Honda Activa EV: ಇಂದು ಹೊಸ ಹೋಂಡಾ ಆಕ್ಟಿವಾ ಇ-ಸ್ಕೂಟರ್ ಅನಾವರಣ.. ಬೆಲೆ ಎಷ್ಟು.. ಫೀಚರ್‌ಗಳೇನು?
ಇಂದು ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಭಾರತದ ಮಾರುಕಟ್ಟೆಯಲ್ಲಿ ಅದ್ದೂರಿಯಾಗಿ ಅನಾವರಣಗೊಳಿಸಲಿದೆ. ಆಕ್ಟಿವಾ ಇವಿ (Activa EV) ಎನ್ನಲಾದ ಹೊಚ್ಚ ಹೊಸ ಇ-ಸ್ಕೂಟರ್ ಮಾರಾಟಕ್ಕೆ ಬರಲಿದ್ದು, ಗ್ರಾಹಕರು ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಬನ್ನಿ.. ಹೊಸ ಎಲೆಕ್ಟ್ರಿಕ್ ಸ್ಕೂಟರ್ ನಿರೀಕ್ಷಿತ ಬೆಲೆ, ರೇಂಜ್ (ಮೈಲೇಜ್) ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ವಿನ್ಯಾಸ (Design): ನೂತನ ಹೋಂಡಾ ಆಕ್ಟಿವಾ ಇವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಅದು ಕಂಪನಿಯು ಜಾಗತಿಕ ಮಾರುಕಟ್ಟೆಯಲ್ಲಿ ಪ್ರದರ್ಶಸಲಾದ ಸಿಯುವಿ-ಇ (CUV-e) ಎಲೆಕ್ಟ್ರಿಕ್ ಸ್ಕೂಟರ್‌ಗೆ ಹೋಲಿಕೆಯಾಗಲಿದೆ. ಆದರೂ ಈ ಆಕ್ಟಿವಾ ಇವಿ ವಿನೂತನವಾಗಿರುವ ಎಲ್ಇಡಿ ಹೆಡ್‌ಲೈಟ್ ಮತ್ತು ಫ್ಲಾಟ್ ಸೀಟ್ (ಆಸನ) ಆಯ್ಕೆಯನ್ನು ಒಳಗೊಂಡಿರಲಿದೆ ಎಂದು ತಿಳಿದುಬಂದಿದೆ.

ಕಾರ್ಯಕ್ಷಮತೆ (Performance): ಟೀಸರ್ ವಿಡಿಯೋದಲ್ಲಿ ತೋರಿಸಿರುವಂತೆ ಈ ಎಲೆಕ್ಟ್ರಿಕ್ ಸ್ಕೂಟರ್, ಭರ್ತಿ ಚಾರ್ಜ್‌ನಲ್ಲಿ 100 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಲಿದೆ. ಜೊತೆಗೆ 2.5 ಅಥವಾ 2.8 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿರುವ ಸಾಧ್ಯತೆಯಿದ್ದು, ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಬಜಾಜ್ ಚೇತಕ್ ಹಾಗೂ ಹೀರೋ ವಿಡಾ ವಿ1 ಎಲೆಕ್ಟ್ರಿಕ್ ಸ್ಕೂಟರ್‌ಗಳು ಕೂಡ ಇದೇ ರೀತಿಯ ವ್ಯವಸ್ಥೆಯನ್ನು ಹೊಂದಿವೆ.
ವೈಶಿಷ್ಟ್ಯಗಳು (Features): ಹೊಸ ಹೋಂಡಾ ಆಕ್ಟಿವಾ ಇವಿ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಟೀಸರ್‌ನಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಿದೆ ಎಂಬುದನ್ನು ಖಚಿತಪಡಿಸಲಾಗಿತ್ತು. ಇದರೊಂದಿಗೆ ಸವಾರರಿಗೆ ಹೆಚ್ಚಿನ ಅನುಕೂಲವಾಗಿಸುವ ನಿಟ್ಟಿನಲ್ಲಿ ಸ್ಟ್ಯಾಂಡರ್ಡ್ & ಸ್ಪೋರ್ಟ್ ಎಂಬ 2 ರೈಡಿಂಗ್ ಮೋಡ್ ಪಡೆದಿರುವುದನ್ನು ಸಹ ಬಹಿರಂಗಪಡಿಸಲಾಗಿತ್ತು.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension System & Braking System): ಈ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿರಲಿದೆ ಎಂದು ಹೇಳಲಾಗಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಡಿಸ್ಕ್ & ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.
ಬೆಲೆ (Price): ನೂತನ ಹೋಂಡಾ ಆಕ್ಟಿವಾ ಇವಿ ಅತಿ ಕಡಿಮೆ ಬೆಲೆಗೆ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ದರವನ್ನು ಮುಂಬರುವ ದಿನಗಳಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದ್ದು, ರೂ.1 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.
ಇನ್ನು, ಹೊಸ ಹೋಂಡಾ ಆಕ್ಟಿವಾ ಇವಿಯೂ ಎಥರ್ ರಿಜ್ಟಾ, ಟಿವಿಎಸ್ ಐಕ್ಯೂಬ್, ಹೀರೋ ವಿಡಾ, ಓಲಾ ಎಸ್1 ಹಾಗೂ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ಗಳೊಂದಿಗೆ ಸ್ಪರ್ಧಿಸಬೇಕಾಗಿದೆ. ಈ ಆಕ್ಟಿವಾ ಇವಿ ಸಾಕಷ್ಟು ಅತ್ಯಾಧುನಿಕವಾಗಿರಲಿದೆ ಎಂಬುದು ಬಹುತೇಕ ಖಚಿತವಾಗಿದೆ. ಇದು ಬಿಡುಗಡೆಗೊಂಡು ವಿತರಣೆಗಳು ಆರಂಭವಾದ ಮೇಲೆ ದೇಶೀಯ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications