ಇದು ಉತ್ತಮ ಕಾರು ಆದ್ರೆ ಯಾರೂ ಖರೀದಿಸುತ್ತಿಲ್ಲ! ಅಗ್ಗದ ಬೆಲೆಯಾದರು ಮಾರಾಟದಲ್ಲಿ ಕುಸಿತ
ಮಾರುತಿ ಸುಜುಕಿಯಿಂದ ಭಾರೀ ನಿರೀಕ್ಷೆಗಳೊಂದಿಗೆ ಬಿಡುಗಡೆಯಾದ ಜಿಮ್ನಿ, ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಕೆಲವೇ ತಿಂಗಳಲ್ಲಿ ಸದ್ದಿಲ್ಲದೇ ಮರೆಯಾಗಿಬಿಟ್ಟಿದೆ. ವಿಶೇಷವಾಗಿ ಆಫ್‌ರೋಡ್ ಪ್ರಿಯರಿಗಾಗಿ ಈ ವಾಹನವನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಯಿತು. ಆದ್ರೆ ಅಂದುಕೊಂಡ ಮಟ್ಟಕ್ಕೆ ಇದು ಯಶಸ್ಸು ಕಾಣಲಿಲ್ಲ. ಎದುರಾಳಿ ಮಹೀಂದ್ರಾ ಥಾರ್ ಮುಂದೆ ಇದು ಮಂಕಾಗಿಬಿಟ್ಟಿದೆ. ಮಾರಾಟದಲ್ಲಿ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಕುಸಿತವನ್ನು ಕಂಡಿದೆ. ಒಂದು ಕಾಲದ ಆಫ್-ರೋಡ್ ಕಿಂಗ್ ಜಿಪ್ಸಿಯ ಸ್ಥಾನವನ್ನು ತುಂಬಲು ಎಂಟ್ರಿಕೊಟ್ಟಿತಾದರೂ, ದೊಡ್ದ ಮಟ್ಟದ ಯಶಸ್ವಿಯನ್ನು ಕಂಡಿಲ್ಲ.
ಮಾರುತಿ ಸುಜುಕಿ ಜಿಮ್ನಿ ದೇಶದ ಅತ್ಯಂತ ಸಮರ್ಥ ಆಫ್-ರೋಡರ್‌ಗಳಲ್ಲಿ ಒಂದಾಗಿದೆ. ಆದರೆ ಇದು ಆಫ್-ರೋಡ್ ವಾಹನ ಪ್ರೇಮಿಗಳನ್ನು ಸೆಲೆಯುವಲ್ಲಿ ಮಾತ್ರ ಯಶಸ್ವಿಯಾಗುತ್ತಿಲ್ಲ. ಉತ್ತಮ ಫೀಚರ್‌ಗಳು, ಕಡುಮೆ ಬೆಲೆ, ಆಧುನಿಕ ವಿನ್ಯಾಸವಿದೆ. ಹಲವರಿಗೆ ಈ ಕಾರಿನ ಬಗ್ಗೆ ತಿಳಿಯದ ಪ್ರಮುಖ ವಿಷಗಳನ್ನು ತಿಳಿಸಲೆಂದೇ ಈ ಲೇಖನ ನಿಮ್ಮ ಮುಂದಿಟ್ಟಿದ್ದೇವೆ.

ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಅದಕ್ಕೆ ತಕ್ಕಂತೆಯೇ ವಿನ್ಯಾಸವನ್ನು ಹೊಂದಿದೆ. ಇದರ ಫ್ರಂಟ್ ಲುಕ್ ನೋಡುಗರನ್ನು ಬಾಕ್ಸಿ ವಿನ್ಯಾಸ ಹಾಗೂ ಸ್ಪೋರ್ಟಿ ಲುಕ್‌ನೊಂದಿಗೆ ಸೆಳೆಯುತ್ತದೆ. ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. ಈ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ.
ಇದರ ಸಣ್ಣ ಬಾಡಿ ರಚನೆಯು ಟ್ರಾಫಿಕ್ ಇರುವ ರಸ್ತೆಗಳಲ್ಲಿಯೂ ಚಾಲನೆ ಮಾಡಲು ಸುಲಭವಾಗಿಸುತ್ತದೆ. ಇದರ ಹೊರತಾಗಿ, ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ. ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ. ಹಾಗಾಗಿ ಮಾರುತಿ ಸುಜುಕಿ ಜಿಮ್ನಿಯನ್ನು ಪ್ರತಿಸ್ಪರ್ಧಿಗಳಾದ ಥಾರ್ ಮತ್ತು ಗೂರ್ಖಾಗೆ ಹೋಲಿಸಿದರೆ ಡ್ರೈವ್ ಮಾಡಲು ಹೆಚ್ಚು ಸುಲಭವಾಗಿದೆ.

ಮಾರುತಿ ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಆಟೋಮ್ಯಾಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ. ಹಾಗೆಯೇ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಹೊಂದಿದೆ. ಇದರೊಂದಿಗೆ 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.
ಮಹೀಂದ್ರಾ ಥಾರ್‌ಗೆ ಹೋಲಿಸಿದರೆ ಜಿಮ್ನಿ ದೈನಂದಿನ ಬಳಕೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದೆ. ಈ ಮಾರುತಿ ಸುಜುಕಿ ಜಿಮ್ನಿಯಲ್ಲಿ ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದೆ. ಇದು 104.8 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 134.2 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

5 ಸ್ಪೀಡ್ ಮ್ಯಾನುವಲ್/ 4 ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 16.39 ರಿಂದ 16.94 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇವಿಷ್ಟು ಮಾರುತಿ ಸುಜುಕಿ ಜಿಮ್ನಿ ಕಾರಿನ ಪ್ರಮುಖ ವಿಷಯಗಳಾಗಿವೆ. ಈ ಸಣ್ಣ ಆಫ್‌ರೋಡ್ ಕಾರಿನ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಮೆಂಟ್‌ನಲ್ಲಿ ತಿಳಿಸಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications