Honda: ಹೀರೋ ಹಿಂದಿಟ್ಟ ಹೋಂಡಾ.. ನಂಬರ್ 1 ಪಟ್ಟಕ್ಕೆ.. ಆಕ್ಟಿವಾಗಾಗಿ ಕ್ಯೂ ನಿಂತ ಗ್ರಾಹಕರು!
ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ (Honda Motorcycle & Scooter India - HMSI) ಪ್ರಮುಖ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವೈಶಿಷ್ಟ್ಯ ಹೊಂದಿರುವ ವಿವಿಧ ಬೈಕ ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಸಹ ನಾಮುಂದು - ತಾಮುಂದು ಎಂದು ಖರೀದಿಸುತ್ತಿದ್ದಾರೆ. ಗುರುವಾರ ಜುಲೈ ತಿಂಗಳ ಮಾರಾಟ ವರದಿ ಪ್ರಕಟಗೊಂಡಿದ್ದು, ಹೀರೋ ಮೋಟೋಕಾರ್ಪ್ ಹಿಂದಿಟ್ಟು ಹೋಂಡಾ ಮೊದಲ ಸ್ಥಾನಕ್ಕೆ ಬಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೋಂಡಾ ಕಂಪನಿ ಜುಲೈನಲ್ಲಿ (2024) ಒಟ್ಟು 4,83,100 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾರುವಲ್ಲಿ ಯಶಸ್ವಿಯಾಗಿದೆ. ವರ್ಷದಿಂದ ವರ್ಷಕ್ಕೆ (YoY) ಶೇಕಡ 43% ಬೆಳವಣಿಗೆ ಕಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ 4,39,118 ಯುನಿಟ್ ಮಾರಾಟ ಮಾಡಿದ್ದು, ವಿದೇಶಕ್ಕೆ 43,982 ಯುನಿಟ್ ದ್ವಿಚಕ್ರ ವಾಹನಗಳನ್ನು ರಫ್ತು ಮಾಡಿದೆ. ಕ್ರಮವಾಗಿ 41% ಮತ್ತು 60% ಬೆಳವಣಿಗೆ ಸಾಧಿಸಿದೆ.

ಹೀರೋ ಮೋಟೋಕಾರ್ಪ್ ಮಾರಾಟ ಕೊಂಚ ಮಟ್ಟಿಗೆ ಕುಸಿತ ಕಂಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿ ಪಡೆದುಕೊಳ್ಳಬೇಕಾಗಿದೆ. ಜುಲೈನಲ್ಲಿ ಒಟ್ಟು 370,274 ದ್ವಿಚಕ್ರ ವಾಹನಗಳನ್ನು (ಮೋಟಾರ್‌ಸೈಕಲ್ - ಸ್ಕೂಟರ್) ಮಾರಾಟಗೊಳಿಸಿದೆ. 2023ರ ಇದೇ ಅವಧಿಯಲ್ಲಿ ಮಾರಿದ 347,535 ಯುನಿಟ್‌ಗೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ ಶೇಕಡ 5.37% ಹಿನ್ನೆಡೆಯಾಗಿದೆ.
ಹೋಂಡಾ ಕಂಪನಿ ಈ ಪರಿಪ್ರಮಾಣದಲ್ಲಿ ಯಶಸ್ಸು ಸಾಧಿಸಲು 'ಆಕ್ಟಿವಾ' ಸ್ಕೂಟರ್ ಪ್ರಮುಖ ಕಾರಣವಾಗಿದೆ. ಇದು ಎರಡು ವಿಧದಲ್ಲಿ ಸಿಗುತ್ತದೆ. ಆಕ್ಟಿವಾ 125 (Activa 125) ರೂ.83,084 ದಿಂದ ರೂ.92,257 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 124 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೋಂಡಾ ಆಕ್ಟಿವಾ 6ಜಿ (Honda Activa 6G) ರೂ.78,624 ದಿಂದ ರೂ.84,674 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 109.51 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.8 ಪಿಎಸ್ ಗರಿಷ್ಠ ಶಕ್ತಿ ಮತ್ತು 8.9 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 50 ಕೆಎಂಪಿಎಲ್‌ವರೆಗೆ ನೀಡಲಿದ್ದು, ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ.
ಹೋಂಡಾ ಶೈನ್ 100 (Honda Shine 100) ಜನಪ್ರಿಯ ಬೈಕ್ ಆಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ರೂ.66,600 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 98.98 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 68 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೋಂಡಾ ಎಸ್‌ಪಿ 125 (Honda SP 125) ಮೋಟಾರ್‌ಸೈಕಲ್ ಕೂಡ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇದು ರೂ.87,410 - 91,960 ಎಕ್ಸ್ ಶೋರೂಂ ಖರೀದಿಗೆ ದೊರೆಯುತ್ತದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹೋಂಡಾ ಯುನಿಕಾರ್ನ್ (Honda Unicorn) ಪ್ರಮುಖ ಬೈಕ್ ಆಗಿದ್ದು, ರೂ.1.10 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಇವುಗಳೊಟ್ಟಿಗೆ ಹಲವು ಸ್ಕೂಟರ್ ಹಾಗೂ ಬೈಕ್‌ಗಳು ಖರೀದಿಗೆ ಸಿಗುತ್ತವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications