ಜನಪ್ರಿಯ ಹೋಂಡಾ ಯುನಿಕಾರ್ನ್ ಬೈಕ್ ಮಾರಾಟದ ವರದಿ ಬಹಿರಂಗ
ಜಪಾನ್ ಮೂಲದ ಹೋಂಡಾ (Honda) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಬೈಕ್ - ಸ್ಕೂಟರ್‌ಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಪ್ರೀಮಿಯಂ ಲುಕ್ ಪಡೆದಿರುವ ಹೋಂಡಾ ಯುನಿಕಾರ್ನ್ (Honda Unicorn) ಬೈಕ್‌ನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಮನೆಗೆ ತರಬಹುದು. ಈ ಬೈಕಿನ ಕಳೆದ ತಿಂಗಳ ಮಾರಾಟದ ವರದಿ ಬಹಿರಂಗವಾಗಿದೆ. ಕಳೆದ ತಿಂಗಳಿನಲ್ಲಿ ಈ ಜನಪ್ರಿಯ ಹೋಂಡಾ ಯುನಿಕಾರ್ನ್ ಬೈಕ್ ಮಾರಾಟದಲ್ಲಿ ಸಣ್ಣ ಮಟ್ಟದಲ್ಲಿ ಕುಸಿತವನ್ನು ಕಂಡಿದೆ.
2024ರ ಆಗಸ್ಟ್ ತಿಂಗಳಿನಲ್ಲಿ ಹೋಂಡಾ ಯುನಿಕಾರ್ನ್ ಮಾದರಿಯು 31,451 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ ಹೋಂಡಾ ಯುನಿಕಾರ್ನ್ ಮಾದರಿಯ 31,473 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಶೇ. 0.7 ರಷ್ಟು ಕುಸಿತವನ್ನು ಕಂಡಿದೆ. ಆದರೆ ಇದು ದೊಡ್ಡ ಕುಸಿತವಲ್ಲ. ಈ ತಿಂಗಳ ಹಬ್ಬದ ಸೀಸನ್ ಆಗಿರುವುದರಿಂದ ಮಾರಾಟದಲ್ಲಿ ಬೆಳವಣಿಗೆ ಕಾಣುವ ಸಾದ್ಯತೆಗಳಿದೆ.

ಈ ಹೋಂಡಾ ಯುನಿಕಾರ್ನ್ ಬೈಕ್ 162.71 ಸಿಸಿ ಏರ್-ಕೋಲ್ಡ್ ಫ್ಯುಯೆಲ್ ಇಂಜೆಕ್ಟ್ದ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 12.91 ಪಿಎಸ್ ಗರಿಷ್ಠ ಪವರ್ ಹಾಗೂ 14.58 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 60 ಕಿ.ಮೀ ವರೆಗೆ ಮೈಲೇಜ್ ಅನ್ನು ನೀಡುತ್ತದೆ.
ಈ ಹೋಂಡಾ ಯುನಿಕಾರ್ನ್ ಬೈಕ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಅನಲಾಗ್ ಇನ್‌ಸ್ಟ್ರುಮೆಂಟ್ ಕನ್ಸೋಲ್, ಎಂಜಿನ್ ಕಿಲ್ ಸ್ವಿಚ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನಾಲಿಟಿ, ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೋಂಡಾ ಯುನಿಕಾರ್ನ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸುರಕ್ಷತೆಗಾಗಿ ಮುಂದೆ 240 ಎಂಎಂ ಡಿಸ್ಕ್ ಹಾಗೂ ಹಿಂದೆ 130 ಎಂಎಂ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. 139 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್, 13 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.
ಈ ಬೈಕ್ 187 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದಿದ್ದು, ಸೀಟ್ ಹೈಟ್ 798 ಎಂಎಂ ಇದೆ. ಬಜಾಜ್ ಪಲ್ಸರ್ 150 ಹಾಗೂ ಟಿವಿಎಸ್ ಅಪಾಚೆ ಆರ್‌ಟಿಆರ್ 160ಯಂತಹ ಪ್ರತಿಸ್ಪರ್ಧಿ ಮೋಟಾರ್‌ಸೈಕಲ್‌ಗಳನ್ನು ಹೊಂದಿದೆ. ಈ ಟಿವಿಎಸ್ ಅಪಾಚೆ ಆರ್‌ಟಿಆರ್ 160 ಮೋಟಾರ್‌ಸೈಕಲ್,159.7 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 16.04 ಪಿಎಸ್ ಪವರ್ ಮತ್ತು 13.85 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಬೈಕ್ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಅದರಲ್ಲೂ ಆಕ್ಟಿವಾ ಹಾಗೂ ಡಿಯೋ ಸ್ಕೂಟರ್‌ಗಳಿಗೆ ಪ್ರತ್ಯೇಕ ಗ್ರಾಹಕರಿದ್ದು, ಭಾರಿ ಸಂಖ್ಯೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಬೈಕ್ ಮಾರಾಟದಲ್ಲಿ ಶೈನ್ ಮಾದರಿಯು ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications