ಈ ಜನಪ್ರಿಯ ಕವಾಸಕಿ ವಲ್ಕನ್ ಎಸ್ ಬೈಕ್ ಮೇಲೆ ಭರ್ಜರಿ ಡಿಸ್ಕೌಂಟ್: ಈಗ ಬಿಟ್ಟರೆ ಮತ್ತೆ ಸಿಗಲ್ಲ!

ಜಪಾನ್ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಕವಾಸಕಿ (Kawasaki) ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಕವಾಸಕಿ ವಲ್ಕನ್ ಎಸ್ ಕ್ರೂಸರ್ ಬೈಕ್ ಅನ್ನು ಮಾರಾಟ ಮಾಡುತ್ತಿದೆ. ಕವಾಸಕಿ ಕಂಪನಿಯು ಹೈ ಪಾರ್ಫಾಮೆನ್ಸ್ ಬೈಕುಗಳ ಜೊತೆ ಕ್ರೂಸರ್ ಬೈಕ್ ಅನ್ನು ತಮ್ಮ ಪೋರ್ಟ್‌ಫೋಲಿಯೊವನ್ನು ಹೊಂದಿದೆ. ಇದರಲ್ಲಿ ಕವಾಸಕಿ ವಲ್ಕನ್ ಎಸ್ (Kawasaki Vulcan S) ಕ್ರೂಸರ್ ಬೈಕಿಗೆ ರೂ.60,000 ರಿಯಾಯಿತಿಯನ್ನು ಘೋಷಿಸಿದೆ. ಈ ರಿಯಾಯಿತಿಗಳನ್ನು "ಗುಡ್ ಟೈಮ್ಸ್ ವೋಚರ್" ಎಂದು ನೀಡಲಾಗುತ್ತದೆ. ಇದನ್ನು ಗ್ರಾಹಕರು ಚೆಕ್‌ಔಟ್‌ನಲ್ಲಿ ರಿಡೀಮ್ ಮಾಡಬಹುದು.

ಈ ಕವಾಸಕಿ ವಲ್ಕನ್ ಎಸ್ ಬೈಕ್ ಅನ್ನು ಖರೀದಿಸಲು ಬಯಸುವವರಿಗೆ ಉತ್ತಮ ಅವಕಾಶವಾಗಿದೆ. ಈ ಕವಾಸಕಿ ವಲ್ಕನ್ ಎಸ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 7.10 ಲಕ್ಷವಾಗಿದೆ. ಈ ಬೆಲೆಯು ಎಕ್ಸ್ ಶೋರೂಂ ಪ್ರಕಾರವಾಗಿದೆ. ಈ ಕವಾಸಕಿ ವಲ್ಕನ್ ಎಸ್ ಕ್ರೂಸರ್ ಬೈಕ್ ಮೆಟಾಲಿಕ್ ಮ್ಯಾಟ್ ಗ್ರಾಫ್ನಸ್ಟೀಲ್ ಗ್ರೇ' ಎಂಬ ಹೊಸ ಬಣ್ಣದೊಂದಿಗೆ ಲಭ್ಯವಿದೆ.

Kawasaki Vulcan S

ಈ ಕವಾಸಕಿ ವಲ್ಕನ್ ಎಸ್ ಬೈಕ್ ರಿಯಾಯಿತಿ ದರವು ಸ್ಟಾಕ್‌ಗಳು ಕೊನೆಗೊಳ್ಳುವವರೆಗೆ ಅಥವಾ ಜುಲೈ 2024 ರ ಅಂತ್ಯದವರೆಗೆ ಲಭ್ಯವಿರುತ್ತದೆ. ಕವಾಸಕಿ ವಲ್ಕನ್ ಎಸ್ ಕ್ರೂಸರ್ ಬೈಕ್ ಫ್ಯೂಯಲ್ ಟ್ಯಾಂಕ್ ಹೊಸ ಬೂದು ಮತ್ತು ಬೆಳ್ಳಿ ಬಣ್ಣಗಳನ್ನು ಜೊತೆಗೆ ಹಸಿರು ಪಿನ್-ಸ್ಟ್ರಿಪಿಂಗ್ ಅನ್ನು ಆಕರ್ಷಕ ಲುಕ್ ಅನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಹಸಿರು ಬಣ್ಣದ ಲೈನ್ ರೇಡಿಯೇಟರ್ ಸೈಡ್ ಕವರ್‌ಗಳನ್ನು ಹೊಂದಿವೆ.

ಈ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ 649ಸಿಸಿ ಪ್ಯಾರೆಲಲ್ ಲಿಕ್ವಿಡ್-ಟ್ವಿನ್ ಎಂಜಿನ್ ಹೊಂದಿದೆ. ಈ ಎಂಜಿನ್ 7500 ಆರ್‌ಪಿಎಂನಲ್ಲಿ 60 ಬಿಹೆಚ್‍ಪಿ ಪವರ್ ಮತ್ತು 7000 ಆರ್‌ಪಿಎಂನಲ್ಲಿ 62.4 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

Kawasaki Vulcan S

ಇನ್ನು ಕವಾಸಕಿ ಝಡ್650 ಮತ್ತು ನಿಂಝಾ 650 ಬೈಕಿನಲ್ಲಿರುವಂತಹ ಅದೇ ಮಾದರಿಯ ಫೀಚರ್ ಗಳನ್ನು ಹೊಸ ವಲ್ಕನ್ ಬೈಕಿನಲ್ಲಿ ಲಭ್ಯವಿದೆ. ಆದರೆ ಬ್ಲೂಟೂತ್ ಕನೆಕ್ಟಿವಿಟಿ ಹೊಂದಿರುವ ಇನ್ಸ್ ಟ್ರೂಮೆಂಟ್ ಕನ್ಸೋಲ್ ಫೀಚರ್ ಈ ವಲ್ಕನ್ ಬೈಕಿನಲ್ಲಿ ನೀಡಲಾಗಿಲ್ಲ. ಈ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ ರೆಟ್ರೋ ವಿನ್ಯಾಸದ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.

ಇದರೊಂದಿಗೆ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ ಬ್ಲ್ಯಾಕ್ ಕೌಲ್, ಎರಡು ಕಡೆಗಳಲ್ಲಿ ದುಂಡಗಿನ ಆಕಾರದ ಫೆಂಡರ್‌ಗಳು ಮತ್ತು ಹಿಂಭಾಗದಲ್ಲಿ ಸೆಟ್ ಟರ್ನ್ ಸಿಗ್ನಲ್ ಇಂಡಿಕೇಟರ್ ಗಳನ್ನು ಹೊಂದಿದೆ. ಒಟ್ಟಾರೆಯಾಗಿ ಈ ಕ್ರೂಸರ್ ಬೈಕ್ ಆಕರ್ಷಕವಾಗಿದೆ. ಹೊಸ ಕವಾಸಕಿ ವಲ್ಕನ್ ಎಸ್ ಬೈಕ್ 1575 ಎಂಎಂ ಉದ್ದದ ವ್ಹೀಲ್ ಬೇಸ್ ಅನ್ನು ಹೊಂದಿದೆ.

Kawasaki Vulcan S

ಈ ಕವಾಸಕಿ ವಲ್ಕನ್ ಎಸ್ ಬೈಕಿನಲ್ಲಿ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಈ ಬೈಕಿನ ಮುಂಭಾಗದಲ್ಲಿ 130 ಎಂಎಂ ಟ್ರಾವೆಲ್ ನೊಂದಿಗೆ 41 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಆಫ್ಸೆಟ್ ಲೇಡೌನ್ ಶಾಕ್ 80 ಎಂಎಂ ಟ್ರಾವೆಲ್ ಪ್ರಿ-ಲೋಡ್ ಹೊಂದಾಣಿಗೆ ಮಾಡಬಹುದಾದ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಇನ್ನು ಈ ಕವಾಸಕಿ ಕ್ರೂಸರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಬೈಕಿನ ಮುಂಭಾಗದಲ್ಲಿ ಡ್ಯುಯಲ್ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ 250 ಎಂಎಂ ಯುನಿಟ್ ಅನ್ನು ನೀಡಲಾಗಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, July 3, 2024, 16:18 [IST]
English summary
Kawasaki vulcan s get discounts in india details
Read more on kawasaki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+