ಹೊಸ ಹೋಂಡಾ ಆಕ್ಟಿವಾ ಇ-ಸ್ಕೂಟರ್ ಕುರಿತ ಟೀಸರ್ ಬಿಡುಗಡೆ: ಹಲವು ವಿವರಗಳು ಬಹಿರಂಗ.. ನೀವೇ ನೋಡಿ!
ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ನಂಬರ್ 1 ಸ್ಕೂಟರ್ ಆಗಿ ಹೋಂಡಾ ಆಕ್ಟಿವಾ (Honda Activa) ಹೊರಹೊಮ್ಮಿದೆ. ಈ ಸ್ಕೂಟರ್‌ನ್ನು ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ತರಲು 'ಹೋಂಡಾ' ಕಂಪನಿಯು ಭರದಿಂದ ಸಿದ್ಧತೆ ನಡೆಸುತ್ತಿದೆ. ಆಕ್ಟಿವಾ ಇವಿ ಎನ್ನಲಾದ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣಗೊಳಿಸಲು ನವೆಂಬರ್ 27 ರಂದು ದಿನಾಂಕವನ್ನು ನಿಗದಿಪಡಿಸಲಾಗಿದೆ. ಸದ್ಯ, ನೂತನ ಆಕ್ಟಿವಾ ಇವಿ ಸಂಬಂಧಿಸಿದ ಟೀಸರ್‌ವೊಂದನ್ನು ಕಂಪನಿಯು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿದ್ದು, ಸಖತ್ ಹಲ್‌ಚಲ್ ಸೃಷ್ಟಿಸುತ್ತಿದೆ.
ಸುಮಾರು 13 ಸೆಕೆಂಡುಗಳ ಟೀಸರ್ ವಿಡಿಯೋ ಇದಾಗಿದ್ದು, ಹೊಸ 'ಹೋಂಡಾ ಆಕ್ಟಿವಾ' ಎಲೆಕ್ಟ್ರಿಕ್ ಸ್ಕೂಟರ್‌ನ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ತೋರಿಸಲಾಗಿದೆ. ಇದು ಟಿಎಫ್‌ಟಿ ಹಾಗೂ ಎಲ್‌ಸಿಡಿ ಸ್ಕ್ರೀನ್ ಹೊಂದಿರುವುದನ್ನು ಕೂಡ ನೋಡಬಹುದು. ಈ ಹಿನ್ನೆಲೆ ನೂತನ ಆಕ್ಟಿವಾ ಇವಿ ಎರಡು ರೂಪಾಂತರಗಳಲ್ಲಿ (Variants) ಮಾರಾಟಕ್ಕೆ ಬರಬಹುದು ಎನ್ನಲಾಗಿದೆ.

ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ನ ಗರಿಷ್ಠ ಶ್ರೇಣಿ ರೂಪಾಂತರಗಳು (ಟಾಪ್ ಎಂಡ್ ವೇರಿಯೆಂಟ್) ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ. ಈ ಸ್ಕೂಟರ್ ಸ್ಟ್ಯಾಂಡರ್ಡ್ (Standard) ಮತ್ತು ಸ್ಪೋರ್ಟ್ (Sport) ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿರುವುದನ್ನು ಈ ಟೀಸರ್ ವಿಡಿಯೋದಲ್ಲಿ ತೋರಿಸಲಾಗಿದೆ.
ಇದು ಮಾತ್ರವಲ್ಲದೆ, ಹೊಚ್ಚ ಹೊಸ ಆಕ್ಟಿವಾ ಇ-ಸ್ಕೂಟರ್ ಸ್ಟ್ಯಾಂಡರ್ಡ್ ಮೋಡ್‌ನಲ್ಲಿ ಭರ್ತಿ 100% ಚಾರ್ಜ್‌ನಲ್ಲಿ 104 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ ಎಂಬುದನ್ನು ಸಹ ಟೀಸರ್‌ನಲ್ಲಿ ಕಾಣಬಹುದು. ಅದೇ ಸ್ಪೋರ್ಟ್ ಮೋಡ್‌ನಲ್ಲಿ 80 ರಿಂದ 85 ಕಿಲೋಮೀಟರ್‌ವರೆಗೂ ಓಡುತ್ತದೆ ಎಂದು ಅಂದಾಜಿಸಲಾಗಿದೆ.

ನೂತನ ಹೋಂಡಾ ಆಕ್ಟಿವಾ ಇವಿ (Honda Activa EV) ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿರುವ ನಿರೀಕ್ಷೆಯಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಫ್ಲಾಟ್ ಸೀಟ್‌ಗಳನ್ನು ಪಡೆದುಕೊಂಡಿರಲಿದೆ. ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರಿಗೆ ಲಭ್ಯವಾಗುವ ಸಾಧ್ಯತೆಯಿದ್ದು, 1.3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಡುಯಲ್-ಬ್ಯಾಟರಿ ಪ್ಯಾಕ್ ಸೆಟಪ್ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.
ಈ ಎಲೆಕ್ಟ್ರಿಕ್ ಸ್ಕೂಟರ್ 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿರಲಿದೆ. ಇದರ ಬ್ಯಾಟರಿಯು 0 ರಿಂದ 75% ಚಾರ್ಜ್ ಆಗುವುದಕ್ಕೆ 3 ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಹೊಂದಿರುವ ಸಾಧ್ಯತೆಯಿದೆ. ರೂ.1 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಖರೀದಿಗೆ ದೊರೆಯಬಹುದು ಎಂಬ ಮಾಹಿತಿಯೂ ತಿಳಿದುಬಂದಿದೆ.

ಒಟ್ಟಾರೆಯಾಗಿ ಮುಂಬರುವ ತಿಂಗಳಲ್ಲಿ ಮಾರಾಟಕ್ಕೆ ಬರುವ 'ಹೋಂಡಾ ಆಕ್ಟಿವಾ' ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಗ್ರಾಹಕರು ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನೂತನ ಎಲೆಕ್ಟ್ರಿಕ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿರಲಿದೆ. ಈ ಆಕ್ಟಿವಾ ಇವಿಯೂ ಹೀರೋ ವಿಡಾ, ಟಿವಿಎಸ್ ಐಕ್ಯೂಬ್, ಬಜಾಜ್ ಚೇತಕ್, ಓಲಾ ಎಸ್1 ಹಾಗೂ ಎಥರ್ 450 ಇ-ಸ್ಕೂಟರ್‌ಗಳೊಂದಿಗೂ ಸ್ಪರ್ಧಿಸಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications