Hero: ಸದ್ದಿಲ್ಲದೇ ಕಡಿಮೆ ಬೆಲೆಗೆ ಹೊಸ ಹೀರೋ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ... ಭಾರೀ ವಿಶೇಷತೆಗಳಿವೆ!
ಹೀರೋ ಮೋಟೊಕಾರ್ಪ್ (Hero MotoCorp), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ವಿಡಾ (Vida) ಸರಣಿಯ ವಿ1 ಪ್ಲಸ್ ಹಾಗೂ ವಿ1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಖರೀದಿಸುವ ಗ್ರಾಹಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಓಲಾ ಎಲೆಕ್ಟ್ರಿಕ್, ಎಥರ್ ಎನರ್ಜಿ, ಟಿವಿಎಸ್ ಮೋಟಾರ್ ಮತ್ತು ಬಜಾಜ್ ಆಟೋ ಕಂಪನಿಗಳ ಇ-ಸ್ಕೂಟರ್‌ಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಬುಧವಾರ ಸದ್ದಿಲ್ಲದೇ 'ಹೀರೋ ಮೋಟೊಕಾರ್ಪ್' ಹೊಚ್ಚ ಹೊಸ ವಿಡಾ ವಿ2 (Vida V2) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಬಿಡುಗಡೆಗೊಳಿಸಿದೆ.
ನೂತನ 'ಹೀರೋ ವಿಡಾ ವಿ2' ಎಲೆಕ್ಟ್ರಿಕ್ ಸ್ಕೂಟರ್ ವಿ2 ಲೈಟ್ (V2 Lite), ವಿ2 ಪ್ಲಸ್ (V2 Plus) ಹಾಗೂ ವಿ2 ಪ್ರೊ (V2 Pro) ಎಂಬ ಮೂರು ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಒಂದೊಂದು ರೂಪಾಂತರಗಳು ಸಹ ಹತ್ತಾರು ಹೊಸತನಗಳಿಗೆ ಸಾಕ್ಷಿಯಾಗಿವೆ.

ಹೀರೋ ವಿಡಾ ವಿ2 ಲೈಟ್ ಎಲೆಕ್ಟ್ರಿಕ್ ಸ್ಕೂಟರ್, ರೂ.96,000 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 94 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 69 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಜೊತೆಗೆ ರೈಡ್ & ಇಕೋ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.
ಹೀರೋ ವಿಡಾ ವಿ2 ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್, ರೂ.1.15 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 3.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 143 ಕಿಲೋಮೀಟರ್ ಕ್ರಮಿಸುತ್ತದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇಕೋ, ರೈಡ್ ಮತ್ತು ಸ್ಪೋರ್ಟ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ಪಡೆದಿದೆ.

ಹೀರೋ ವಿಡಾ ವಿ2 ಪ್ರೊ ಎಲೆಕ್ಟ್ರಿಕ್ ಸ್ಕೂಟರ್, ರೂ.1.35 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 3.94 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 165 ಕಿಲೋಮೀಟರ್ ಓಡುತ್ತದೆ. 90 ಟಾಪ್ ಸ್ಪೀಡ್‌ನ್ನು ಹೊಂದಿದೆ. ಇಕೋ, ರೈಡ್, ಸ್ಪೋರ್ಟ್ ಮತ್ತು ಕಸ್ಟಮ್ ಎಂಬ 4 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.
ನೂತನ ಹೀರೋ ವಿಡಾ ವಿ2 ಎಲೆಕ್ಟ್ರಿಕ್ ಸ್ಕೂಟರ್, ವಿನ್ಯಾಸವು ಹೆಚ್ಚು-ಕಮ್ಮಿ ಹಳೆಯ ವಿಡಾ ವಿ1 ಇ-ಸ್ಕೂಟರ್‌ಗೆ ಹೋಲಿಕೆಯಾಗುತ್ತದೆ. ಜೊತೆಗೆ ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮ್ಯಾಟ್ ನೆಕ್ಸಸ್ ಬ್ಲೂ-ಗ್ರೇ ಹಾಗೂ ಗ್ಲೋಸಿ ಸ್ಪೋರ್ಟ್ಸ್ ರೆಡ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೇಶೀಯ ಖರೀದಿದಾರರಿಗೆ ಲಭ್ಯವಾಗಲಿದೆ.
ಎಲ್ಲ ಹೀರೋ ವಿಡಾ ವಿ2 ಎಲೆಕ್ಟ್ರಿಕ್ ಸ್ಕೂಟರ್‌ನ ರೂಪಾಂತರಗಳು, ಬಹುತೇಕ ಒಂದೇ ರೀತಿಯಾದ ವೈಶಿಷ್ಟ್ಯಗಳನ್ನು ಒಳಗೊಂಡಿವೆ. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ರೀ - ಜೆನ್ ಬ್ರೇಕಿಂಗ್, ಕೀಲೆಸ್ ಎಂಟ್ರಿ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಪಡೆದಿವೆ.
ಹೊಸ ಹೀರೋ ವಿಡಾ ವಿ2 ಎಲೆಕ್ಟ್ರಿಕ್ ಸ್ಕೂಟರ್, 5 ವರ್ಷ ಅಥವಾ 50,000 ಕಿಲೋಮೀಟರ್‌ಗಳ ವಾರಂಟಿ ಹೊಂದಿದೆ. ಇದರ ಬ್ಯಾಟರಿ ಪ್ಯಾಕ್ 3 ವರ್ಷ ಅಥವಾ 30,000 ಕಿಲೋಮೀಟರ್‌ಗಳ ವಾರಂಟಿಯನ್ನು ಒಳಗೊಂಡಿದೆ. ದೇಶಾದ್ಯಂತ 250ಕ್ಕೂ ಹೆಚ್ಚು ನಗರಗಳಲ್ಲಿರುವ 3,100ಕ್ಕೂ ಅಧಿಕ ಹೀರೋ ಚಾರ್ಜಿಂಗ್ ಪಾಯಿಂಟ್‌ಗಳಲ್ಲಿ ಈ ಸ್ಕೂಟರ್‌ಗಳನ್ನು ಸುಲಭವಾಗಿ ಚಾರ್ಜ್ ಮಾಡಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








