Honda: ಈ ಬೈಕ್‌ಗಳಿಗಾಗಿ ಶೋರೂಂ ಎಡತಾಕಿದ ಮಧ್ಯಮ ವರ್ಗದ ಜನ.. ರೂ.81 ಸಾವಿರದಿಂದ ಶುರು, 60 Km ಮೈಲೇಜ್!

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿ ಹೋಂಡಾ ಮೋಟಾರ್‌ಸೈಕಲ್‌ & ಸ್ಕೂಟರ್ ಇಂಡಿಯಾ (Honda Motorcycle & Scooter India - HMSI), ಇತ್ತಿಚೆಗೆ, ಶೈನ್ 125 (Shine 125) ಹಾಗೂ ಎಸ್‌ಪಿ 125 (SP 125) ಬೈಕ್‌ಗಳ ಆಗಸ್ಟ್ (2024) ತಿಂಗಳ ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿದೆ. ಇವೆರೆಡು ಮೋಟಾರ್‌ಸೈಕಲ್‌ಗಳು ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ನಂಬರ್ 1 ಸ್ಕೂಟರ್ ಆಕ್ಟಿವಾ (2,27,458 ಯುನಿಟ್) ಬಳಿಕ ಹೋಂಡಾ ಕಂಪನಿಗೆ ಭಾರಿ ಲಾಭ ತಂದುಕೊಟ್ಟಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಆಗಸ್ಟ್ 2024) ಸರಿ ಸುಮಾರು 1,49,697 ಯನಿಟ್ ಹೋಂಡಾ ಶೈನ್ 125 ಮತ್ತು ಎಸ್‌ಪಿ 125 ಬೈಕ್‌ಗಳನ್ನು ಮಾರಾಟಗೊಳಿಸಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 1,14,142 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 31.15 % ಬೆಳವಣಿಗೆ ಸಾಧಿಸಲಾಗಿದೆ.

Honda Shine 125 And Sp 125 Bikes Sales Report August 2024 31 Percent Growth Details

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಹೋಂಡಾ ಶೈನ್ 125 (Honda Shine 125) ಮೋಟಾರ್‌ಸೈಕಲ್‌, ರೂ.81,549 ದಿಂದ ರೂ.85,550 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಡ್ರಮ್ ಹಾಗೂ ಡಿಸ್ಕ್ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಬ್ಲ್ಯಾಕ್, ಜೆನ್ನಿ ಗ್ರೇ ಮೆಟಾಲಿಕ್ ಮತ್ತು ಡೀಸೆಂಟ್ ಬ್ಲೂ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ (ಕಲರ್) ಸಿಗುತ್ತದೆ.

ಈ ಹೋಂಡಾ ಶೈನ್ 125 ಬೈಕ್, 123.94 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದೆ. 10.74 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 11 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡುತ್ತದೆ.

Honda Shine 125 And Sp 125 Bikes Sales Report August 2024 31 Percent Growth Details

ನೂತನ ಹೋಂಡಾ ಶೈನ್ ಮೋಟಾರ್‌ಸೈಕಲ್‌ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಲೆಂಟ್ ಸ್ಟಾರ್ಟರ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್, ಎಂಜಿನ್ ಕಿಲ್-ಸ್ವಿಚ್ ಹಾಗೂ ಅಲಾಯ್ ವೀಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. 113 ಕೆಜಿ ತೂಕವಿದ್ದು, 10.5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ.

ಹೋಂಡಾ ಎಸ್‌ಪಿ 125 (Honda SP 125) ಬೈಕ್ ರೂ.87,860 ದಿಂದ ರೂ.91,860 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದೆ. 10.87 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಹೋಂಡಾ ಎಸ್‌ಪಿ 125 ಮೋಟಾರ್‌ಸೈಕಲ್‌, ಎಲ್ಇಡಿ ಹೆಡ್‌ಲೈಟ್‌, ಫುಲ್-ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಡ್ - ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಮತ್ತು ಸೈಲೆಂಟ್ ಸ್ಟಾರ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್ ಮತ್ತು ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, September 29, 2024, 9:00 [IST]
English summary
Honda shine 125 and sp 125 bikes sales report august 2024 31 percent growth details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+