Hero: ಹೀರೋ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಮನಸೋತ ಗ್ರಾಹಕರು.. ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಮಾರಾಟ!
ಭಾರತದ ವಿಶ್ವಾಸಾರ್ಹ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿ ಹೀರೋ ಮೋಟೊಕಾರ್ಪ್ (Hero MotoCorp), ದಶಕಗಳಿಂದ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಜನಪ್ರಿಯ ವಿಡಾ (Vida) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ವಿವಿಧ ಕಂಪನಿಗಳು ಸೆಪ್ಟೆಂಬರ್ ತಿಂಗಳ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, 'ಹೀರೋ ವಿಡಾ' ಇ-ಸ್ಕೂಟರ್‌ಗಳಿಗೆ ಖರೀದಿದಾರರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೀರೋ ಮೋಟೊಕಾರ್ಪ್, ಕಳೆದ ತಿಂಗಳು (ಸೆಪ್ಟೆಂಬರ್ 2024) ಬರೋಬ್ಬರಿ 4,174 ಯುನಿಟ್ ವಿಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 533 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 683% ಪ್ರಗತಿ ಸಾಧಿಸಿದೆ.

ಈ ವರ್ಷ (2024) ಹೀರೋ ಕಂಪನಿಗೆ ಮಹತ್ವದ ವರ್ಷವಾಗಿದ್ದು, ಜನವರಿಯಿಂದ ಸೆಪ್ಟೆಂಬರ್ ನಡುವಿನ ಅವಧಿಯಲ್ಲಿ 27,265 ಯುನಿಟ್ ವಿಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸಿದೆ. ಈ ಮೂಲಕ ಶೇಕಡ 498% ಬೆಳವಣಿಗೆ ಕಂಡಿದೆ. 2023ರಲ್ಲಿ ಜನವರಿಯಿಂದ ಸೆಪ್ಟೆಂಬರ್‌ವರೆಗೆ ಕೇವಲ 4,558 ಯುನಿಟ್‌ಗಳನ್ನು ಮಾತ್ರ ಮಾರಾಟ ಮಾಡಲಾಗಿತ್ತು.
ಹೀರೋ ಮೋಟೊಕಾರ್ಪ್ ಉತ್ತಮ ಸಂಖ್ಯೆಯಲ್ಲಿ ವಿಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದ ಹಿನ್ನೆಲೆ, ಈ ಸೆಪ್ಟೆಂಬರ್‌ನಲ್ಲಿ ದೇಶೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಶೇಕಡ 5% ಪಾಲನ್ನು ಸಹ ಹೊಂದಿದೆ. ಆದರೂ ಪ್ರಖ್ಯಾತ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಾದ ಓಲಾ ಎಲೆಕ್ಟ್ರಿಕ್ (27%), ಬಜಾಜ್ ಆಟೋ (21.47%), ಟಿವಿಎಸ್ ಮೋಟಾರ್ (20.26%) ಹಾಗೂ ಎಥರ್ ಎನರ್ಜಿಗಿಂತ (14%) ಹಿಂದಿದೆ.

ಸದ್ಯ, ದೇಶಾದ್ಯಂತ 116 ನಗರಗಳ 180 ಡೀಲರ್‌ಶಿಪ್‌ಗಳಲ್ಲಿ ನೂತನ ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳು ಖರೀದಿಗೆ ಲಭ್ಯವಿವೆ. ಗ್ರಾಹಕರಿಗೆ ಮತ್ತಷ್ಟು ಅನುಕೂಲವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೀರೋ ಮೋಟೊಕಾರ್ಪ್, ಎಥರ್ ಎನರ್ಜಿಯೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಇವರೆಡು ಕಂಪನಿಗಳ ಪಾಲುದಾರಿಕೆಯಲ್ಲಿ ಪ್ರಮುಖ ನಗರ ಹಾಗೂ ಪಟ್ಟಣಗಳಲ್ಲಿ 2,500 ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗಿದೆ.
ಹೊಚ್ಚ ಹೊಸ ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್ (Hero Vida Electric Scooter), ರೂ.1.20 ರಿಂದ ರೂ.1.50 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ವಿ1 ಪ್ಲಸ್ ಹಾಗೂ ವಿ1 ಪ್ರೊ ಎಂಬ 2 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. 3.44 ಮತ್ತು 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 100 ರಿಂದ 110 ಕಿಲೋಮೀಟರ್‌ವರೆಗೂ ಕ್ರಮಿಸುತ್ತದೆ.

ಒಟ್ಟಾರೆಯಾಗಿ ಹೀರೋ ವಿಡಾ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದ ಅಂಕಿಸಂಖ್ಯೆಯನ್ನು ಗಮನಿಸಿದರೆ, ದಿನದಿಂದ ದಿನಕ್ಕೆ ಉತ್ತಮವಾದ ಬೇಡಿಕೆ ಪಡೆದುಕೊಳ್ಳುತ್ತಿದೆ ಎಂಬುದನ್ನು ಸುಲಭವಾಗಿ ಹೇಳಬಹುದು. ಈ ತಿಂಗಳು ದಸರಾ ಹಾಗೂ ದೀಪಾವಳಿ ಹಬ್ಬಗಳು ಇರುವುದರಿಂದ ವಿಡಾ ಸ್ಕೂಟರ್‌ಗಳು ಮತ್ತಷ್ಟು ಬೇಡಿಕೆ ಪಡೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








