ಹೀರೋದ ಪಾಲುದಾರಿಕೆ ಸಂಸ್ಥೆಯಿಂದ ಸದ್ದಿಲ್ಲದೇ ಹೊಸ ಎಲೆಕ್ಟ್ರಿಕ್ ಬೈಕ್ ತಯಾರಿಕೆ: ಓಲಾ ರೋಡ್‌ಸ್ಟರ್‌ಗೆ ಫೈಟ್?
ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಕಳೆದ 2-3 ವರ್ಷದಿಂದ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಆದಾಗ್ಯೂ ಎಲೆಕ್ಟ್ರಿಕ್ ಬೈಕ್‌ಗಳ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆ ಪರಿಹಾರವಾಗಿ ಸಾಕಷ್ಟು ಕಂಪನಿಗಳು ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯವನ್ನು ಪಡೆದುಕೊಂಡಿರುವ ಹಲವು ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ್ನು ಹೊರತರುತ್ತಿವೆ. ನಂಬರ್ 1 ಎಲೆಕ್ಟ್ರಿಕ್ ವಾಹನ ತಯಾರಕ ಓಲಾ ಎಲೆಕ್ಟ್ರಿಕ್ (Ola Electric) ಕೂಡ ಆಗಸ್ಟ್ 15ರಂದು ಹೊಚ್ಚ ಹೊಸ ರೋಡ್‌ಸ್ಟರ್ ಸರಣಿ ಎಲೆಕ್ಟ್ರಿಕ್ ಬೈಕ್‌ನ್ನು ಬಿಡುಗಡೆಗೊಳಿಸಿತ್ತು.
ಇದೀಗ ಎಲೆಕ್ಟ್ರಿಕ್ ವಾಹನ ಉತ್ಪಾದನೆಯಲ್ಲಿ ಹೀರೋ ಮೋಟೋಕಾರ್ಪ್‌ನ (Hero Motocorp) ಪಾಲುದಾರಿಕೆ ಸಂಸ್ಥೆಯಾಗಿರುವ ಝೀರೋ ಮೋಟಾರ್‌ಸೈಕಲ್ಸ್ (Zero Motorcycles), ನೂತನ ಎಲೆಕ್ಟ್ರಿಕ್ ಬೈಕ್‌ವೊಂದನ್ನು ಸದ್ದಿಲ್ಲದೇ ಅಭಿವೃದ್ಧಿಪಡಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಬಗ್ಗೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಹೊಸ ಮೋಟಾರ್‌ಸೈಕಲ್ ಯುವ ಗ್ರಾಹಕರಿಗೆ ಹೇಳಿ ಮಾಡಿಸಿದ ರೀತಿಯಲ್ಲಿ ಇರಲಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗಬಹುದು ಎನ್ನಲಾಗಿದೆ.

ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಪೇಟೆಂಟ್ ಫೋಟೋಗಳ ಪ್ರಕಾರ, ಈ ಹೊಸ ಎಲೆಕ್ಟ್ರಿಕ್ ಬೈಕ್ ನೋಡಲು ಹೆಚ್ಚುಕಮ್ಮಿ ಹೋಂಡಾ ಗ್ರೋಮ್ (Honda Grom) ಮೋಟಾರ್‌ಸೈಕಲ್‌ಗೆ ಹೋಲಿಕೆಯಾಗುತ್ತಿದೆ. ಇದನ್ನು ಗಮನಿಸಿದಾಗ ಅಮೇರಿಕ ಮೂಲದ ಝೀರೋ ಮೋಟಾರ್‌ಸೈಕಲ್ಸ್ ನೂತನ ಎಲೆಕ್ಟ್ರಿಕ್ ಬೈಕ್‌ನ್ನು ಚಿಕ್ಕ ಗಾತ್ರದಲ್ಲಿ ನಗರ ಪ್ರಯಾಣಕ್ಕೆ ಸರಿಹೊಂದುವಂತೆ ತಯಾರಿಸಲು ಮುಂದಾಗಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.
ಗ್ರಾಹಕರ ಅನುಕೂಲಕ್ಕಾಗಿ ನೂತನ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನಲ್ಲಿ ಕಂಪನಿಯು ಹೊರತೆಗೆದು ಮತ್ತೆ ಹಾಕಬಹುದಾದ ಬ್ಯಾಟರಿ ಪ್ಯಾಕ್ ಬಳಕೆ ಮಾಡಲು ಯೋಜಿಸಿದೆ ಎಂದು ತಿಳಿದುಬಂದಿದೆ. ಈಗಿರುವ ಝೀರೋ ಎಲೆಕ್ಟ್ರಿಕ್ ಬೈಕ್‌ಗಳು, ಸ್ಥಿರ ಬ್ಯಾಟರಿ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿವೆ. ಆದಾಗ್ಯೂ ಈ ಎಲೆಕ್ಟ್ರಿಕ್ ಬೈಕ್ ಕಾರ್ಯಕ್ಷಮತೆ ಹಾಗೂ ಭಾರತದಲ್ಲಿ ಬಿಡುಗಡೆಯಾಗುವ ಕುರಿತಂತೆ ಯಾವುದೇ ಅಧಿಕೃತ ವಿವರಗಳು ದೊರೆತ್ತಿಲ್ಲ.

ದೇಶೀಯವಾಗಿ ಹಲವು ಎಲೆಕ್ಟ್ರಿಕ್ ಬೈಕ್‌ಗಳು ಖರೀದಿಗೆ ಸಿಗುತ್ತವೆ. ಈಚೆಗೆ ಮಾರಾಟಕ್ಕೆ ಬಂದಿರುವ ಓಲಾ ರೋಡ್‌ಸ್ಟರ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಗ್ಗೆ ಹೇಳುವುದಾದರೆ, ಇದು ರೋಡ್‌ಸ್ಟರ್ ಎಕ್ಸ್, ರೋಡ್‌ಸ್ಟರ್ & ರೋಡ್‌ಸ್ಟರ್ ಪ್ರೊ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ. ರೂ.74,999 ದಿಂದ ರೂ.2.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 200 ರಿಂದ 579 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.
ಓಬೆನ್ ರೋರ್ (Oben Rorr) ಸಹ ಪ್ರಮುಖ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಆಗಿದ್ದು, ರೂ.1,49,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 4.4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 187 ಕಿಲೋಮೀಟರ್ ಕ್ರಮಿಸುತ್ತದೆ. ಇಕೋ, ಸಿಟಿ ಮತ್ತು ಹ್ಯಾವೋಕ್ ಎಂಬ ರೈಡಿಂಗ್ ಮೋಡ್‌ಗಳನ್ನು ಪಡೆದಿದ್ದು, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಟಾರ್ಕ್ ಕ್ರಾಟೋಸ್ ಆರ್ (Tork Kratos R) ಎಲೆಕ್ಟ್ರಿಕ್ ಬೈಕ್‌ನ್ನು ಕೂಡ ಖರೀದಿದಾರರು ಇಷ್ಟಪಟ್ಟು ತೆಗೆದುಕೊಳ್ಳುತ್ತಾರೆ. ಈ ಮೋಟಾರ್‌ಸೈಕಲ್ ರೂ.1.67 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಹೊಂದಿದೆ. 4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 180 ಕಿಲೋಮೀಟರ್ ಓಡುತ್ತದೆ. ಜೊತೆಗೆ 105 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications