Honda Activa e: ಬಹುನಿರೀಕ್ಷಿತ ಹೋಂಡಾ ಆಕ್ಟಿವಾ ಇ ಬಿಡುಗಡೆಗೆ ದಿನಾಂಕ ನಿಗದಿ ಆಯ್ತಾ.. ಅತ್ಯಂತ ಕಡಿಮೆ ಬೆಲೆ?

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಆಕ್ಟಿವಾ' ನಂಬರ್ 1 ಸ್ಕೂಟರ್ ಆಗಿ ಹೊರಹೊಮ್ಮಿದೆ. ಕಳೆದ ತಿಂಗಳು (ನವೆಂಬರ್-2024) 2,06,844 ಯುನಿಟ್ ಆಕ್ಟಿವಾ ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿತ್ತು. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 1,96,055 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 5.50% ಪ್ರಗತಿಯಾಗಿದೆ.

ನವೆಂಬರ್ 27ರಂದು ಭಾರತದ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು ಆಕ್ಟಿವಾ ಇ (Activa e) ಹಾಗೂ ಕ್ಯೂಸಿ1 (QC1) ಎಂಬ ಎರಡು ನೂತನ ಇ-ಸ್ಕೂಟರ್‌ಗಳನ್ನು ಅನಾವರಣಗೊಳಿಸಿತ್ತು. ಈ ಮೂಲಕ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ಮಾರುಕಟ್ಟೆಯನ್ನು ಪ್ರವೇಶಸಿತ್ತು. ಈ ನೂತನ ಇ-ಸ್ಕೂಟರ್‌ಗಳು ಹೇಗಿದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ನೀಡಿತ್ತು. ಆದರೆ ಬಿಡುಗಡೆಗೊಳಿಸಿರಲಿಲ್ಲ.

Honda Activa e Launch At Auto Expo 2025 Expected Price Details

ಸದ್ಯ, ಹೊಚ್ಚ ಹೊಸ ಹೋಂಡಾ ಆಕ್ಟಿವಾ ಇ (Honda Activa e) ನವದೆಹಲಿಯಲ್ಲಿ ಜನವರಿ 17ರಿಂದ ಆದ್ದರಿಯಾಗಿ ನಡೆಯುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಮಾರಾಟಕ್ಕೆ ಬರಲಿದೆ ಎಂದು ತಿಳಿದುಬಂದಿದೆ. ಇದೇ ಸಮಾರಂಭದಲ್ಲಿ ನೂತನ 'ಆಕ್ಟಿವಾ ಇ' ಸ್ಕೂಟರ್‌ನ ಬೆಲೆಯನ್ನು ಘೋಷಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ. 'ಕ್ಯೂಸಿ1' ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಸಂಬಂಧ ಯಾವುದೇ ವಿವರಗಳು ಲಭ್ಯವಾಗಿಲ್ಲ.

ಕೈಗೆಟುಕುವ ಬೆಲೆಗೆ ಖರೀದಿಗೆ ದೊರೆಯುವ ಹೀರೋ ವಿಡಾ ವಿ2, ಬಜಾಜ್ ಚೇತಕ್ 2903, ಓಲಾ ಎಸ್1 ಎಸ್ ಹಾಗೂ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಈ 'ಹೋಂಡಾ ಆಕ್ಟಿವಾ ಇ' ಪ್ರಬಲವಾದ ಸ್ಪರ್ಧೆಯೊಡ್ಡಲಿದೆ. ಇದು ರೂ.80,000 ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.

Honda Activa e Launch At Auto Expo 2025 Expected Price Details

ಹೊಸ 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ಹೊರಭಾಗದಲ್ಲಿ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್, ಡಿಆರ್‌ಎಲ್‌ಗಳು, ಟೈಲ್‌ಲ್ಯಾಂಪ್‌ ಮತ್ತು 12-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್ ಮತ್ತು ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ಎಲೆಕ್ಟ್ರಿಕ್ ಸ್ಕೂಟರ್, 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಎರಡು ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 6 ಕೆಡಬ್ಲ್ಯೂ ಪೀಕ್ ಪವರ್ ಮತ್ತು 22 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

Honda Activa e Launch At Auto Expo 2025 Expected Price Details

ನೂತನ 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ಇಕಾನ್, ಸ್ಟ್ಯಾಂಡರ್ಡ್ ಮತ್ತು ಸ್ಪೋರ್ಟ್ ಎಂಬ ಮೂರು ರೈಡಿಂಗ್ ಮೋಡ್‌ ಆಯ್ಕೆಯನ್ನು ಹೊಂದಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದ್ದು, ಕೇವಲ 7.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್ 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಹೆಚ್-ಸ್ಮಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದ್ದು, ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂದೆ (ರೇರ್) ಡುಯಲ್ ಸ್ಪ್ರಿಂಗ್‌ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 30, 2024, 9:55 [IST]
English summary
Honda activa e launch at auto expo 2025 expected price details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+