Honda: ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಹೋಂಡಾ ಆಕ್ಟಿವಾ ಮಾರಾಟ.. 78,623 ಆರಂಭಿಕ ಬೆಲೆ, 60 Km ಮೈಲೇಜ್!
ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India - HMSI), ಜನಪ್ರಿಯ ದ್ವಿಚಕ್ರ ವಾಹನ (Two-wheeler) ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ (Design) ಮತ್ತು ವೈಶಿಷ್ಟ್ಯಗಳನ್ನು (Features) ಪಡೆದುಕೊಂಡಿರುವ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಈಚೆಗೆ ಜನಪ್ರಿಯ ಆಕ್ಟಿವಾ (Activa) ಸ್ಕೂಟರ್‌ನ ಆಗಸ್ಟ್ (2024) ತಿಂಗಳ ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಆಗಸ್ಟ್ 2024) ಬರೋಬ್ಬರಿ 2,27,458 ಯುನಿಟ್ ಹೋಂಡಾ ಆಕ್ಟಿವಾ (Honda Activa) ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 2,14,872 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 5.86% ಪ್ರಗತಿ ಸಾಧಿಸಲಾಗಿದೆ. ಈ ಆಕ್ಟಿವಾ ಸ್ಕೂಟರ್ ವಿವಿಧ ರೂಪದಲ್ಲಿ ಖರೀದಿಗೆ ದೊರೆಯುತ್ತದೆ.

ಮೊದಲಿಗೆ ಹೋಂಡಾ ಆಕ್ಟಿವಾ 125 (Honda Activa 125) ಬಗ್ಗೆ ಮಾತನಾಡೋಣ. ಈ ಸ್ಕೂಟರ್ ರೂ.83,084 ದಿಂದ ರೂ.92,257 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಡ್ರಮ್, ಡ್ರಮ್ ಅಲಾಯ್, ಡಿಸ್ಕ್ ಮತ್ತು ಹೆಚ್-ಸ್ಮಾರ್ಟ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ರೆಬೆಲ್ ರೆಡ್ ಮೆಟಾಲಿಕ್, ಹೆವಿ ಗ್ರೇ ಮೆಟಾಲಿಕ್ ಹಾಗೂ ಪರ್ಲ್ ನೈಟ್ ಸ್ಟಾರ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳ (ಕಲರ್) ಆಯ್ಕೆಯಲ್ಲಿ ಸಹ ಸಿಗುತ್ತದೆ.
ನೂತನ ಹೋಂಡಾ ಆಕ್ಟಿವಾ 125 ಸ್ಕೂಟರ್, 124 ಸಿಸಿ ಏರ್ ಕೋಲ್ಡ್, ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 51.23 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಹೋಂಡಾ ಆಕ್ಟಿವಾ 125 ಸ್ಕೂಟರ್, ಎಲ್‌ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್ (ಡೇಟೈಮ್ ರನ್ನಿಂಗ್ ಲೈಟ್‌ಗಳು) ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ & ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. 110 ಕೆಜಿ ತೂಕವಿದ್ದು, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಹೊಂದಿದೆ.
ಹೋಂಡಾ ಆಕ್ಟಿವಾ 6ಜಿ (Honda Activa 6G) ಸ್ಕೂಟರ್ ಕೂಡ ಖರೀದಿಗೆ ಲಭ್ಯವಿದ್ದು, ರೂ.78,623 ರಿಂದ 84,624 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.79 ಪಿಎಸ್ ಅಶ್ವ ಶಕ್ತಿ ಹಾಗೂ ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 59.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಹೋಂಡಾ ಆಕ್ಟಿವಾ 6ಜಿ ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ರೆಬೆಲ್ ರೆಡ್ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳನ್ನು ಪಡೆದಿದೆ. ಎಲ್ಇಡಿ ಹೆಡ್‌ಲೈಟ್, ಸೆಮಿ-ಡಿಜಿಟಲ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications