Honda: ಬಡವರ ಕನಸು ನನಸು.. ಹೋಂಡಾ ಶೈನ್ 100 ಮನೆಗೆ ತರಬೇಕೇ, ಅತ್ಯಂತ ಕಡಿಮೆ ಇಎಂಐ!
ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಬೈಕ್ ಖರೀದಿಸಬೇಕೆಂಬ ಆಸೆಯಿರುತ್ತದೆ. ಆದಾಗ್ಯೂ ತಮ್ಮ ಬಜೆಟ್‌ಗೆ ಯಾವ ಮೋಟಾರ್‌ಸೈಕಲ್ ತೆಗೆದುಕೊಳ್ಳಬಹುದು, ಎಷ್ಟು ಮೈಲೇಜ್ ನೀಡುತ್ತದೆ ಎಂಬ ಗೊಂದಲವಿರುತ್ತದೆ. ಅದಕ್ಕೆ ಹೋಂಡಾ ಶೈನ್ 100 (Honda Shine 100) ಉತ್ತರವಾಗಿದೆ. ಈ ಬೈಕ್ ಅತ್ಯಂತ ಕಡಿಮೆ ಬೆಲೆಯನ್ನು ಹೊಂದಿದ್ದು, ಕೆಲವೇ ಸಾವಿರಗಳಿದ್ದರೂ ಮನೆಗೆ ತರಬಹುದು. ಇಲ್ಲಿ ನೂತನ 'ಶೈನ್ 100' ಆನ್-ರೋಡ್ ದರ (On-Road Price), ಇಎಂಐ (EMI) ಹಾಗೂ ವಿಶೇಷತೆಗಳ ಬಗ್ಗೆ ವಿವರಿಸಿದ್ದೇವೆ.
ಬೆಂಗಳೂರಿನಲ್ಲಿ ಹೋಂಡಾ ಶೈನ್ ರೂ.83,925 ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ರೂ.8,000 ಡೌನ್ ಪೇಮೆಂಟ್ ಪಾವತಿಸಿ ಈ ಬೈಕ್ ಖರೀದಿಸಿದರೆ, ಶೇಕಡ 9.7% ಬಡ್ಡಿ ದರದಲ್ಲಿ ರೂ.75,925 ಸಾಲದ ಮೊತ್ತಕ್ಕೆ ಮೂರು ವರ್ಷದ (36 ತಿಂಗಳು) ಅವಧಿಗೆ ಮಾಸಿಕ ರೂ.2,439 ಇಎಂಐ ಕಟ್ಟಬೇಕು.

ಹೊಚ್ಚ ಹೊಸ ಹೋಂಡಾ ಶೈನ್ 100 ಮೋಟಾರ್‌ಸೈಕಲ್ 98.98 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.38 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 8.05 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, 68 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ಬೈಕ್ ಬ್ಲ್ಯಾಕ್ ವಿತ್ ರೆಡ್, ಬ್ಲ್ಯಾಕ್ ವಿತ್ ಗೋಲ್ಡ್, ಬ್ಲ್ಯಾಕ್ ವಿತ್ ಬ್ಲೂ ಸೇರಿದಂತೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸ್ಟಾರ್ಟರ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 99 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್, 9 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಈ ಹೋಂಡಾ ಶೈನ್ 100 ಮೋಟಾರ್‌ಸೈಕಲ್ 17-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದ್ದು, ಫ್ರಂಟ್ (ಮುಂಭಾಗ) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ರೇರ್ (ಹಿಂಭಾಗ) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಸುರಕ್ಷತೆಗಾಗಿ ಮುಂದೆ 130 ಎಂಎಂ ಹಾಗೂ ಹಿಂದೆ 110 ಎಂಎಂ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ದೇಶೀಯ ಗ್ರಾಹಕರಿಗೆ ಹೋಂಡಾ ಎಸ್‌ಪಿ 125 (Honda SP 125) ಬೈಕ್ ಕೂಡ ಅತ್ಯಂತ ಕಡಿಮೆ ಬೆಲೆಗೆ ದೊರೆಯಲಿದ್ದು, ರೂ.87,410 - 91,960 ಎಕ್ಸ್ ಶೋರೂಂ ದರವನ್ನು ಹೊಂದಿದೆ. 123.94 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 10.87 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 10.9 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹೋಂಡಾ ಯುನಿಕಾರ್ನ್ (Honda Unicorn) ಮೋಟಾರ್‌ಸೈಕಲ್, ರೂ.1.10 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 162.71 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 12.91 ಪಿಎಸ್ ಪವರ್ ಮತ್ತು 14.58 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications