ಜನಸಾಮಾನ್ಯರು ಈ ಹೀರೋ ಬೈಕ್‌ನ್ನು ಸುಲಭವಾಗಿ ಖರೀದಿಸಬಹುದು.. ಭಾರೀ ಮೈಲೇಜ್, EMI ಎಷ್ಟು?

ಭಾರತದ ನಂಬರ್ 1 ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ 'ಹೀರೋ ಮೋಟೊಕಾರ್ಪ್' ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ 'ಪ್ಯಾಶನ್ ಪ್ಲಸ್' ಬೈಕ್ ಆಕರ್ಷಕ ವೈಶಿಷ್ಟ್ಯದೊಂದಿಗೆ ಲಭ್ಯವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಮೋಟಾರ್‌ಸೈಕಲ್‌ನ ಆನ್-ರೋಡ್ ಬೆಲೆ ಮತ್ತು ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.

ಬೆಂಗಳೂರಿನಲ್ಲಿ ಹೊಚ್ಚ ಹೊಸ ಹೀರೋ ಪ್ಯಾಶನ್ ಪ್ಲಸ್ (Hero Passion Plus) ಬೈಕ್ ರೂ.97,233 ಆನ್-ರೋಡ್ ದರವನ್ನು ಹೊಂದಿದೆ. ನೀವು ಈ ಮೋಟಾರ್‌ಸೈಕಲ್‌ನ್ನು ರೂ.10,000 ಡೌನ್ ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ಉಳಿದ ರೂ.87,233 ಸಾಲದ ಮೊತ್ತಕ್ಕೆ ಶೇಕಡ 9.7% ಬಡ್ಡಿ ದರದಲ್ಲಿ 3 ವರ್ಷದ (36 ತಿಂಗಳು) ಅವಧಿಗೆ ಮಾಸಿಕ ರೂ.2,802 ಇಎಂಐ (EMI) ಕಟ್ಟಬೇಕು.

Hero Passion Plus Bike On Road Price And Emi Details

ನೂತನ ಹೀರೋ ಪ್ಯಾಶನ್ ಪ್ಲಸ್ ಮೋಟಾರ್‌ಸೈಕಲ್‌ 97.2 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.02 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 8.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 4 - ಸ್ಪೀಡ್ ಗೇರ್ ಬಾಕ್ಸ್‌ನೊಂದಿಗೆ ದೊರೆಯಲಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡುತ್ತದೆ.

ಪ್ಯಾಶನ್ ಪ್ಲಸ್ ಬೈಕ್, ಬ್ಲ್ಯಾಕ್ ಹೆವಿ ಗ್ರೇ, ಬ್ಲ್ಯಾಕ್ ಗ್ರೇ ಸ್ಟ್ರೈಪ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 115 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್‌, 11 - ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.

Hero Passion Plus Bike On Road Price And Emi Details

ನೂತನ ಪ್ಯಾಶನ್ ಪ್ಲಸ್ ಮೋಟಾರ್‌ಸೈಕಲ್‌ ಸಸ್ಪೆನ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗ (ರೇರ್) 5 - ಸ್ಟೆಪ್ ಅಡ್ಜಸ್ಟ್ಏಬಲ್ ಕಾಯಿಲ್ ಸ್ಪ್ರಿಂಗ್‌ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಬ್ರೇಕಿಂಗ್ ಸಿಸ್ಟಮ್ ಕುರಿತು ಹೇಳುವುದಾದರೆ, ಸುರಕ್ಷತೆಯ ದೃಷ್ಟಿಯಿಂದ ಹ್ಯಾಂಡಲ್ ಬಾರ್‌ನ ಎರಡು ತುದಿಗಳಲ್ಲಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಈ ಪ್ಯಾಶನ್ ಪ್ಲಸ್ ಬೈಕ್ 18 - ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದ್ದು, ವಾಹನ ಸವಾರರಿಗೆ ರಸ್ತೆಯಲ್ಲಿ ಉತ್ತಮವಾದ ಹಿಡಿತವನ್ನು ಒದಗಿಸಲು 80/ 100-18 ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಗ್ರೌಂಡ್ ಕ್ಲಿಯರೆನ್ಸ್ 168 ಎಂಎಂ ಹಾಗೂ ಸೀಟ್ ಹೈಟ್ (ಆಸನ ಎತ್ತರ) 790 ಎಂಎಂ ಇದೆ.

ಹೀರೋ ಪ್ಯಾಶನ್ ಪ್ಲಸ್ (Hero Passion Plus) ಮೋಟಾರ್‌ಸೈಕಲ್‌ಗೆ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಹಾಗೂ ಬಜಾಜ್ ಪ್ಲಾಟಿನಾ 110 ಬೈಕ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ. ಈ ಬೈಕ್ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, May 22, 2024, 15:46 [IST]
English summary
Hero passion plus bike on road price and emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+