ಇದೇ ನೋಡಿ ದೇಶದ ಮೊದಲ 300 ಸಿಸಿ ಫ್ಲೆಕ್ಸ್ ಫ್ಯುಯೆಲ್ ಹೋಂಡಾ ಸಿಬಿ300ಎಫ್ ಬೈಕ್.. ನಿಮಗೆ ಗೊತ್ತಿರಲೇ ಬೇಕು!
ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India), ಜನಪ್ರಿಯ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿದೆ. ಈಚೆಗೆ ದೇಶದ ಪ್ರಪ್ರಥಮ 300 ಸಿಸಿ ಫ್ಲೆಕ್ಸ್ ಫ್ಯುಯೆಲ್ ಚಾಲಿತ 'ಸಿಬಿ300ಎಫ್' ಮೋಟಾರ್‌ಸೈಕಲ್‌ನ್ನು ಮಾರಾಟಕ್ಕೆ ತಂದಿತ್ತು. ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದ ಈ ಬೈಕ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಬನ್ನಿ.. ಈ ಮೋಟಾರ್‌ಸೈಕಲ್ ಕುರಿತ ಪ್ರಮುಖಾಂಶಗಳನ್ನು ತಿಳಿಯೋಣ.
ಬೆಲೆ (Price): ಹೊಚ್ಚ ಹೊಸ ಹೋಂಡಾ ಸಿಬಿ300ಎಫ್ ಫ್ಲೆಕ್ಸ್ ಫ್ಯುಯೆಲ್ ಬೈಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೇಶೀಯ ಗ್ರಾಹಕರಿಗೆ ಲಭ್ಯವಿದೆ. ಸರಿ ಸುಮಾರು ರೂ.1.70 ಲಕ್ಷ ಎಕ್ಸ್ ಶೋರೂಂ ದರವನ್ನು (ನವದೆಹಲಿ) ಪಡೆದಿದೆ. ಇದರ ಆನ್-ರೋಡ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ವಿನ್ಯಾಸ ಹಾಗೂ ವೈಶಿಷ್ಟ್ಯಗಳು (Design And Features): ನೂತನ ಹೋಂಡಾ ಸಿಬಿ300ಎಫ್ ಫ್ಲೆಕ್ಸ್ ಫ್ಯುಯೆಲ್ (Honda CB300F Flex - fuel) ಮೋಟಾರ್‌ಸೈಕಲ್ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಿದೆ. ಸ್ಪೋರ್ಟ್ಸ್ ರೆಡ್ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಕಾರ್ಯಕ್ಷಮತೆ (Performance): ಈ ಬೈಕ್ 293.5 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ (ಇ85) ಎಂಜಿನ್‌ನ್ನು ಪಡೆದಿದೆ. 24.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 25.9 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ವಿಶೇಷತೆ ಏನು (Specification): ಹೊಸ ಹೋಂಡಾ ಸಿಬಿ300ಎಫ್ ಮೋಟಾರ್‌ಸೈಕಲ್, ಫ್ಲೆಕ್ಸ್-ಫ್ಯುಯೆಲ್ ಉಪಯೋಗಿಸಬಹುದಾದ ಎಂಜಿನ್ ಒಳಗೊಂಡಿರುವುದರಿಂದ ಇ85 (E85) ಇಂಧನದ (ಫ್ಯುಯೆಲ್) ಸಹಾಯದಿಂದ ಕಾರ್ಯನಿರ್ವಹಿಸಬಲ್ಲದು. ಇ85 ಅಂದರೆ 85% ಎಥೆನಾಲ್ & 15% ಪೆಟ್ರೋಲ್‌ನ ಸಮಿಶ್ರವಾಗಿದೆ. ಎಥೆನಾಲ್‌ನ್ನು ಕೃಷಿ ತ್ಯಾಜ್ಯವಾದ ಭತ್ತದ ಹುಲ್ಲು ಹಾಗೂ ಕಬ್ಬಿನ ಜಲ್ಲೆಯನ್ನು ಬಳಕೆ ಮಾಡಿ ಉತ್ಪಾದಿಸಲಾಗುತ್ತದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System): ನೂತನ ಬೈಕ್ ಮುಂಭಾಗ (ಫ್ರಂಟ್) ಅಪ್‌ಸೈಡ್-ಡೌನ್ ಫೋರ್ಕ್, ಹಿಂಭಾಗ (ರೇರ್) ಮೊನೊ ಶಾಕ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿದೆ. ಸುರಕ್ಷತೆಗಾಗಿ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಟ್ರಾಕ್ಷನ್ ಕಂಟ್ರೋಲ್‌ನೊಂದಿಗೆ ಹ್ಯಾಂಡಲ್ ಬಾರ್‌ನಲ್ಲಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಸ್ಟ್ಯಾಂಡರ್ಡ್ ಹೋಂಡಾ ಸಿಬಿ300ಎಫ್ ಬೈಕ್ ಕೂಡ ಖರೀದಿಗೆ ಲಭ್ಯ: ಇದು ಸಹ ರೂ.1.70 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 293.52 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 30 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್-ಎಲ್‌ಸಿಡಿ ಇನ್ಸ್ಟ್ರುಮೆಂಟ್ ಪ್ಯಾನೆಲ್, ಯುಎಸ್‌ಬಿ-ಸಿ ಫೋನ್ ಚಾರ್ಜಿಂಗ್ ಪೋರ್ಟ್ ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications