Hero: ಮಧ್ಯಮ ವರ್ಗದ ಜನರು ಖರೀದಿಸಬಹುದಾದ ಜನಪ್ರಿಯ ಬೈಕ್‌ಗಳಿವು.. ಕಡಿಮೆ ಬೆಲೆ, ಭಾರೀ ಮೈಲೇಜ್!
ದೇಶದ ನಂಬರ್ 1 ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಹೀರೋ ಮೋಟೊಕಾರ್ಪ್ (Hero MotoCorp) ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಬೈಕ್‌ಗಳು ದಶಕಗಳಿಂದ ಮಧ್ಯಮ ವರ್ಗದವರ ಮನಸ್ಸನ್ನು ಗೆದ್ದಿವೆ. ಹಳ್ಳಿಯಿಂದ ದಿಲ್ಲಿವರೆಗಿನ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ಕೂಡ ಹೊಚ್ಚ ಹೊಸ ಮೋಟಾರ್‌ಸೈಕಲ್‌ನ್ನು ಮನೆಗೆ ತರಲು ಆಲೋಚಿಸುತ್ತಿದ್ದೀರಾ.. ನಾವಿಲ್ಲಿ ಯುವಕರು ಮೆಚ್ಚುವಂತಹ ಹೀರೋದ ಜನಪ್ರಿಯ ಬೈಕ್‌ಗಳ ಕುರಿತಂತೆ ವಿವರಿಸಿದ್ದೇವೆ.
ಮೊದಲಿಗೆ ಹೀರೋ ಪ್ಯಾಶನ್ ಪ್ಲಸ್ (Hero Passion Plus) ಮೋಟಾರ್‌ಸೈಕಲ್ ಬಗ್ಗೆ ಮಾತನಾಡೋಣ. ಇದು ರೂ.77,361 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 97.2 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8.02 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 8.05 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ದೊರೆಯಲಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಪ್ಯಾಶನ್ ಪ್ಲಸ್ ಬೈಕ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಐಡಲ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಬ್ಲ್ಯಾಕ್ ಹೆವಿ ಗ್ರೇ, ಬ್ಲ್ಯಾಕ್ ಗ್ರೇ ಸ್ಟ್ರೈಪ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಕೂಡ ದೊರೆಯುತ್ತದೆ. 115 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್, 11-ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.
ಹೀರೋ ಗ್ಲಾಮರ್ (Hero Glamour) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.83,798 ದಿಂದ ರೂ.87,798 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 125 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 10.83 ಪಿಎಸ್ ಗರಿಷ್ಠ ಶಕ್ತಿ ಹಾಗೂ 10.6 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್ ಪಡೆದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಹೀರೋ ಗ್ಲಾಮರ್ ಮೋಟಾರ್‌ಸೈಕಲ್ ಫುಲ್-ಡಿಜಿಟಲ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಗೇರ್ ಪೊಸಿಷನ್ ಇಂಡಿಕೇಟರ್, ಎಲ್ಇಡಿ ಹೆಡ್ ಲೈಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಮತ್ತು ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. ಈ ಮೋಟಾರ್‌ಸೈಕಲ್ 122.5 ಕೆಜಿ ತೂಕವಿದ್ದು, ಗ್ರೌಂಡ್ ಕ್ಲಿಯರೆನ್ಸ್ 180 ಎಂಎಂ ಇದೆ.
ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಬಗ್ಗೆ ಮಾತನಾಡುವುದಾದರೆ, ಇದು ಮಧ್ಯಮ ವರ್ಗದವರ ನೆಚ್ಚಿನ ಬೈಕ್ ಎಂದೇ ಹೇಳಬಹುದು. ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುತ್ತದೆ. ರೂ.75,191 ದಿಂದ ರೂ.77,896 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 97.2 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 80.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೀರೋ ಸೂಪರ್ ಸ್ಪ್ಲೆಂಡರ್ (Hero Super Splendor) ಕುರಿತಂತೆ ಹೇಳುವುದಾದರೆ, ಈ ಬೈಕ್ ರೂ.80,798 ದಿಂದ ರೂ.86,298 (ಎಕ್ಸ್ ಶೋರೂಂ) ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. 124.7 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಎಂಜಿನ್ ಹೊಂದಿದ್ದು, 55 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಕಡೆಯದಾಗಿ ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC) ಮೋಟಾರ್‌ಸೈಕಲ್ ಬಗ್ಗೆ ಮಾತನಾಡೋಣ. ಇದು ರೂ.83,100 ದಿಂದ ರೂ.87,100 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124.7 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 68 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








