Hero Vida: ನಿಮ್ಮ ಮಡದಿಗೆ ಉಡುಗೊರೆ ನೀಡಲು ಹೀರೋ ವಿಡಾ ಇ-ಸ್ಕೂಟರ್ ಬೆಸ್ಟ್.. ಬೆಲೆ ಎಷ್ಟು, ವೈಶಿಷ್ಟ್ಯಗಳೇನು?
ದೇಶದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ದಿನನಿತ್ಯದ ಬಳಕೆಗೆ ದ್ವಿಚಕ್ರ ವಾಹನಗಳು ತೀರಾ ಅಗತ್ಯವಾಗಿವೆ. ಬೈಕ್‌ಗಳಿಗೆ ಹೋಲಿಸಿದರೆ ಸ್ಕೂಟರ್‌ಗಳು ಗೇರ್‌ಲೆಸ್ ಆಗಿರುವುದರಿಂದ ಪುರುಷರು, ಮಹಿಳೆಯರು ಸೇರಿದಂತೆ ಎಲ್ಲ ವಯೋಮಾನದವರಿಗೂ ಇಷ್ಟವಾಗುತ್ತವೆ. ನಿಮ್ಮ ಹೆಂಡತಿಗೆ ಹೊಚ್ಚ ಹೊಸ ಸ್ಕೂಟರ್‌ನ್ನು ಉಡುಗೊರೆಯಾಗಿ ನೀಡಲು ಯೋಚಿಸಿದ್ದೀರಾ.. ಹಾಗಾದರೆ ಹೀರೋ ವಿಡಾ (Hero Vida) ಎಲೆಕ್ಟ್ರಿಕ್ ಸ್ಕೂಟರ್ ಉತ್ತಮ ಆಯ್ಕೆಯಾಗಲಿದೆ. ಇಲ್ಲಿ ನೂತನ ವಿಡಾ ಸ್ಕೂಟರ್‌ನ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು: ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ರೂ.1.20 ಲಕ್ಷದಿಂದ ರೂ.1.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿ1 ಪ್ಲಸ್ (V1 Plus) ಮತ್ತು ವಿ1 ಪ್ರೊ (V1 Pro) ಎಂಬ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಬ್ಯಾಟರಿ, ಕಾರ್ಯಕ್ಷಮತೆ: ನೂತನ ಹೀರೋ ವಿಡಾ ವಿ1 ಪ್ಲಸ್ ಮಾದರಿಯು 3.44 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 100 ಕಿ.ಮೀ ಕ್ರಮಿಸುತ್ತದೆ. ವಿಡಾ ವಿ1 ಪ್ರೊ ರೂಪಾಂತರವು 3.94 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 110 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.
ಗರಿಷ್ಠ ವೇಗ: ಇವೆರೆಡು ಮಾದರಿ (ಮಾಡೆಲ್)ಗಳು ಒಂದೇ ತರಹದ 6 ಕೆಡಬ್ಲ್ಯೂ (kW) ಸಾಮರ್ಥ್ಯದ ಎಲೆಕ್ಟ್ರಿಕ್ ಮೋಟರ್‌ನ್ನು ಒಳಗೊಂಡಿವೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿವೆ. ಕೇವಲ 3.4 ಸೆಕೆಂಡುಗಳಲ್ಲಿ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿವೆ. ಸರಿ ಸುಮಾರು 125 ಕೆಜಿ ತೂಕವಿವೆ.

ವೈಶಿಷ್ಟ್ಯಗಳು: ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್ ರೂಪಾಂತರಗಳು ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲ್ಇಡಿ ಲೈಟಿಂಗ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿವೆ. ಇಕೋ, ರೈಡ್, ಸ್ಪೋರ್ಟ್ ಮತ್ತು ಕಸ್ಟಮ್ ಎಂಬ 4 ರೈಡಿಂಗ್ ಮೋಡ್‌ಗಳನ್ನು ಹೊಂದಿವೆ.
ಬಣ್ಣಗಳು: ಹೀರೋ ವಿಡಾ ಮಾದರಿಗಳು ಮ್ಯಾಟ್ ಅಬ್ರಾಕ್ಸ್ ಆರೆಂಜ್, ಮ್ಯಾಟ್ ಪರ್ಲ್ ವೈಟ್, ಮ್ಯಾಟ್ ಸ್ಪೋರ್ಟ್ಸ್ ರೆಡ್, ಮ್ಯಾಟ್ ಸಯಾನ್ ಸೇರಿದಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತವೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಹಾಗೂ ಡ್ರಮ್ ಬ್ರೇಕ್‌ನ್ನು ಒಳಗೊಂಡಿದ್ದು, 12-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿವೆ.
ನೇರ ಪ್ರತಿಸ್ಪರ್ಧಿ: ಹೀರೋ ವಿಡಾ ರೂಪಾಂತರಗಳಿಗೆ ಟಿವಿಎಸ್ ಐಕ್ಯೂಬ್ (TVS iQube) ಇ-ಸ್ಕೂಟರ್ ಪ್ರಬಲ ಎದುರಾಳಿಯಾಗಿದೆ. ಐಕ್ಯೂಬ್, ಐಕ್ಯೂಬ್ ಎಸ್ ಹಾಗೂ ಐಕ್ಯೂಬ್ ಎಸ್‌ಟಿ ಎಂಬ 3 ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಿಗುತ್ತದೆ. ರೂ.94,999 ದಿಂದ ರೂ.185,373 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 75 ಕಿಲೋಮೀಟರ್ ರಿಂದ 150 ಕಿಲೋಮೀಟರ್ ಓಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








