Honda Activa EV: ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣಗೊಳಿಸಲು ಡೇಟ್ ಫಿಕ್ಸ್.. ಭಾರೀ ಕಡಿಮೆ ಬೆಲೆ?

ಹೋಂಡಾ ಮೋಟಾರ್‌ಸೈಕಲ್‌ & ಸ್ಕೂಟರ್ ಇಂಡಿಯಾ (Honda Motorcycle and Scooter India), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ (Two Wheeler) ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಆಕ್ಟಿವಾ (Activa) ಜನಪ್ರಿಯ ಸ್ಕೂಟರ್ ಆಗಿದ್ದು, ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಹೋಂಡಾ ಕಂಪನಿ ಇದೇ ಸ್ಕೂಟರ್‌ನ್ನು ಎಲೆಕ್ಟ್ರಿಕ್ ರೂಪದಲ್ಲಿಯೂ ಮಾರಾಟಕ್ಕೆ ತರಲು ತೆರೆಮರೆಯಲ್ಲಿ ಸಿದ್ದತೆ ನಡೆಸುತ್ತಿದೆ ಎಂದು ಈ ಹಿಂದೆ ವರದಿಯಾಗಿತ್ತು. ಸದ್ಯ ನೂತನ 'ಎಲೆಕ್ಟ್ರಿಕ್ ಸ್ಕೂಟರ್' ಅನಾವರಣಗೊಳಿಸಲು ಕಂಪನಿಯು ದಿನಾಂಕ ನಿಗದಿಪಡಿಸಿದ್ದು, ಮಾಧ್ಯಮ ಆಹ್ವಾನ ಪತ್ರಿಕೆಯನ್ನು ಪ್ರಕಟಿಸಿದೆ.

ನವೆಂಬರ್ 27 ರಂದು ಹೊಚ್ಚ ಹೊಸ ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಆದ್ದೂರಿಯಾಗಿ ಅನಾವರಣಗೊಳಿಸಲು ದಿನಾಂಕ ನಿಗದಿಯಾಗಿದೆ. ಇದು ಬಹುತೇಕ ಆಕ್ಟಿವಾ ಇವಿಯೇ ಎಂಬುದು ಹಲವರ ಲೆಕ್ಕಾಚಾರವಾಗಿದೆ. ಆದರೆ, ಈ ಕುರಿತಂತೆ ಹೋಂಡಾ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

Honda Activa Electric Scooter Unveil On November 27 Low Price Details

ನೂತನ ಹೋಂಡಾ ಆಕ್ಟಿವಾ ಇವಿ (Honda Activa EV), ಎದುರಾಳಿ ಕಂಪನಿಗಳಾದ ಟಿವಿಎಸ್, ಬಜಾಜ್, ಓಲಾ ಎಲೆಕ್ಟ್ರಿಕ್, ಎಥರ್ ಎನರ್ಜಿ ಹಾಗೂ ಹೀರೋ ಕಂಪನಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪೈಪೋಟಿ ನೀಡುವಂತೆ ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಹಾಗೂ ಮೋಟಾರ್ ಆಯ್ಕೆಯನ್ನು ಒಳಗೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 100 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೂಡ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸ (ಡಿಸೈನ್), ಪೆಟ್ರೋಲ್ ಚಾಲಿತ ಆಕ್ಟಿವಾಗೆ ಹೋಲಿಕೆಯಾಗಲಿದೆ. ಆದರೂ ನೂತನ ಎಲೆಕ್ಟ್ರಿಕ್ ಸ್ಕೂಟರ್, ಎಲ್ಇಡಿ ಹೆಡ್‌ಲ್ಯಾಂಪ್, ಫ್ಲಾಟ್ ಸೀಟ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಿರುವ ಸಾಧ್ಯತೆಯಿದ್ದು, ಫಾಸ್ಟ್ ಚಾರ್ಜಿಂಗ್ ಆಯ್ಕೆಯನ್ನು ಪಡೆದಿರಬಹುದು ಎನ್ನಲಾಗಿದೆ.

Honda Activa Electric Scooter Unveil On November 27 Low Price Details

ಹೊಸ ಹೋಂಡಾ ಆಕ್ಟಿವಾ ಇವಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ಸ್ ಹಾಗೂ ಹಿಂಭಾಗ (ರೇರ್) ಪ್ರಿಲೋಡ್ ಅಡ್ಜಸ್ಟಬಲ್ ಮೊನೊ - ಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿರಲಿದೆ. ಸವಾರರ ರಕ್ಷಣೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮುಂದೆ ಡಿಸ್ಕ್ ಹಾಗೂ ಹಿಂದೆ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಈ ನೂತನ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್, 12 - ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಜೊತೆಗೆ ಅತಿಕಡಿಮೆ ಬೆಲೆಯನ್ನು ಹೊಂದಿರಲಿದ್ದು, ಸರಿ ಸುಮಾರು ರೂ.1 ರಿಂದ 1.20 ಲಕ್ಷ (ಎಕ್ಸ್ ಶೋರೂಂ) ದರದಲ್ಲೂ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. 2025 ರಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಬರುವ ಸಾಧ್ಯತೆಯೂ ಇದೆ.

Honda Activa Electric Scooter Unveil On November 27 Low Price Details

ಒಟ್ಟಾರೆಯಾಗಿ, ಹೋಂಡಾ ಬಿಡುಗಡೆ ಮಾಡಲಿರುವ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಗ್ರಾಹಕರ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಬಹುತೇಕ ಮಾರುಕಟ್ಟೆ ತಜ್ಞರು ಇದು ಆಕ್ಟಿವಾ ಇವಿಯೇ ಆಗಿರಲಿದೆ ಎಂದು ಹೇಳುತ್ತಿದ್ದಾರೆ. ಒಂದೊಮ್ಮೆ ಆಕ್ಟಿವಾ ರೂಪದಲ್ಲಿಯೇ ಹೊಸ ಸ್ಕೂಟರ್ ಬಿಡುಗಡೆಯಾದರೆ, ದೇಶೀಯ ಮಾರುಕಟ್ಟೆಯಲ್ಲಿ 'ಹೊಸ ಶಕೆ' ಸೃಷ್ಟಿಯಾಗುವುದರಲ್ಲಿ ಎರಡು ಮಾತಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, November 9, 2024, 8:30 [IST]
English summary
Honda activa electric scooter unveil on november 27 low price details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+