Hero: ಕಡಿಮೆ ದರ.. ದೀರ್ಘ ಬಾಳಿಕೆ.. ಭಾರೀ ಮೈಲೇಜ್.. ಎಲ್ಲ ವಯಸ್ಸಿನವರ ಅಚ್ಚುಮೆಚ್ಚಿನ ಸ್ಕೂಟರ್‌ಗಳಿವು
ದಿನನಿತ್ಯದ ಒಂದಲ್ಲ ಒಂದು ಕೆಲಸಗಳಿಗೆ ದ್ವಿಚಕ್ರ ವಾಹನಗಳು ಬೇಕೇ ಬೇಕು. ಆದರೆ, ಕೆಲವೊಬ್ಬರಿಗೆ ಯಾವ ಬೈಕ್ ಅಥವಾ ಸ್ಕೂಟರ್‌ನ್ನು ಖರೀದಿಸಬೇಕೆಂಬ ಗೊಂದಲವಿರುತ್ತದೆ. ಇಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯಲ್ಲಿ ಸಿಗುವ ಹೀರೋ ಕಂಪನಿಯ ಜೂಮ್, ಡೆಸ್ಟಿನಿ ಪ್ರೈಮ್, ಡೆಸ್ಟಿನಿ 125 ಹಾಗೂ ಪ್ಲೆಷರ್ ಪ್ಲಸ್ ಸ್ಕೂಟರ್‌ಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಹೀರೋ ಜೂಮ್ (Hero Xoom 110) ಸ್ಕೂಟರ್ ಕುರಿತು ಮಾತನಾಡೋಣ. ಇದು ರೂ.75,761 ದಿಂದ ರೂ.84,400 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 110.9 ಸಿಸಿ ಏರ್ ಕೂಲ್ಡ್, ಪ್ಯೂಯೆಲ್ ಇಂಜೆಕ್ಷನ್ ಎಂಜಿನ್ ಪಡೆದಿದ್ದು, 8.15 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 8.70 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಹೀರೋ ಜೂಮ್ 45 ಕೆಎಂಪಿಎಲ್ ಮೈಲೇಜ್ ನೀಡಲಿದ್ದು, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಪ್ರೊಜೆಕ್ಟರ್ ಎಲ್ಇಡಿ ಹೆಡ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ ಡಿಸ್ಕ್ ಅಥವಾ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ಹೀರೋ ಪ್ಲೆಷರ್ ಪ್ಲಸ್ (Hero Pleasure Plus) ಸ್ಕೂಟರ್ ರೂ.71,788 - ರೂ.83,918 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ 110.9 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್, 8.1 ಪಿಎಸ್ ಪವರ್ ಮತ್ತು 8.7 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 50 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

ಈ ಹೀರೋ ಪ್ಲೆಷರ್ ಪ್ಲಸ್ ಸ್ಕೂಟರ್ ಪರ್ಲ್ ಸಿಲ್ವರ್ ವೈಟ್, ಪೋಲೆಸ್ಟಾರ್ ಬ್ಲೂ, ಸ್ಪೋರ್ಟ್ ರೆಡ್, ಮ್ಯಾಟ್ ಮೆಡ್ ರೆಡ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಎಲೆಕ್ಟ್ರಿಕ್ ಸ್ಟಾರ್ಟರ್, ಎಲ್‌ಸಿಡಿ ಸ್ಕ್ರೀನ್, ಬ್ಲೂಟೂಟ್ ಕನೆಕ್ಟಿವಿಟಿ, ಎಲ್ಇಡಿ ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್ ಅನ್ನು ಹೊಂದಿದೆ.
ಹೀರೋ ಡೆಸ್ಟಿನಿ ಪ್ರೈಮ್ (Hero Destini Prime) ಸ್ಕೂಟರ್ ರೂ.76,518 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 125 ಸಿಸಿ ಸಿಂಗಲ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 9.09 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 10.36 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಬರೋಬ್ಬರಿ 56 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಹೀರೋ ಡೆಸ್ಟಿನಿ ಪ್ರೈಮ್ ಎಲ್‌ಇಡಿ ಡಿಆರ್‌ಎಲ್, ಹ್ಯಾಲೊಜೆನ್ ಹೆಡ್ ಲ್ಯಾಂಪ್ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬೂಟ್ ಲೈಟ್, ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದ್ದು, ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ. 115 ಕೆಜಿ ತೂಕವಿರುವ ಈ ಸ್ಕೂಟರ್, 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್ ಅನ್ನು ಹೊಂದಿದೆ.

ಹೀರೋ ಡೆಸ್ಟಿನಿ 125 (Hero Destini 125) ಸ್ಕೂಟರ್ ರೂ.81,718 ದಿಂದ ರೂ.87,518 ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. 124.6 ಸಿಸಿ ಎಂಜಿನ್ ಹೊಂದಿದ್ದು, 9.10 ಪಿಎಸ್ ಪವರ್ ಮತ್ತು 10.4 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 50 ಕೆಎಂಪಿಎಲ್ ಮೈಲೇಜ್ ಕೊಡಲಿದ್ದು, ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








