ಪೆಟ್ರೋಲ್ ಹಾಕಿಸುವ ಚಿಂತೆಯಿಲ್ಲ: ನಾಡಿದ್ದು ನೂತನ ಹೋಂಡಾ ಆಕ್ಟಿವಾ ಇ-ಸ್ಕೂಟರ್ ಅನಾವರಣ.. ಬೆಲೆ ಎಷ್ಟು?
ಹೋಂಡಾ ಆಕ್ಟಿವಾ (Honda Activa) ಮಧ್ಯಮ ವರ್ಗದ ಜನರ ನೆಚ್ಚಿನ ಸ್ಕೂಟರ್ ಆಗಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಸದ್ಯ, ಕಂಪನಿ ಈ ಸ್ಕೂಟರ್‌ನ್ನು ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ತರಲು ಸಾಕಷ್ಟು ಸಿದ್ಧತೆ ನಡೆಸುತ್ತಿದೆ. ನೂತನ 'ಆಕ್ಟಿವಾ ಇವಿ' ಎನ್ನಲಾದ ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅನಾವರಣಗೊಳಿಸುವ ನವೆಂಬರ್ 27ರಂದು (ಬುಧವಾರ) ದಿನಾಂಕವನ್ನು ನಿಗದಿಪಡಿಸಿದೆ. ಬನ್ನಿ.. ಈ ಸ್ಕೂಟರ್ ನಿರೀಕ್ಷಿತ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಬೆಲೆ (Price): ಹೊಸ ಹೋಂಡಾ ಆಕ್ಟಿವಾ ಇವಿ (Honda Ativa EV) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬರುವ ನೀರಿಕ್ಷೆಯಿದೆ. ರೂ.1 ರಿಂದ ರೂ.1.20 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರ ಖರೀದಿಗೆ ಸಿಗಲಿದೆ ಎನ್ನಲಾಗಿದೆ. ವಿವಿಧ ಮಾಧ್ಯಮಗಳ ಪ್ರಕಾರ, ನೂತನ ಎಲೆಕ್ಟ್ರಿಕ್ ಸ್ಕೂಟರ್ 2025ರಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ಈ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.

ಬ್ಯಾಟರಿ ಪ್ಯಾಕ್ & ರೇಂಜ್ (Battery pack & range): ಈಗಾಗಲೇ ಟೀಸರ್ ವಿಡಿಯೋ ಮೂಲಕ ಹೋಂಡಾ ಕಂಪನಿಯು ಈ ನೂತನ ಎಲೆಕ್ಟ್ರಿಕ್ ಹೊಂದಿರುವ ಬ್ಯಾಟರಿ ಪ್ಯಾಕ್ ಕುರಿತಂತೆ ಸಣ್ಣ ಸುಳಿವನ್ನು ನೀಡಿದೆ. ಆ ವಿಡಿಯೋದಲ್ಲಿ ಹೊಸ ಆಕ್ಟಿವಾ ಇವಿ ಬದಲಾಯಿಸಬಹುದಾದ ಬ್ಯಾಟರಿಗಳನ್ನು ಪಡೆದಿದ್ದು, ಸೀಟ್ ಕೆಳಗೆ ಎರಡು ಬ್ಯಾಟರಿ ಪ್ಯಾಕ್‌ಗಳು ಇರುವುದನ್ನು ನೋಡಬಹುದು.
ಈ ಸ್ಕೂಟರ್ ತಲಾ 1.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರಲಿದೆ ಎನ್ನಲಾಗಿದೆ. 6 ಕೆಡಬ್ಲ್ಯೂ ಪೀಕ್ ಪವರ್ ಕೂಡ ಉತ್ಪಾದಿಸಲಿದೆ. ಇದರೊಟ್ಟಿಗೆ 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಸ್ಟ್ಯಾಂಡರ್ಡ್ ಮೋಡ್‌ನಲ್ಲಿ ಪೂರ್ತಿ ಚಾರ್ಜ್‌ನಲ್ಲಿ 104 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ ಎಂಬುದನ್ನು ಸಹ ಟೀಸರ್‌ನಲ್ಲಿ ಬಹಿರಂಗಪಡಿಸಲಾಗಿದೆ.

ವೈಶಿಷ್ಟ್ಯಗಳು (Features): ಹೊಸ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಈ ಹಿಂದಿನ ಟೀಸರ್‌ನಲ್ಲಿ ಆಕ್ಟಿವಾ ಇವಿಯ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ತೋರಿಸಲಾಗಿತ್ತು ಇದು ಟಿಎಫ್‌ಟಿ & ಎಲ್‌ಸಿಡಿ ಸ್ಕ್ರೀನ್ ಹೊಂದಿರುವುದನ್ನು ಕೂಡ ನೋಡಬಹುದಾಗಿತ್ತು. ಜೊತೆಗೆ ಸ್ಟ್ಯಾಂಡರ್ಡ್ ಹಾಗೂ ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ಗಳನ್ನು ಪಡೆದಿರುವುದನ್ನು ಕಾಣಬಹುದಾಗಿತ್ತು.
ವಿನ್ಯಾಸ (Design): ನೂತನ ಹೋಂಡಾ ಆಕ್ಟಿವಾ ಇವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ ಹೊಂದಿರಲಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಫ್ಲಾಟ್ ಸೀಟ್ ಹಾಗೂ ಚಾರ್ಜಿಂಗ್ ಪೋರ್ಟ್ ಅನ್ನು ಪಡೆದಿರಲಿದೆ ಎಂದು ತಿಳಿದುಬಂದಿದೆ. ಈ ಸ್ಕೂಟರ್, ಪರ್ಲ್ ಜುಬಿಲಿ ವೈಟ್ & ಪ್ರೀಮಿಯಂ ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುವ ನೀರಿಕ್ಷೆಯಿದೆ.

ಒಟ್ಟಾರೆಯಾಗಿ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಗ್ರಾಹಕರು ದೊಡ್ಡ ಮಟ್ಟದ ಭರವಸೆಗಳನ್ನು ಇಟ್ಟುಕೊಂಡಿದ್ದಾರೆ. ಈ ಸ್ಕೂಟರ್ ಆಕರ್ಷಕ ವೈಶಿಷ್ಟ್ಯಗಳನೊಂದಿಗೆ ಮಾರಾಟಕ್ಕೆ ಬರುವುದು ಬಹುತೇಕ ಖಚಿತವಾಗಿದ್ದು, ನಗರ ಪ್ರಯಾಣಕ್ಕೆ ಹೆಚ್ಚು ಉಪಯುಕ್ತವಾಗುವಂತೆ ಕಂಪನಿಯು ಸಿದ್ಧಪಡಿಸಿದೆ ಎಂದು ಗೊತ್ತಾಗಿದೆ. ಈ ಸ್ಕೂಟರ್ ಮಾರಾಟಕ್ಕೆ ಬಂದ ಮೇಲೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications