ಬಸ್‌ನಲ್ಲಿ ಆಫೀಸ್‌ಗೆ ಹೋಗಲು ಬೇಸರವೇ, ತಡವೇಕೆ.. ಕಮ್ಮಿ ಬೆಲೆಯ ಈ ಬೈಕ್ ತಂದು ಬಿಡಿ, 70 Km ಮೈಲೇಜ್.. ಒಳ್ಳೆ ಫೀಚರ್ಸ್!
ಹೀರೋ ಮೋಟೊಕಾರ್ಪ್ (Hero MotoCorp), ನಂಬರ್ 1 ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಸ್ಪ್ಲೆಂಡರ್' ಮೋಟಾರ್‌ಸೈಕಲ್ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಈ ಬೈಕ್ ಗರಿಷ್ಠ ಮೈಲೇಜ್ ನೀಡುವುದರೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಪ್ರತಿನಿತ್ಯ ಕಚೇರಿಗೆ ಹೋಗಲು ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ತೆಗೆದುಕೊಳ್ಳಲು ಯೋಚಿಸಿದ್ದರೆ.. ಸ್ಪ್ಲೆಂಡರ್ ಉತ್ತಮವಾದ ಆಯ್ಕೆಯಾಗಲಿದೆ. ಇದು ಹಲವು ರೂಪದಲ್ಲೂ ಖರೀದಿದಾರರಿಗೆ ಲಭ್ಯವಾಗಲಿದೆ.
ಮೊದಲಿಗೆ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಬಗ್ಗೆ ಮಾತನಾಡೋಣ. ಈ ಬೈಕ್ ಕನಿಷ್ಠ ರೂ.76,356 ಹಾಗೂ ಗರಿಷ್ಠ ರೂ.79,336 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 97.2 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್ ಆಕರ್ಷಕವಾದ ಫೋರ್ಸ್ ಸಿಲ್ವರ್, ಬ್ಲ್ಯಾಕ್ ರೆಡ್ ಪರ್ಪಲ್ & ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಖರೀದಿಗೆ ದೊರೆಯುತ್ತದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ಸರಿ ಸುಮಾರು 112 ಕೆಜಿ ತೂಕವಿದ್ದು, 9.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ (Hero Splendor Plus XTEC) ಬೈಕ್ ಕುರಿತಂತೆ ಹೇಳುವುದಾದರೆ, ಇದು ರೂ.80,161 ರಿಂದ ರೂ.83,461 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಈ ಮೋಟಾರ್‌ಸೈಕಲ್, 97.2 ಸಿಸಿ ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8000 ಆರ್‌ಪಿಎಂನಲ್ಲಿ 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6000 ಆರ್‌ಪಿಎಂನಲ್ಲಿ 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ನೂತನ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಬೈಕ್ 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಎಲೆಕ್ಟ್ರಿಕ್ ಸ್ಟಾರ್ಟರ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್, ಅಲಾಯ್ ವೀಲ್‌ಗಳು ಮತ್ತು ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಕಡೆಯದಾಗಿ ಹೀರೋ ಸೂಪರ್ ಸ್ಪ್ಲೆಂಡರ್ (Hero Super Splendor) ಬಗ್ಗೆ ಮಾತನಾಡುವುದಾದರೆ, ಈ ಮೋಟಾರ್‌ಸೈಕಲ್ ರೂ.82,298 ರಿಂದ ರೂ.86,298 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಇದು 124.7 ಸಿಸಿ, ಏರ್-ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಪಡೆದಿದೆ. 7500 ಆರ್‌ಪಿಎಂನಲ್ಲಿ 10.7 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6000 ಆರ್‌ಪಿಎಂನಲ್ಲಿ 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಹೂತ್ತದೆ.

ಈ ಸೂಪರ್ ಸ್ಪ್ಲೆಂಡರ್ ಬೈಕ್ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಸೈಡ್-ಸ್ಟ್ಯಾಂಡ್ ಕಟ್-ಆಫ್ ಫಂಕ್ಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








