Honda: ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಹೋಂಡಾ ವಾಹನಗಳು ಮಾರಾಟ.. ಆಕ್ಟಿವಾಗೆ ಮುಗಿಬಿದ್ದ ಗ್ರಾಹಕರು!

ಜಪಾನ್ ಮೂಲದ ಹೋಂಡಾ ಮೋಟಾರ್‌ಸೈಕಲ್‌ (Honda Motorcycle), ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕ್ಟಿವಾ, ಶೈನ್, ಯುನಿಕಾರ್ನ್, ಸಿಬಿ350, ಡಿಯೋ ಹಾಗೂ ಲಿವೋ ಸೇರಿದಂತೆ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಮಂಗಳವಾರ ಕಂಪನಿಯು ಅಕ್ಟೋಬರ್ (2024) ತಿಂಗಳ ವಾಹನ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ದಾಖಲೆ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹೋಂಡಾ ಮೋಟಾರ್‌ಸೈಕಲ್‌ & ಸ್ಕೂಟರ್ ಇಂಡಿಯಾ ದಸರಾ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆ, ಕಳೆದ ತಿಂಗಳು (ಅಕ್ಟೋಬರ್ - 2024), 5,97,711 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 4,92,884 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 21% ಬೆಳವಣಿಗೆಯಾಗಿದೆ.

Honda October 2024 Sales Report 21 Percent Growth Activa Become Game Changer Details

ಈ ಅಕ್ಟೋಬರ್‌ನ ಒಟ್ಟಾರೆ ಮಾರಾಟದಲ್ಲಿ ದೇಶೀಯವಾಗಿ 5,53,120 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಲಾಗಿದ್ದು, ವಿದೇಶಕ್ಕೆ 44,591 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಸೆಪ್ಟೆಂಬರ್‌ನಲ್ಲಿಯೂ ಬರೋಬ್ಬರಿ 5,83,633 ಯುನಿಟ್ ಬೈಕ್ ಮತ್ತು ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿದೆ. ಹೋಂಡಾ, ದ್ವಿಚಕ್ರ ವಾಹನ ಮಾರಾಟದಲ್ಲಿ 'ಆಕ್ಟಿವಾ' ಸ್ಕೂಟರ್‌ ನೆರವಿನಿಂದ ಈ ಪರಿಪ್ರಮಾಣದಲ್ಲಿ ಪ್ರಗತಿ ಸಾಧಿಸಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ (Honda Activa) ಎರಡು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಆಕ್ಟಿವಾ 125 ಸ್ಕೂಟರ್ ಕನಿಷ್ಠ ರೂ.84,085 ಮತ್ತು ಗರಿಷ್ಠ ರೂ.92,257 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 51.23 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಆಕ್ಟಿವಾ 6ಜಿ ರೂ.79,624 ಹಾಗೂ ಗರಿಷ್ಠ ರೂ.84,624 ದರವನ್ನು ಒಳಗೊಂಡಿದೆ. 59.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Honda October 2024 Sales Report 21 Percent Growth Activa Become Game Changer Details

ಹೋಂಡಾ ಕಂಪನಿಯು 'ಶೈನ್ 100' ಬೈಕನ್ನು ಮಾರಾಟ ಮಾಡುತ್ತಿದೆ. ಇದು ರೂ.66,600 (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 98.98 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.38 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೋಂಡಾ ಯುನಿಕಾರ್ನ್ ಮೋಟಾರ್‌ಸೈಕಲ್ ಕೂಡ ಗ್ರಾಹಕರಿಗೆ ಲಭ್ಯವಿದೆ. ಇದು ರೂ.1.10 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 162 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 12.91 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 14.58 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೋಂಡಾ ಕಂಪನಿ 'ಲಿವೋ' ಬೈಕನ್ನು ಮಾರಾಟಗೊಳಿಸುತ್ತಿದೆ. ಈ ಮೋಟಾರ್‌ಸೈಕಲ್ ರೂ.79,950 ರಿಂದ ರೂ.83,950 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 109 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 8.79 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.30 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಗೇರ್‌ಬಾಕ್ಸ್‌ನ್ನು ಪಡೆದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹೋಂಡಾ ಎಸ್‌ಪಿ 125 ಸಹ ಜನಪ್ರಿಯ ಬೈಕ್ ಆಗಿದ್ದು, ರೂ.87,860 ರಿಂದ ರೂ.91,860 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 123 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 10.87 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, November 5, 2024, 23:55 [IST]
English summary
Honda october 2024 sales report 21 percent growth activa become game changer details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+