Hero: 70 Km ಮೈಲೇಜ್.. ಬಡವರ ಬಂಡಿ, ಸ್ಪ್ಲೆಂಡರ್ ಪ್ಲಸ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಭಾರತದಲ್ಲಿ ಹೀರೋ ಸ್ಪ್ಲೆಂಡರ್ (Hero Splendor) ನಂಬರ್ 1 ಬೈಕ್ ಆಗಿದ್ದು, ಮಧ್ಯಮ ವರ್ಗದ ಜನರ ಜೀವನಾಧಾರವಾಗಿದೆ. ಇದು ದೀರ್ಘಕಾಲ ಬಾಳಿಕೆ ಬರುವುದರೊಂದಿಗೆ ಗರಿಷ್ಠ ಮೈಲೇಜ್ ನೀಡುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಮನೆಗೆ ತರಲು ಆಲೋಚಿಸಿದ್ದರೆ.. 'ಹೀರೋ ಸ್ಪ್ಲೆಂಡರ್ ಪ್ಲಸ್' ಉತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ನೂತನ ಬೈಕ್‌ನ ಆನ್-ರೋಡ್ ಬೆಲೆ (On Road Price), ಮೈಲೇಜ್ (Mileage) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಮೋಟಾರ್‌ಸೈಕಲ್‌ನ ವಿವಿಧ ರೂಪಾಂತರಗಳು (ವೇರಿಯೆಂಟ್) ಖರೀದಿಗೆ ಲಭ್ಯವಿವೆ. ಇದರ 'ಸೆಲ್ಫ್ ಅಲಾಯ್' ರೂಪಾಂತರ, ರೂ.92,000 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.10,000 ಡೌನ್ ಪೇಮೆಂಟ್ ಪಾವತಿಸಿ ಈ ಬೈಕ್‌ನ್ನು ಕೊಂಡುಕೊಂಡರೆ, ರೂ.82,000 ವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿದರದಲ್ಲಿ 3 ವರ್ಷಕ್ಕೆ ತಿಂಗಳಿಗೆ ರೂ.2,500 ವರೆಗೆ ಇಎಂಐ ಕಟ್ಟಬೇಕು.

ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್‌ನ 'ಸೆಲ್ಫ್ ಅಲಾಯ್ ಐ3ಎಸ್' ರೂಪಾಂತರ, ರೂ.94,000 ವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.10,000 ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.84,000 ವರೆಗೆ ಸಾಲ ಬಾಕಿಯುತ್ತದೆ. ಶೇಕಡ 8% ಬಡ್ಡಿ ಹಾಕಿ, 3 ವರ್ಷದ ಅವಧಿಗೆ ಮಾಸಿಕ ರೂ.2,600 ವರೆಗೆ ಇಎಂಐ ಪಾವತಿ ಮಾಡಬೇಕು.
ಈ ಮೋಟಾರ್‌ಸೈಕಲ್‌ನ ಬ್ಲ್ಯಾಕ್ & ಅಸೆಂಟ್ ರೂಪಾಂತರ, ರೂ.97,000 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ಈ ಬೈಕ್‌ನ್ನು ರೂ.10,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ರೂ.87,000 ವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಕ್ಕೆ ತಿಂಗಳಿಗೆ ರೂ.2,700 ವರೆಗೆ ಇಎಂಐ ಕಟ್ಟಬೇಕು.

ನೂತನ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್, 97.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಮೋಟಾರ್‌ಸೈಕಲ್ ಫೋರ್ಸ್ ಸಿಲ್ವರ್, ಬ್ಲ್ಯಾಕ್ ಗ್ರೇ ಸ್ಟ್ರೈಪ್, ಬ್ಲ್ಯಾಕ್ ರೆಡ್ ಪರ್ಪಲ್ ಮತ್ತು ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಬರೋಬ್ಬರಿ 112 ಕೆಜಿ ತೂಕವಿದ್ದು, 9.8 ಲೀಟರ್‌ನ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus XTEC) ಬೈಕ್‌ನ್ನು ಕೂಡ ಗ್ರಾಹಕರು ಕೊಂಡುಕೊಳ್ಳಬಹುದು. ಇದು ರೂ.80,161 ರಿಂದ ರೂ.83,461 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಸಾಮರ್ಥ್ಯದ ಎಂಜಿನ್ ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ಸೂಪರ್ ಸ್ಪ್ಲೆಂಡರ್ (Hero Super Splendor) ಬಗ್ಗೆ ಹೇಳುವುದಾದರೆ, ಈ ಮೋಟಾರ್‌ಸೈಕಲ್ ರೂ.82,298 ರಿಂದ ರೂ.86,298 ಎಕ್ಸ್ ಶೋರೂಂ ದರವನ್ನು ಪಡೆದಿದೆ. 124.7 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸವಾರರಿಗೆ ಗರಿಷ್ಠ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ನಿಮ್ಮ ಗಮ್ಮನಕ್ಕೆ.. ಈ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








