Hero: ಯಾರು ಖರೀದಿಸುತ್ತಿಲ್ಲ.. ಈ ಹೀರೋ ಜನಪ್ರಿಯ ಬೈಕ್‌ಗಳ ಮಾರಾಟ ದಿಢೀರ್ ಸ್ಥಗಿತ!

ಹೀರೋ ಮೋಟೋಕಾರ್ಪ್ (Hero MotoCorp) ಪ್ರಖ್ಯಾತ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿದ್ದು, ಮಹಾನಗರಗಳಿಂದ ಹಿಡಿದು ಹಳ್ಳಿಗಳವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು 4,59,805 ಯುನಿಟ್ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡಿದ್ದು, 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 4,91,050 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ ಶೇಕಡ 6.4% ಕುಸಿತವಾಗಿದೆ. ಆದರೂ ನಂಬರ್ 1 ಸ್ಥಾನದಲ್ಲಿ ಮುಂದುವರಿದಿದೆ.

ಸದ್ಯ ಹೀರೋ ಮೋಟೋಕಾರ್ಪ್ ಧಿಡೀರನೇ ಜನಪ್ರಿಯ ಮೋಟಾರ್‌ಸೈಕಲ್‌ಗಳಾದ ಎಕ್ಸ್‌ಟ್ರೀಮ್ 200ಎಸ್ 4ವಿ (Xtreme 200S 4V) ಮತ್ತು ಎಕ್ಸ್‌ಪಲ್ಸ್ 200ಟಿ 4ವಿ (XPulse 200T 4V) ಮಾರಾಟವನ್ನು ಸ್ಥಗಿತಗೊಳಿಸಿದೆ. ಈ ಬೈಕ್‌ಗಳ ಮಾರಾಟ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಕುಸಿತವಾದ ಹಿನ್ನೆಲೆ, ಕಂಪನಿಯು ಇಂತಹ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.

Hero Xtreme 200S 4V XPulse 200T 4V Bikes Discontinued In India Details

ಹೀರೋ ಎಕ್ಸ್‌ಟ್ರೀಮ್ 200ಎಸ್ 4ವಿ ವಿಶೇಷತೆಗಳೇನು: ಈ ಬೈಕ್ ರೂ.1.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿತ್ತು. 199.6 ಸಿಸಿ ಫೋರ್-ವಾಲ್ವ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 19.17 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 17.35 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತಿತ್ತು. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿತ್ತು.

ನೂತನ ಎಕ್ಸ್‌ಟ್ರೀಮ್ 200ಎಸ್ 4ವಿ ಮೋಟಾರ್‌ಸೈಕಲ್‌ 40 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತಿತ್ತು. ಎಲ್‌ಇಡಿ ಹೆಡ್‌ಲೈಟ್, ಎಲ್‌ಇಡಿ ಟೈಲ್ ಲೈಟ್, ಗೇರ್ ಪೊಸಿಷನ್ ಇಂಡಿಕೇಟರ್‌, ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಕಾಲ್ ಅಲರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿತ್ತು.

Hero Xtreme 200S 4V XPulse 200T 4V Bikes Discontinued In India Details

ಈ ಎಕ್ಸ್‌ಟ್ರೀಮ್ 200ಎಸ್ 4ವಿ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿತ್ತು. ಸವಾರರ ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿತ್ತು. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿತ್ತು.

ಹೀರೋ ಎಕ್ಸ್‌ಪಲ್ಸ್ 200ಟಿ 4ವಿ ವಿಶೇಷತೆಗಳೇನು: ಈ ಮೋಟಾರ್‌ಸೈಕಲ್‌ ರೂ.1.24 ಲಕ್ಷದಿಂದ ರೂ.1.30 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿತ್ತು. ಇದರ 199.5 ಸಿಸಿ ಸಿಲಿಂಡರ್ ಏರ್/ಆಯಿಲ್ ಕೋಲ್ಡ್ ಪೆಟ್ರೋಲ್ ಎಂಜಿನ್ 19.1 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 17.35 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತಿತ್ತು.

Hero Xtreme 200S 4V XPulse 200T 4V Bikes Discontinued In India Details

ಈ ಎಕ್ಸ್‌ಪಲ್ಸ್ 200ಟಿ 4ವಿ ಬೈಕ್ 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದ್ದು, 44.68 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತಿತ್ತು. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್‌, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿತ್ತು.

ಹೊಸ ಎಕ್ಸ್‌ಪಲ್ಸ್ 200ಟಿ 4ವಿ ಮೋಟಾರ್‌ಸೈಕಲ್‌ನ ಸೀಟ್ ಹೈಟ್ 795 ಎಂಎಂ ಮತ್ತು ಗ್ರೌಂಡ್ ಕ್ಲಿಯರೆನ್ಸ್ 177 ಎಂಎಂ ಇತ್ತು. 155 ಕೆಜಿ ತೂಕವಿದ್ದ ಈ ಬೈಕ್, 13-ಲೀಟರ್ ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿತ್ತು. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡಿದಿತ್ತು. ಜೊತೆಗೆ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿತ್ತು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, December 13, 2024, 18:18 [IST]
English summary
Hero xtreme 200s 4v xpulse 200t 4v bikes discontinued in india details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+