೂ ಸಿಗುತ್ತದೆ.
ಹೀರೋ ಗ್ಲಾಮರ್ ಕುರಿತು ಹೇಳುವುದಾದರೆ, ಈ ಬೈಕ್ ರೂ.84,548 ದಿಂದ ರೂ.88,548 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 125 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 10.83 ಪಿಎಸ್ ಗರಿಷ್ಠ ಶಕ್ತಿ ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಗ್ಲಾಮರ್ ಮೋಟಾರ್‌ಸೈಕಲ್ ಫುಲ್-ಡಿಜಿಟಲ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಗೇರ್ ಪೊಸಿಷನ್ ಇಂಡಿಕೇಟರ್, ಎಲ್ಇಡಿ ಹೆಡ್‌ಲೈಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಮತ್ತು ಡಿಸ್ಕ್ ಬ್ರೇಕ್‌ನ್ನು ಹೊಂದಿದೆ. ಸ್ಪೋರ್ಟ್ಸ್ ರೆಡ್, ಟೊರ್ನಾಡೋ ಗ್ರೇ ಒಳಗೊಂಡಂತೆ ಹಲವು ಬಣ್ಣಗಳನ್ನು ಹೊಂದಿದೆ.
ನೂತನ ಟಿವಿಎಸ್ ರೈಡರ್ 125 ಬೈಕ್ ಬಗ್ಗೆ ಮಾತನಾಡುವುದಾದರೆ, ಇದು ರೂ.98 ಸಾವಿರದಿಂದ ರೂ.1.09 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 11.38 ಪಿಎಸ್ ಶಕ್ತಿ ಹಾಗೂ 11.2 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸರಿ ಸುಮಾರು 67 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ರೈಡರ್ 125 ಮೋಟಾರ್‌ಸೈಕಲ್ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಟೈಲ್ ಲೈಟ್, ಹ್ಯಾಲೊಜೆನ್ ಇಂಡಿಕೇಟರ್‌ಗಳು, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡಿಸ್ಕ್/ಡ್ರಮ್ ಬ್ರೇಕ್‌ನ್ನು ಹೊಂದಿದೆ. 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications