ಹೋಂಡಾ ಆಕ್ಟಿವಾ ಖರೀದಿಸಲು ಯೋಚಿಸಿದ್ದೀರಾ.. ಅದೇ ಬೆಲೆಗೆ ಈ ಜನಪ್ರಿಯ ಸ್ಕೂಟರ್‌ & ಬೈಕ್‌ಗಳನ್ನು ತರಬಹುದು!

ಹೋಂಡಾ ಆಕ್ಟಿವಾ (Honda Activa) ಸ್ಕೂಟರ್ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ. ದೇಶದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಸ್ಕೂಟರ್ ಆಗಿ ಹೊರಹೊಮ್ಮಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ 'ಹೋಂಡಾ ಆಕ್ಟಿವಾ 6ಜಿ' ಸ್ಕೂಟರ್ ತೆಗದುಕೊಳ್ಳಲು ಆಲೋಚಿಸಿದ್ದೀರಾ.. ಅದೇ ಬೆಲೆಗೆ ಲಭ್ಯವಿರುವ ಸುಜುಕಿ ಆಕ್ಸೆಸ್ 125, ಟಿವಿಎಸ್ ಜುಪಿಟರ್ 110, ಓಲಾ ಎಸ್1 ಎಕ್ಸ್ ಸ್ಕೂಟರ್‌ಗಳು ಮತ್ತು ಹೀರೋ ಸ್ಪ್ಲೆಂಡರ್ ಪ್ಲಸ್, ಟಿವಿಎಸ್ ಸ್ಪೋರ್ಟ್ ಬೈಕ್‌ಗಳು ಕೂಡ ಉತ್ತಮವಾದ ಆಯ್ಕೆಯಾಗಲಿವೆ.

ಮೊದಲಿಗೆ ಹೋಂಡಾ ಆಕ್ಟಿವಾ 6ಜಿ (Honda Activa 6G) ವಿಶೇಷತೆ ಬಗ್ಗೆ ಮಾತನಾಡೋಣ. ಇದು ರೂ.79,624 ರಿಂದ ರೂ.84,624 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7.84 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.90 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 59.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Honda Activa 6G Same Price Other Options Tvs jupiter Hero Splendor Suzuki Access to TVS Sport

ಈ ಆಕ್ಟಿವಾ 6ಜಿ ಸ್ಕೂಟರ್ ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ, ಬ್ಲ್ಯಾಕ್, ಪರ್ಲ್ ಪ್ರೆಶಿಯಸ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಫುಲ್ ಅನಲಾಗ್ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದು 106 ಕೆಜಿ ತೂಕವಿದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಸುಜುಕಿ ಆಕ್ಸೆಸ್ 125 (Suzuki Access 125) ಕುರಿತಂತೆ ಹೇಳುವುದಾದರೆ, ಈ ಸ್ಕೂಟರ್ ರೂ.84,281 ರಿಂದ ರೂ.95,381 ಎಕ್ಸ್ ಶೋರೂಂ ದರವನ್ನು ಹೊಂದಿದೆ. 24 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 45 ಕೆಎಂಪಿಎಲ್‌ವರೆಗೆ ಕೊಡುತ್ತದೆ. ಸೆಮಿ-ಡಿಜಿಟಲ್ ಇನ್ಫಾರ್ಮಶನ್ ಪ್ಯಾನಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Honda Activa 6G Same Price Other Options Tvs jupiter Hero Splendor Suzuki Access to TVS Sport

ಟಿವಿಎಸ್ ಜುಪಿಟರ್ 110 (TVS Jupiter) ಕೂಡ ಜನಪ್ರಿಯ ಸ್ಕೂಟರ್ ಆಗಿದ್ದು, ರೂ.77,400 ರಿಂದ ರೂ.90,150 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 113 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಓಲಾ ಎಸ್1 ಎಕ್ಸ್ (Ola S1 X) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿ ಮನೆ ಮಾತಾಗಿದೆ. ಇದು ರೂ.74,999 ರಿಂದ 96,999 ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 2 ಕೆಡಬ್ಲ್ಯೂಹೆಚ್, 3 ಕೆಡಬ್ಲ್ಯೂಹೆಚ್ & 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 95 ರಿಂದ 193 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

Honda Activa 6G Same Price Other Options Tvs jupiter Hero Splendor Suzuki Access to TVS Sport

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಬೈಕ್ ಆಗಿದ್ದು, ರೂ.76,356 ರಿಂದ ರೂ.79,336 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 97.2 ಸಿಸಿ ಎಂಜಿನ್ ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಕಡೆಯದಾಗಿ ಟಿವಿಎಸ್ ಸ್ಪೋರ್ಟ್ (TVS Sport) ಮೋಟಾರ್ ಸೈಕಲ್ ಬಗ್ಗೆ ಹೇಳುವುದಾದರೆ, ಇದು ರೂ.67,320 ರಿಂದ ರೂ.72,033 ಎಕ್ಸ್ ಶೋರೂಂ ದರವನ್ನು ಪಡೆದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 112 ಕೆಜಿ ತೂಕವಿದ್ದು, 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, November 29, 2024, 10:35 [IST]
English summary
Honda activa 6g same price other options tvs jupiter hero splendor suzuki access to tvs sport
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+