Honda: ಹೋಂಡಾ ಆಯ್ತು ಗೇಮ್ ಚೇಂಜರ್.. 'ಆಕ್ಟಿವಾ' ಸ್ಕೂಟರ್ ಖರೀದಿ ಭರಾಟೆ ಜೋರು.. ತುಂಬಿದ ಶೋರೂಂ!
ಜಪಾನ್ ಮೂಲದ ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India - HMSI), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಮೋಟಾರ್‌ಸೈಕಲ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸೋಮವಾರ ಆಗಸ್ಟ್ ತಿಂಗಳ (2024) ಮಾರಾಟದ ಅಂಕಿಅಂಶಗಳನ್ನು ಹೋಂಡಾ ಕಂಪನಿ ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ.
ಹೋಂಡಾ ಕಂಪನಿಯು ಕಳೆದ ತಿಂಗಳು (ಆಗಸ್ಟ್ 2024) ಒಟ್ಟು 538,852 ಯುನಿಟ್ ದ್ವಿಚಕ್ರ ವಾಹನಗಳನ್ನು (Two Wheeler) ಮಾರಾಟ ಮಾಡಿದೆ. 2023ರಲ್ಲಿ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 4,77,590 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 13% ಪ್ರಗತಿ ಸಾಧಿಸಿದೆ.

ದೇಶೀಯ ಮಾರುಕಟ್ಟೆಯಲ್ಲಿಯೂ ಹೋಂಡಾ, ಈ ಆಗಸ್ಟ್‌ನಲ್ಲಿ 4,91,678 ಯುನಿಟ್ ದ್ವಿಚಕ್ರ ವಾಹನಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2023ರ ಆಗಸ್ಟ್ ತಿಂಗಳಲ್ಲಿ ಮಾರಾಟಗೊಳಿಸಿದ 4,51,200 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇಕಡ 9% ಬೆಳವಣಿಗೆ ಕಂಡಿದೆ. ವಿದೇಶಗಳಿಗೆ ರಫ್ತು ಮಾಡುವ ದ್ವಿಚಕ್ರ ವಾಹನ ಸಂಖ್ಯೆಯೂ ಹೆಚ್ಚಳಗೊಂಡಿದೆ. ಬರೋಬ್ಬರಿ 47,174 ಯುನಿಟ್ ವಾಹನಗಳು ರಫ್ತಾಗಿವೆ. ಈ ಮೂಲಕ ರಫ್ತು ಪ್ರಮಾಣ ಶೇಕಡ 79% ಏರಿಕೆಯಾಗಿದೆ.
ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿರುವ ಹೀರೋ ಮೋಟೋಕಾರ್ಪ್ (Hero MotoCorp), ಹೋಂಡಾಗೆ ಪ್ರಬಲವಾದ ಸ್ಪರ್ಧೆಯೊಡ್ಡುತ್ತಿದೆ. ಆಗಸ್ಟ್ ತಿಂಗಳು (2024) ಒಟ್ಟು 512,360 ಯುನಿಟ್ ದ್ವಿಚಕ್ರ ವಾಹನಗಳನ್ನು (ಬೈಕ್ ಹಾಗೂ ಸ್ಕೂಟರ್‌ಗಳು) ಮಾರಾಟ ಮಾಡಿದೆ. 2023ರ ಆಗಸ್ಟ್‌ನಲ್ಲಿ ಮಾರಾಟ ಮಾಡಿದ 488,717 ಯುನಿಟ್‌ಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 5% ಬೆಳವಣಿಗೆ ಸಾಧಿಸಿದೆ.

ಹೋಂಡಾ ಕಂಪನಿ ಈ ಮಟ್ಟದಲ್ಲಿ ಯಶಸ್ವಿಯಾಗಲು 'ಆಕ್ಟಿವಾ' ಸ್ಕೂಟರ್ ಪ್ರಮುಖ ಕಾರಣವಾಗಿದೆ. ಇದು ಹಲವು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಆಕ್ಟಿವಾ 125 (Activa 125) ಸ್ಕೂಟರ್, ರೂ.83,084 ದಿಂದ ರೂ.92,257 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 52.63 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹಲವು ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.
ಹೋಂಡಾ ಆಕ್ಟಿವಾ 6ಜಿ (Honda Activa 6G) ಬಗ್ಗೆ ಹೇಳುವುದಾದರೆ, ಇದು ರೂ.78,624 ದಿಂದ ರೂ.84,674 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 7.8 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 8.9 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸವಾರರಿಗೆ ರಕ್ಷಣೆ ಒದಗಿಸಲು ಡ್ರಮ್ ಬ್ರೇಕ್‌ನ್ನು ಹೊಂದಿದೆ.

ಹೋಂಡಾ ಶೈನ್ 100 (Honda Shine 100) ಜನಪ್ರಿಯ ಬೈಕ್ ಆಗಿದ್ದು, ಹಳ್ಳಿಯಿಂದ ದಿಲ್ಲಿವರೆಗಿನ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಇದು ಕೇವಲ ರೂ.66,600 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಜೊತೆಗೆ ಹೋಂಡಾ ಎಸ್‌ಪಿ 125 (Honda SP 125) ರೂ.87,410 ದಿಂದ ರೂ.91,960 ಹಾಗೂ ಹೋಂಡಾ ಯುನಿಕಾರ್ನ್ (Honda Unicorn) ರೂ.1.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications