ರೂ.25,000 ಡೌನ್-ಪೇಮೆಂಟ್ ಮಾಡಿ ಹೋಂಡಾ ಆಕ್ಟಿವಾ ಸ್ಕೂಟರ್ ಖರೀದಿಸಲು ಯೋಚಿಸಿದ್ದೀರಾ.. ತಿಂಗಳ EMI ಎಷ್ಟು?
ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India) ಕಂಪನಿಯ ಆಕ್ಟಿವಾ 125 (Activa 125) ಜನಪ್ರಿಯ ಸ್ಕೂಟರ್ ಆಗಿ ಹೊರಹೊಮ್ಮಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈ ಸ್ಕೂಟರ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಆಕ್ಟಿವಾ 125 ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ ರೂ.25,000 ಡೌನ್-ಪೇಮೆಂಟ್ ಪಾವತಿ ಮಾಡಿ, ಈ ಹೊಸ ಸ್ಕೂಟರ್‌ನ್ನು ತೆಗೆದುಕೊಂಡರೆ, ತಿಂಗಳಿಗೆ ಎಷ್ಟು ಇಎಂಐ ಕಟ್ಟಬೇಕು ಎಂಬುದರ ಕುರಿತಂತೆ ತಿಳಿಸಿಕೊಟ್ಟಿದ್ದೇವೆ.
ಬೆಂಗಳೂರಿನಲ್ಲಿ ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರ 'ಡ್ರಮ್' ರೂಪಾಂತರ ರೂ.1.05 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.25,000 ಡೌನ್-ಪೇಮೆಂಟ್ ಕಟ್ಟಿ ಈ ಸ್ಕೂಟರ್‌ನ್ನು ಮನೆಗೆ ತಂದರೆ, ರೂ.80,000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಕ್ಕೆ ತಿಂಗಳಿಗೆ ರೂ.2,700 ವರೆಗೆ ಇಎಂಐ ಪಾವತಿಸಬೇಕು.

ಆಕ್ಟಿವಾ 125 ಸ್ಕೂಟರ್‌ನ 'ಡ್ರಮ್ ಅಲಾಯ್' ರೂಪಾಂತರ, ರೂ.1.09 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.25,000 ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, ರೂ.84,000 ವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ 8% ಬಡ್ಡಿ ಹಾಕಿ, 3 ವರ್ಷಗಳಿಗೆ (36 ತಿಂಗಳು) ಮಾಸಿಕ ರೂ.2,900 ವರೆಗೆ ಇಎಂಐ ಕಟ್ಟಬೇಕು.
ನೂತನ ಹೋಂಡಾ ಆಕ್ಟಿವಾ 125 ಸ್ಕೂಟರ್‌ನ 'ಡಿಸ್ಕ್' ರೂಪಾಂತರ, ರೂ.1.13 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.25,000 ಡೌನ್-ಪೇಮೆಂಟ್ ಕಟ್ಟಿ ಈ ಸ್ಕೂಟರ್‌ನ್ನು ಕೊಂಡುಕೊಂಡರೆ, ರೂ.88,000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಕ್ಕೆ ತಿಂಗಳಿಗೆ 3,000 ವರೆಗೆ ಇಎಂಐ ಪಾವತಿ ಮಾಡಬೇಕು.
ಹೊಸ ಆಕ್ಟಿವಾ 125 ಸ್ಕೂಟರ್‌ನ ಹೆಚ್-ಸ್ಮಾರ್ಟ್ ರೂಪಾಂತರ, ರೂ.1.14 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.25,000 ಡೌನ್-ಪೇಮೆಂಟ್ ಪಾವತಿಸಿ ಈ ಸ್ಕೂಟರ್‌ನ್ನು ತೆಗೆದುಕೊಂಡರೆ, ರೂ.89,000 ವರೆಗೆ ಸಾಲ ಬಾಕಿ ಇರುತ್ತದೆ. ಅದಕ್ಕೆ 8% ಬಡ್ಡಿ ಹಾಕಿ, 3 ವರ್ಷಗಳಿಗೆ ಮಾಸಿಕ 3,000 ವರೆಗೆ ಇಎಂಐ ಕಟ್ಟಬೇಕು.
ಈ ಹೋಂಡಾ ಆಕ್ಟಿವಾ 125 ಸ್ಕೂಟರ್ 124 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 6250 ಆರ್‌ಪಿಎಂನಲ್ಲಿ 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,000 ಆರ್‌ಪಿಎಂನಲ್ಲಿ 10.4 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 51 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ನೂತನ ಹೋಂಡಾ ಆಕ್ಟಿವಾ 125 ಸ್ಕೂಟರ್ ಎಲ್‌ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 110 ಕೆಜಿ ತೂಕವಿರುವ ಈ ಸ್ಕೂಟರ್, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ. ಸವಾರರ ಸುರಕ್ಷತೆಗಾಗಿ ಡ್ರಮ್ & ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಒಟ್ಟಾರೆಯಾಗಿ, ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯದೊಂದಿಗೆ ಹೋಂಡಾ ಆಕ್ಟಿವಾ 125 ಸ್ಕೂಟರ್ ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ನಿಮ್ಮ ಗಮನಕ್ಕೆ.. ಇಲ್ಲಿ ತಿಳಿಸಲಾಗಿರುವ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆ ಇರಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications