KTM: ಯುವಕರಿಗೆ ಸಿಹಿಸುದ್ದಿ.. ಈ ಜನಪ್ರಿಯ ಕೆಟಿಎಂ ಬೈಕ್‌ಗೆ ದೊಡ್ಡ ರಿಯಾಯಿತಿ, ಈಗ ಬಿಟ್ಟರೆ ಮತ್ತೆ ಸಿಗಲ್ಲ!

ಆಸ್ಟ್ರಿಯಾ ಮೂಲದ ಕೆಟಿಎಂ (KTM) ಜನಪ್ರಿಯ ಮೋಟಾರ್‌ಸೈಕಲ್ ತಯಾರಕ ಕಂಪನಿಯಾಗಿ ಗುರುತಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಇವುಗಳನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಂಪನಿಯು ಜನಪ್ರಿಯ 250 ಡ್ಯೂಕ್ (250 Duke) ಮೋಟಾರ್‌ಸೈಕಲ್‌ಗೆ ದೊಡ್ಡ ಮಟ್ಟದ ರಿಯಾಯಿತಿ ಘೋಷಣೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹೊಚ್ಚ ಹೊಸ ಕೆಟಿಎಂ 250 ಡ್ಯೂಕ್ (KTM 250 Duke) ಬೈಕ್ ವಿಶೇಷವಾದ ಹಣಕಾಸಿನ ಪ್ರಯೋಜನವನ್ನು ಹೊಂದಿದೆ. ಈ ಡಿಸೆಂಬರ್ 31 ರವರೆಗೆ ಮಾನ್ಯವಾಗಿರುವಂತೆ ರೂ.20,000 ರಿಯಾಯಿತಿ ನೀಡಲಾಗಿದೆ. ಇದರಿಂದ ರೂ.2.45 ಲಕ್ಷವಿದ್ದ ಈ ಮೋಟಾರ್‌ಸೈಕಲ್‌ ಬೆಲೆ ರೂ.2.25 ಲಕ್ಷ (ಎಕ್ಸ್ ಶೋರೂಂ) ಆಗಿದೆ.

KTM 250 Duke Bike Have Rs 20 000 Discount Till December 31 Details

ನೂತನ ಕೆಟಿಎಂ 250 ಡ್ಯೂಕ್ ಮೋಟಾರ್‌ಸೈಕಲ್‌, ಶಕ್ತಿಯುತವಾದ 248 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 31 ಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 25 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಈ ಬೈಕ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಎಲ್ಇಡಿ - ಹೆಡ್‌ಲ್ಯಾಂಪ್, ಪೈಲಟ್ ಲೈಟ್‌ಗಳು, 5-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬೈ-ಡೈರೆಕ್ಷನಲ್ ಕ್ವಿಕ್‌ಶಿಫ್ಟರ್, ಮತ್ತು ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

KTM 250 Duke Bike Have Rs 20 000 Discount Till December 31 Details

ಹೊಸ ಕೆಟಿಎಂ 250 ಡ್ಯೂಕ್ (KTM 250 Duke) ಮೋಟಾರ್‌ಸೈಕಲ್‌ ಮುಂಭಾಗ (ಫ್ರಂಟ್) ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಮುಂದೆ 320 ಎಂಎಂ ಮತ್ತು ಹಿಂದೆ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.

ಕೆಟಿಎಂ ಹಲವು ಜನಪ್ರಿಯ ಬೈಕ್‌ಗಳನ್ನು ಮಾರಾಟ ಮಾಡುತ್ತಿದೆ. ಅವುಗಳಲ್ಲಿ '200 ಡ್ಯೂಕ್' ಪ್ರಖ್ಯಾತ ಮೋಟಾರ್‌ಸೈಕಲ್‌ ಆಗಿ ಹೊರಹೊಮ್ಮಿದ್ದು, ರೂ.1.99 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇದು 199.5 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. 25 ಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 19.3 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ.

KTM 250 Duke Bike Have Rs 20 000 Discount Till December 31 Details

ಕೆಟಿಎಂ 125 ಡ್ಯೂಕ್ (KTM 125 Duke) ಮೋಟಾರ್‌ಸೈಕಲ್‌ ಕುರಿತಂತೆ ಹೇಳುವುದಾದರೆ, ಇದು ರೂ.1.81 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 14.5 ಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 12 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 46.92 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, December 2, 2024, 18:38 [IST]
English summary
Ktm 250 duke bike have rs 20000 discount till december 31 details
Read more on ktm india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+