Jitendra EV: ಹೊಸ ಜೀತೇಂದ್ರ ಪ್ರೈಮೊ ಸೀರಿಯಸ್ ಇ-ಸ್ಕೂಟರ್‌ಗಳು ಬಿಡುಗಡೆ, ರೂ.79,999 ಬೆಲೆ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಎಲೆಕ್ಟ್ರಿಕ್ ವಾಹನ ತಯಾರಕ ಜಿತೇಂದ್ರ ಇವಿ (Jitendra EV), ಪ್ರೈಮೊ ಇ-ಸ್ಕೂಟರ್‌ನ ಎರಡು ಹೊಸ ರೂಪಾಂತರ (ವೇರಿಯೆಂಟ್)ಗಳನ್ನು ಬಿಡುಗಡೆ ಮಾಡಿದೆ. ಇವು ರೂ.79,999 ಆರಂಭಿಕ ಬೆಲೆಯನ್ನು ಹೊಂದಿವೆ. ನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯದ ಕುರಿತಂತೆ ಸಂಪೂರ್ಣವಾದ ವಿವರ ಇಲ್ಲಿದೆ.

ಜೀತೇಂದ್ರ ಪ್ರೈಮೊ ಇ-ಸ್ಕೂಟರ್‌ನ ಹೊಚ್ಚ ಹೊಸ ಮಾದರಿಗಳನ್ನು ಪ್ರೈಮೊ ಎಸ್ (Primo S) ಹಾಗೂ ಪ್ರೈಮೊ ಪ್ಲಸ್ (Primo Plus) ಎಂದು ಹೆಸರಿಸಲಾಗಿದೆ. ಈ ಆವೃತ್ತಿಗಳು 2.04 ಕೆಡಬ್ಲ್ಯೂಹೆಚ್ ಮತ್ತು 3.26 ಕೆಡಬ್ಲ್ಯೂಹೆಚ್ ಸಾಮರ್ಥ್ಯ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ ಕ್ರಮವಾಗಿ 82 ರಿಂದ 137 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಲ್ಲವು. ಜೊತೆಗೆ 52 ಕೆಎಂಪಿಹೆಚ್ ಟಾಪ್ ಸ್ಪೀಡ್‍ನ್ನು ಹೊಂದಿವೆ.

Jitendra EV Launched 2 New Variants Of Primo Electric Scooter Rs 79 999 Price

ಈ ಪ್ರೈಮೊ ಇ-ಸ್ಕೂಟರ್‌ನ ಹೊಸ ರೂಪಾಂತರಗಳಲ್ಲಿ ಬ್ಯಾಟರಿ ಪ್ಯಾಕ್‌ನ್ನು ಹೊರತೆಗೆದು ಮತ್ತೆ ಹಾಕಬಹುದಾಗಿದೆ. ಬ್ಯಾಟರಿಯ ಸುರಕ್ಷತೆಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಅದು ಐಪಿ67 ಮಾನದಂಡಗಳ ಅನ್ವಯವಾಗಿದೆ. ಡಿಜಿಟಲ್ ಇನ್ಸ್ಟ್ರುಮೆಂಟೆಡ್ ಕ್ಲಸ್ಟರ್, ಯುಎಸ್‌‍ಬಿ ಮೊಬೈಲ್ ಚಾರ್ಜಿಂಗ್ ಪೋರ್ಟ್, ಎಲ್ಇಡಿ ಲ್ಯಾಂಪ್‌ಗಳು, ಸೈಡ್ ಸ್ಟ್ಯಾಂಡ್ ಸೆನ್ಸಾರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಜೀತೇಂದ್ರ ಪ್ರೈಮೊ ಇ-ಸ್ಕೂಟರ್‌ನ ನೂತನ ರೂಪಾಂತರಗಳ ಬಿಡುಗಡೆಯ ಬಗ್ಗೆ ಮಾತನಾಡಿರುವ ಕಂಪನಿಯ ಸಹ-ಸಂಸ್ಥಾಪಕ ಸಮ್ಕಿತ್ ಶಾ ಅವರು, 'ಅತ್ಯಾಧುನಿಕ ವಿನ್ಯಾಸ ಮತ್ತು ಸುಧಾರಿತ ವೈಶಿಷ್ಟ್ಯಗಳೊಂದಿಗೆ ಪ್ರೈಮೊ ಎಸ್ ಮತ್ತು ಪ್ರೈಮೊ ಪ್ಲಸ್ ಮಾದರಿಗಳನ್ನು ಬಿಡುಗಡೆಗೊಳಿಸಿದ್ದೇವೆ. ಇವು ನಗರದೊಳಗಿನ ಸಂಚಾರಕ್ಕೆ ಹೆಚ್ಚು ಸೂಕ್ತವಾಗಿದ್ದು, ಹಲವು ಹೊಸತನಗಳಿಗೆ ಕೂಡ ಸಾಕ್ಷಿಯಾಗಿವೆ' ಎಂದು ಹೇಳಿದ್ದಾರೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಜೀತೇಂದ್ರ ಇವಿ ಹಲವು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದೆ. ಜಿತೇಂದ್ರ ಜೆಎಂಟಿ 1000ಹೆಚ್ಎಸ್ ರೂ.97,224 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 2 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್ ನಲ್ಲಿ 80 ಕಿ.ಮೀ ಓಡುತ್ತದೆ. ಹಾಗೆಯೇ 52 ಕೆಎಂಪಿಹೆಚ್ ಟಾಪ್ ಸ್ಪೀಡ್‍ನ್ನು ಹೊಂದಿದೆ.

ಜಿತೇಂದ್ರ ಜೆಇಟಿ 320 ಎಲೆಕ್ಟ್ರಿಕ್ ಸ್ಕೂಟರ್ ರೂ.73,780 ದಿಂದ ರೂ.75,950 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1.56 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್ ನಲ್ಲಿ 60 ರಿಂದ 70 ಕಿಲೋಮೀಟರ್ ಕ್ರಮಿಸುತ್ತದೆ. ಬ್ಲ್ಯಾಕ್, ರೆಡ್ ಹಾಗೂ ವೈಟ್ ಬಣ್ಣಗಳ ಆಯ್ಕೆಯಲ್ಲಿ ಸಿಗುವ ಈ ಸ್ಕೂಟರ್, ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಡಿಸ್ಕ್, ಹಿಂಭಾಗ (ರೇರ್) ಡ್ರಮ್ ಬ್ರೇಕ್ ಅನ್ನು ಒಳಗೊಂಡಿದೆ.

ಜಿತೇಂದ್ರ ಜೆಇಟಿ 1000 3ಕೆ ಎಲೆಕ್ಟ್ರಿಕ್ ಸ್ಕೂಟರ್ ರೂ.1.28 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ದೊರೆಯುತ್ತದೆ. 3.12 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 126 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 98 ಕೆಜಿ ತೂಕವಿದ್ದು, ಬ್ಲ್ಯಾಕ್, ರೆಡ್ ಮತ್ತು ವೈಟ್ ಬಣ್ಣಗಳೊಂದಿಗೆ ಲಭ್ಯವಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 24, 2024, 13:11 [IST]
English summary
Jitendra ev launched 2 new variants of primo electric scooter rs 79999 price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+