Honda: ಯುವಕರಿಗೆ ಸಿಹಿಸುದ್ದಿ: 2025ರ ಹೋಂಡಾ ಎಸ್‌ಪಿ 160 ಬೈಕ್ ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಹೋಂಡಾ ಮೋಟಾರ್‌ಸೈಕಲ್‌ & ಸ್ಕೂಟರ್ ಇಂಡಿಯಾ (Honda Motorcycle & Scooter India), ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಈಗಾಗಲೇ, 2025ರ ಆಕ್ಟಿವಾ 125 ಸ್ಕೂಟರ್ ಮತ್ತು ಎಸ್‌ಪಿ 125 ಬೈಕ್‌ನ್ನು ಮಾರಾಟಕ್ಕೆ ತರುವ ಮೂಲಕ ಹೊಸ ವರ್ಷಕ್ಕೆ ಅಣಿಯಾಗುತ್ತಿದೆ. ಇಂದು ದೇಶೀಯ ಮಾರುಕಟ್ಟೆಯಲ್ಲಿ ನೂತನ 'ಹೋಂಡಾ ಎಸ್‌ಪಿ 160' ಮೋಟಾರ್‌ಸೈಕಲ್‌ನ್ನು ಕೂಡ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ. ಬನ್ನಿ ನೂತನ ಬೈಕ್ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ಹೊಚ್ಚ ಹೊಸ ಹೋಂಡಾ ಎಸ್‌ಪಿ 160 (Honda SP 160) ಮೋಟಾರ್‌ಸೈಕಲ್‌ನ್ನು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಪರಿಚಯಿಸಲಾಗಿದೆ. ಇದು ರೂ.1,21,951 ರಿಂದ ರೂ.1,27,956 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸಿಂಗಲ್-ಡಿಸ್ಕ್ (Single-Disc), ಹಾಗೂ ಡುಯಲ್-ಡಿಸ್ಕ್ (Dual-Disc) ಎಂಬ ಎರಡು ರೂಪಾಂತರಗಳೊಂದಿಗೆ (ವೇರಿಯೆಂಟ್) ಲಭ್ಯವಿದೆ.

Honda SP 160 Launched In India Rs 1 22 Lakh Starting Price Details

ಈ ಬೈಕ್ ಶಕ್ತಿಯುತವಾದ ಒಬಿಡಿ2ಬಿ (OBD2B) 162.71 ಸಿಸಿ ಸಿಂಗಲ್-ಸಿಲಿಂಡರ್ ಫ್ಯುಯೆಲ್-ಇಂಜೆಕ್ಟ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 7,500 ಆರ್‌ಪಿಎಂನಲ್ಲಿ 13 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,500 ಆರ್‌ಪಿಎಂನಲ್ಲಿ 14.58 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 50 ಕೆಎಂಪಿಎಲ್‌ವರೆಗೂ ಮೈಲೇಜ್ ಸಹ ನೀಡುತ್ತದೆ ಎಂದು ಅಂದಾಜಿಸಲಾಗಿದೆ.

ನೂತನ ಹೋಂಡಾ ಎಸ್‌ಪಿ 160 ಬೈಕ್, ಹೊರಭಾಗದಲ್ಲಿ ಬಹುತೇಕ ಹಳೆಯ ಮಾಡೆಲ್‌ನಂತೆ ಇದೆ. ಆದರೂ ಹೆಡ್‌ಲೈಟ್ ಸುತ್ತಲೂ ಹೊಸದಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಈ ಮೋಟಾರ್‌ಸೈಕಲ್‌ ರೇಡಿಯಂಟ್ ರೆಡ್ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ ಹಾಗೂ ಅಥ್ಲೆಟಿಕ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Honda SP 160 Launched In India Rs 1 22 Lakh Starting Price Details

ಹೊಸ ಎಸ್‌ಪಿ 160 ಮೋಟಾರ್‌ಸೈಕಲ್‌ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 4.2-ಇಂಚಿನ ಟಿಎಫ್‌ಟಿ ಸ್ಕ್ರೀನ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಹೋಂಡಾ ರೋಡ್‌ಸಿಂಕ್ ಅಪ್ಲಿಕೇಶನ್, ಯುಎಸ್‌ಬಿ ಟೈಪ್ - ಸಿ ಚಾರ್ಜಿಂಗ್ ಪೋರ್ಟ್ ಮತ್ತು ಕಾಲ್/ಎಸ್ಎಂಎಸ್ ಅಲರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್, ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಅನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. 17-ಇಂಚಿನ ವೀಲ್‌ಗಳನ್ನು ಪಡೆದಿದೆ. ಸೀಟ್ ಹೈಟ್ 796 ಎಂಎಂ ಇದ್ದು, 12-ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಇನ್ನು, 2025ರ ಹೋಂಡಾ ಎಸ್‌ಪಿ 160 ಬೈಕ್‌ಗೆ ಬಜಾಜ್ ಪಲ್ಸರ್ ಎನ್ಎಸ್ 160, ಬಜಾಜ್ ಪಲ್ಸರ್ 150 ಮತ್ತು ಟಿವಿಎಸ್ ಅಪಾಚೆ ಆರ್‌ಟಿಆರ್ 160 ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಈ ಹೊಸ ಬೈಕ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುವ ನಿರೀಕ್ಷೆಯಿದೆ. ಮುಂಬರುವ ದಿನಗಳಲ್ಲಿ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, December 24, 2024, 16:50 [IST]
English summary
Honda sp 160 launched in india rs 1 22 lakh starting price details
Read more on honda motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+