Honda Activa e: ಬಹುನಿರೀಕ್ಷಿತ 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ.. ಜ.1 ರಿಂದ ಬುಕ್ಕಿಂಗ್!
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಬುಧವಾರ ಆಕ್ಟಿವಾ ಇ (Activa e) ಹಾಗೂ ಕ್ಯೂಸಿ1 (QC1) ಎಂಬ ಎರಡು ಇ-ಸ್ಕೂಟರ್‌ಗಳನ್ನು ಅದ್ದೂರಿಯಾಗಿ ಅನಾವರಣಗೊಳಿಸಿದೆ. ಸದ್ಯಕ್ಕೆ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆಯನ್ನು ಘೋಷಣೆ ಮಾಡಿಲ್ಲ. ನಾವಿಲ್ಲಿ ನೂತನ 'ಆಕ್ಟಿವಾ ಇ' ಸ್ಕೂಟರ್ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ. ಕ್ಯೂಸಿ1 ಬಗ್ಗೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿರಿ.
ನೂತನ ಹೋಂಡಾ ಆಕ್ಟಿವಾ ಇ (Honda Activa e) ಎಲೆಕ್ಟ್ರಿಕ್ ಸ್ಕೂಟರ್, ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ತಂತ್ರಜ್ಞಾನ (Swappable Battery pack Technology) ಹೊಂದಿದೆ. ಈ ಆಕ್ಟಿವಾ ಇ ಸ್ಕೂಟರ್ ಬೆಂಗಳೂರು, ನವದೆಹಲಿ ಹಾಗೂ ಮುಂಬೈನಲ್ಲಿ ಮಾತ್ರ ಖರೀದಿಗೆ ಲಭ್ಯವಾಗಲಿದೆ. ಜನವರಿ 1, 2025 ರಿಂದ ಬುಕ್ಕಿಂಗ್ ಶುರುವಾಗಲಿದ್ದು, ಫೆಬ್ರವರಿಯಿಂದ ವಿತರಣೆಗಳು ಆರಂಭವಾಗಲಿದೆ.

ಹೊಚ್ಚ ಹೊಸ 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ವಿನೂತನವಾಗಿರುವ ಎಲ್ಇಡಿ ಹೆಡ್‌ಲೈಟ್, ಡಿಆರ್‌ಎಲ್‌ಗಳು ಮತ್ತು ಟೈಲ್ ಲ್ಯಾಂಪ್ ಅನ್ನು ಹೊಂದಿದೆ. ಜೊತೆಗೆ 12-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಪರ್ಲ್ ಸೆರಿನಿಟಿ ಬ್ಲೂ, ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್ ಹಾಗೂ ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯಲಿದೆ.
ಈ ಆಕ್ಟಿವಾ ಇ-ಸ್ಕೂಟರ್ 1.5 ಕಿಲೋ ವ್ಯಾಟ್ (kWh) ಸಾಮರ್ಥ್ಯದ ಎರಡು ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 6 ಕೆಡಬ್ಲ್ಯೂ ಪೀಕ್ ಪವರ್ ಮತ್ತು 22 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ನೂತನ ಆಕ್ಟಿವಾ ಸ್ಕೂಟರ್ ಕೇವಲ 7.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂ/ಹೆಚ್ ವೇಗವನ್ನು ಪಡೆಯಲಿದ್ದು, 80 ಕೆಎಂ/ಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸವಾರರ ಅನುಕೂಲಕ್ಕಾಗಿ ಇಕಾನ್ (Econ), ಸ್ಟ್ಯಾಂಡರ್ಡ್ (Standard) ಮತ್ತು ಸ್ಪೋರ್ಟ್ (Sport) ಎಂಬ 3 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.
ಈ ಹೋಂಡಾ ಆಕ್ಟಿವಾ ಇ ಎಲೆಕ್ಟ್ರಿಕ್ ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು (ಫೀಚರ್) ಹೊಂದಿದೆ. ಪ್ರಮುಖವಾಗಿ 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಪಡೆದಿದೆ. ಇದನ್ನು ಹ್ಯಾಂಡಲ್‌ಬಾರ್‌ನಲ್ಲಿರುವ ಟಾಗಲ್ ಸ್ವಿಚ್‌ಗಳ ನೆರವಿನಿಂದ ನಿಯಂತ್ರಿಸಬಹುದು. ಜೊತೆಗೆ ನೂತನ ಸ್ಕೂಟರ್ ಸ್ಮಾರ್ಟ್ ಫೈಂಡ್, ಸ್ಮಾರ್ಟ್ ಸೇಫ್, ಸ್ಮಾರ್ಟ್ ಅನ್‌ಲಾಕ್ & ಸ್ಮಾರ್ಟ್ ಸ್ಟಾರ್ಟ್ ಎಂಬ ವೈಶಿಷ್ಟ್ಯಗಳನ್ನು ಒಳಗೊಂಡಿರುವ 'ಹೆಚ್-ಸ್ಮಾರ್ಟ್' ಕೀಯೊಂದಿಗೂ ಖರೀದಿಗೆ ದೊರೆಯಲಿದೆ.

ಹೊಸ ಸ್ಕೂಟರ್ ಟೆಲಿಸ್ಕೋಪಿಕ್ ಫೋರ್ಕ್ಸ್ & ಡುಯಲ್ ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್ ಪಡೆದಿದ್ದು, ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. ಈ 'ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ರೂ.1 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ಇದಕ್ಕೆ ಎಥರ್ ರಿಜ್ಟಾ, ಟಿವಿಎಸ್ ಐಕ್ಯೂಬ್, ಹೀರೋ ವಿಡಾ, ಓಲಾ ಎಸ್1 ಮತ್ತು ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications