Ather - Ola - Simple Energy: ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತವೆ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು, ಹೆಚ್ಚು ದೂರ ಹೋಗಬಲ್ಲವು!

ದೇಶದಲ್ಲಿ ಕಳೆದ ಎರಡು ವರ್ಷದಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ವಿಪರೀತ ಪ್ರಮಾಣದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಅದರಲ್ಲೂ ಬೆಂಗಳೂರು (Bengaluru) ಮೂಲದ ಓಲಾ (Ola), ಎಥರ್ (Ather), ಮತ್ತು ಸಿಂಪಲ್ ಎನರ್ಜಿ (Simple Energy) ಮಾರಾಟಗೊಳಿಸುವ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ಕಡಿಮೆ ಬೆಲೆಗೆ ದೊರೆಯುವ ಎಥರ್ 450ಎಸ್ (Ather 450S) ಇ-ಸ್ಕೂಟರ್ ಬಗ್ಗೆ ಮಾತನಾಡೋಣ. ಇತ್ತೀಚೆಗೆ ಈ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ರೂ.20,000 ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ರೂ.1.09 ಲಕ್ಷ ಹಾಗೂ ದೆಹಲಿಯಲ್ಲಿ ರೂ. 97,500 ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇದರಲ್ಲಿ 2.9 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಉಪಯೋಗಿಸಲಾಗಿದ್ದು, ಪೂರ್ತಿ ಚಾರ್ಜ್ ನಲ್ಲಿ 115 ಕಿ.ಮೀ ರೇಂಜ್ ಕೊಡುತ್ತದೆ.

Ather - Ola - Simple Energy

ಎಥರ್ 450ಎಸ್ ಎಲೆಕ್ಟ್ರಿಕ್ ಸ್ಕೂಟರ್ ಕೇವಲ 3.9 ಸೆಕೆಂಡುಗಳಲ್ಲಿ 0-40 kmph ವೇಗವನ್ನು ಪಡೆಯಲಿದ್ದು, 90 kmph ಟಾಪ್ ಸ್ವೀಡ್ ಹೊಂದಿದೆ. ಮನೆಯ ವಿದ್ಯುತ್ ಬಳಕೆಯಲ್ಲಿ ಈ ಸ್ಕೂಟರ್ ಬ್ಯಾಟರಿ ಪ್ಯಾಕ್ ಶೇಕಡ 0-80% ಚಾರ್ಜ್ ಆಗಲು 6 ಗಂಟೆ 36 ನಿಮಿಷ ತೆಗೆದುಕೊಳ್ಳುತ್ತದೆ. 7-ಇಂಚಿನ ಡೀಪ್‌ವ್ಯೂ ಡಿಸ್‌ಪ್ಲೇ,ಸ್ಮಾರ್ಟ್ಇಕೋ, ಇಕೋ, ರೈಡ್, ಸ್ಪೋರ್ಟ್ ಎಂಬ ರೈಡಿಂಗ್ ಮೋಡ್ ಆಯ್ಕೆಯನ್ನು ಒಳಗೊಂಡಿದೆ.

ಓಲಾ ಎಸ್1 ಎಕ್ಸ್ (Ola S1 X), ಬೆಂಗಳೂರಿನಲ್ಲಿ ರೂ.1,01,697 ಆನ್-ರೋಡ್ ಬೆಲೆಯನ್ನು ಪಡೆದಿದೆ ಎಂಬ ವಿವರಗಳು ಲಭಿಸಿವೆ. ಈ ಎಲೆಕ್ಟ್ರಿಕ್ ಸ್ಕೂಟರ್, 3 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 151 ಕಿ.ಮೀ ರೇಂಜ್ ನೀಡುತ್ತದೆ. 90 kmph ಟಾಪ್ ಸ್ವೀಡ್ ಒಳಗೊಂಡಿದೆ. ಕೇವಲ 3.3 ಸೆಕೆಂಡುಗಳಲ್ಲಿ 0 - 40 kmph ವೇಗವನ್ನು ಪಡೆಯಲಿದೆ.

Ather - Ola - Simple Energy

ಈ ಎಲೆಕ್ಟ್ರಿಕ್ ಸ್ಕೂಟರ್, 5-ಇಂಚಿನ ಎಲ್‌ಸಿಡಿ ಡಿಸ್ಪ್ಲೇ, ಎಲ್ಇಡಿ ಲೈಟಿಂಗ್, ಸೈಡ್-ಸ್ಟ್ಯಾಂಡ್ ಅಲರ್ಟ್, ರಿವರ್ಸ್ ಮೋಡ್, ರಿಮೋಟ್ ಬೂಟ್ ಅನ್ಲಾಕ್, ನ್ಯಾವಿಗೇಷನ್, ಒಟಿಎ ಅಪ್ಡೇಟ್, ಬ್ಲೂಟೂತ್ ಮತ್ತು ಜಿಪಿಎಸ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಜೊತೆಗೆ ಫ್ರಂಟ್, ರೇರ್ ಡ್ರಮ್ ಬ್ರೇಕ್‌ ಆಯ್ಕೆಯನ್ನು ಪಡೆದಿದೆ.

ಬೆಂಗಳೂರಿನ ಸಿಂಪಲ್ ಡಾಟ್ ಒನ್ (Simple Dot One) ಎಲೆಕ್ಟ್ರಿಕ್ ಸ್ಕೂಟರ್, ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿತ್ತು. ರೂ.1.39,999 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ಜನವರಿ 27 ರಿಂದ ಪ್ರಿ-ಬುಕ್ಕಿಂಗ್ ಆರಂಭವಾಗಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 3.7 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಉಪಯೋಗಿಸಲಾಗಿದ್ದು, ಪೂರ್ತಿ ಚಾರ್ಜ್ ನಲ್ಲಿ 151 ಕಿಲೋಮೀಟರ್ ರೇಂಜ್ ಕೊಡುತ್ತದೆ.

Ather - Ola - Simple Energy

ಈ ಸಿಂಪಲ್ ಡಾಟ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಕೆಲವೇ 2.7 ಸೆಕೆಂಡುಗಳಲ್ಲಿ 0 - 40 kmph ವೇಗವನ್ನು ಪಡೆಯಲಿದ್ದು, ಮುಂಭಾಗ ಹಾಗೂ ಹಿಂಭಾಗ 12 - ಇಂಚಿನ ಅಲಾಯ್ ವೀಲ್ಸ್, ಟ್ಯೂಬ್‌ಲೆಸ್ ಟೈಯರ್ಸ್, CBS (ಕಾಂಬಿ ಬ್ರೇಕಿಂಗ್ ಸಿಸ್ಟಮ್), ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. 7.0-ಇಂಚಿನ ಟಚ್‌ಸ್ಕ್ರೀನ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, January 15, 2024, 9:30 [IST]
English summary
Low price best range electric scooter in karnataka ather 450s ola s1x simple dot one
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+