Honda: ಹೋಂಡಾ ಯುನಿಕಾರ್ನ್ ಬೈಕ್ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, ಇಎಂಐ ಏನು?
ಜಪಾನ್ ಮೂಲದ ಹೋಂಡಾ (Honda) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಬೈಕ್ - ಸ್ಕೂಟರ್‌ಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಪ್ರೀಮಿಯಂ ಲುಕ್ ಪಡೆದಿರುವ ಹೋಂಡಾ ಯುನಿಕಾರ್ನ್ (Honda Unicorn) ಬೈಕ್‌ನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಮನೆಗೆ ತರಬಹುದು. ಇಲ್ಲಿ ನೂತನ ಮೋಟಾರ್‌ಸೈಕಲ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಆಯ್ಕೆಯ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಬೆಂಗಳೂರಿನಲ್ಲಿ ಹೊಚ್ಚ ಹೊಸ ಹೋಂಡಾ ಯುನಿಕಾರ್ನ್ ಬೈಕ್ ರೂ.1,45,053 ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ರೂ.15,000 ಡೌನ್ ಪೇಮೆಂಟ್ (Down Payment) ಪಾವತಿಸಿ ಈ ಮೋಟಾರ್‌ಸೈಕಲ್ ಕೊಂಡುಕೊಂಡರೆ, ರೂ.1,30,053 ಸಾಲದ ಮೊತ್ತಕ್ಕೆ ಶೇಕಡ 9.7% ಬಡ್ಡಿ ದರದಲ್ಲಿ ಮೂರು ವರ್ಷದ (36 ತಿಂಗಳು) ಅವಧಿಗೆ ಮಾಸಿಕ ರೂ.4,178 ಇಎಂಐ ಕಟ್ಟಬೇಕು.

ನೂತನ ಹೋಂಡಾ ಯುನಿಕಾರ್ನ್ ಮೋಟಾರ್‌ಸೈಕಲ್ 162.71 ಸಿಸಿ ಏರ್-ಕೋಲ್ಡ್ ಫ್ಯುಯೆಲ್ ಇಂಜೆಕ್ಟ್ದ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 12.91 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 14.58 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ಬೈಕ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಅನಲಾಗ್ ಇನ್‌ಸ್ಟ್ರುಮೆಂಟ್ ಕನ್ಸೋಲ್, ಎಂಜಿನ್ ಕಿಲ್ ಸ್ವಿಚ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನಾಲಿಟಿ, ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೋಂಡಾ ಯುನಿಕಾರ್ನ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸುರಕ್ಷತೆಗಾಗಿ ಮುಂದೆ 240 ಎಂಎಂ ಡಿಸ್ಕ್ ಹಾಗೂ ಹಿಂದೆ 130 ಎಂಎಂ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ. 139 ಕೆಜಿ ತೂಕವಿರುವ ಈ ಮೋಟಾರ್‌ಸೈಕಲ್, 13 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.
ಈ ಬೈಕ್ 187 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದಿದ್ದು, ಸೀಟ್ ಹೈಟ್ 798 ಎಂಎಂ ಇದೆ. ಬಜಾಜ್ ಪಲ್ಸರ್ 150 ಹಾಗೂ ಟಿವಿಎಸ್ ಅಪಾಚೆ ಆರ್‌ಟಿಆರ್ 160ಯಂತಹ ಪ್ರತಿಸ್ಪರ್ಧಿ ಮೋಟಾರ್‌ಸೈಕಲ್‌ಗಳನ್ನು ಹೊಂದಿದೆ. ಪ್ರಸ್ತುತ ದೇಶೀಯವಾಗಿ ಖರೀದಿಗೆ ದೊರೆಯುವ ಬಜಾಜ್ ಪಲ್ಸರ್ 150 ಬೈಕ್ ರೂ.1.10 ಲಕ್ಷದಿಂದ ರೂ.1.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದ್ದು, 47.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಟಿವಿಎಸ್ ಅಪಾಚೆ ಆರ್‌ಟಿಆರ್ 160 ಮೋಟಾರ್‌ಸೈಕಲ್, ರೂ.1.10 ಲಕ್ಷದಿಂದ ರೂ.1.27 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 159.7 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 16.04 ಪಿಎಸ್ ಪವರ್ ಮತ್ತು 13.85 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications