ಜನಪ್ರಿಯ ಸ್ಕೂಟರ್‌ಗಳಿವು.. ಓಡಿಸುವುದು ಸುಲಭ.. ತುಂಬಾ ಕಡಿಮೆ ಬೆಲೆ, 50 Km ಮೈಲೇಜ್!
ಭಾರತದಲ್ಲಿ ಬೈಕ್‌ಗಳಂತೆ ಸ್ಕೂಟರ್‌ಗಳು ಸಹ ದೊಡ್ಡಮಟ್ಟದಲ್ಲಿ ಜನಪ್ರಿಯತೆ ಗಳಿಸಿವೆ. ಈ ಸ್ಕೂಟರ್‌ಗಳು ದಿನನಿತ್ಯದ ಬಳಕೆಗೆ ಹೆಚ್ಚು ಉಪಯುತ್ತವಾಗಿದ್ದು, ಮಹಿಳೆ ಹಾಗೂ ಪುರುಷರಿಬ್ಬರೂ ಸುಲಭವಾಗಿ ಬಳಕೆ ಮಾಡಬಹುದು. ದೇಶೀಯ ಮಾರುಕಟ್ಟೆಯಲ್ಲಿ 110 ಹಾಗೂ 125 ಸಿಸಿ ಎಂಜಿನ್‌ನ್ನು ಒಳಗೊಂಡಿರುವ ಸ್ಕೂಟರ್‌ಗಳು ಬಹಳಷ್ಟು ಖ್ಯಾತಿ ಗಳಿಸಿವೆ. ನೀವು ಬಜೆಟ್ ಬೆಲೆಯಲ್ಲಿ ಹೊಸ ಸ್ಕೂಟರ್‌ವೊಂದನ್ನು ತೆಗೆದುಕೊಳ್ಳಲು ಯೋಚಿಸಿದ್ದರೆ.. 110 ಸಿಸಿ ಸಾಮರ್ಥ್ಯದ ಸ್ಕೂಟರ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಇವು 125 ಸಿಸಿ ಎಂಜಿನ್‌ನ್ನು ಹೊಂದಿರುವ ಸ್ಕೂಟರ್‌ನಂತೆಯೇ ಇರುತ್ತವೆ. ಆದಾಗ್ಯೂ ಕಡಿಮೆ ಶಕ್ತಿಯನ್ನು (ಪವರ್) ಮಾತ್ರ ಹೊರಹಾಕುತ್ತವೆ.
ನಾವಿಲ್ಲಿ 110 ಸಿಸಿ ವಿಭಾಗದಲ್ಲಿ ಹೆಸರುವಾಸಿಯಾಗಿರುವ ಹೋಂಡಾ ಆಕ್ಟಿವಾ 6ಜಿ (Honda Activa 6g), ಹೀರೋ ಜೂಮ್ (Hero Xoom) ಮತ್ತು ಟಿವಿಎಸ್ ಸ್ಕೂಟಿ ಜೆಸ್ಟ್ (TVS Scooty Zest) ಸ್ಕೂಟರ್‌ಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ. ಇವುಗಳು ಕೈಗೆಟುಕುವ ಬೆಲೆಯನ್ನು ಹೊಂದಿದ್ದು, ಹೆಚ್ಚಿನ ಮೈಲೇಜ್‌ನ್ನು ನೀಡುತ್ತವೆ. ಜೊತೆಗೆ ಎಲ್ಲ ವಯೋಮಾನದವರಿಗೂ ಹೇಳಿಮಾಡಿದ ರೀತಿಯಲಿದ್ದು, ಸುಲಭವಾಗಿ ಓಡಿಸಬಹುದು.

ಮೊದಲಿಗೆ ಹೋಂಡಾ ಆಕ್ಟಿವಾ 6ಜಿ (Honda Activa 6G) ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ರೂ.78,624 ದಿಂದ ರೂ.84,674 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 109.51 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.79 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 8.84 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ನೂತನ ಆಕ್ಟಿವಾ 6ಜಿ ಸ್ಕೂಟರ್ 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಲಿದ್ದು, ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ, ಬ್ಲಾಕ್, ಪರ್ಲ್ ಪ್ರೆಶಿಯಸ್ ವೈಟ್, ರೆಬೆಲ್ ರೆಡ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಎಲ್ಇಡಿ ಹೆಡ್‌ಲೈಟ್, ಫುಲ್-ಅನಲಾಗ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಸ್ಕೂಟರ್ 106 ಕೆಜಿ ತೂಕವಿದೆ.

ಹೀರೋ ಜೂಮ್ (Hero Xoom) ಕೂಡ ಜನಪ್ರಿಯ ಸ್ಕೂಟರ್ ಆಗಿದ್ದು, ರೂ.75,761 ದಿಂದ ರೂ.85,400 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 110.9 ಸಿಸಿ, ಏರ್ ಕೋಲ್ಡ್ ಫ್ಯುಯೆಲ್ ಇಂಜೆಕ್ಷನ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.15 ಪಿಎಸ್ ಗರಿಷ್ಠ ಶಕ್ತಿ ಮತ್ತು 8.70 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.
ಈ ಸ್ಕೂಟರ್ 45 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಪ್ರೊಜೆಕ್ಟರ್ ಎಲ್ಇಡಿ ಹೆಡ್ ಲ್ಯಾಂಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ರೂಪಾಂತರಗಳಿಗೆ ಅನುಗುಣವಾಗಿ ಡಿಸ್ಕ್ ಅಥವಾ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.

ಟಿವಿಎಸ್ ಸ್ಕೂಟಿ ಜೆಸ್ಟ್ (TVS Scooty Zest) ಪ್ರಮುಖ ಸ್ಕೂಟರ್ ಆಗಿದ್ದು, ರೂ.72,614 ದಿಂದ ರೂ.73,417 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 109.7 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7.8 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 8.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಹೊಸ ಟಿವಿಎಸ್ ಸ್ಕೂಟಿ ಜೆಸ್ಟ್ ಸ್ಕೂಟರ್ 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲೂ, ಮ್ಯಾಟ್ ಪರ್ಪಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡ್ರಮ್ ಬ್ರೇಕ್‌ನ್ನು ಹೊಂದಿದ್ದು, ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications